Taj Mahal: ತಾಜ್ ಮಹಲ್‌ಗೆ ಬಾಂಬ್ ಬೆದರಿಕೆ; ಆಗ್ರಾ ಪೊಲೀಸರಿಂದ ಬಿಗಿ ಭದ್ರತೆ

ವಿಶ್ವವಿಖ್ಯಾತ ತಾಜ್ ಮಹಲ್​ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆಗ್ರಾ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ತಾಜ್ ಮಹಲ್ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಮೇಲ್ ಮೂಲಕ ಬೆದರಿಕೆ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಮೇಲ್ ಸ್ವೀಕರಿಸಿದ ಕೂಡಲೇ ಭದ್ರತಾ ಅಧಿಕಾರಿಗಳು ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್ ಮಹಲ್ ಸ್ಮಾರಕದ ಮೂಲೆ ಮೂಲೆಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.

Taj Mahal: ತಾಜ್ ಮಹಲ್‌ಗೆ ಬಾಂಬ್ ಬೆದರಿಕೆ; ಆಗ್ರಾ ಪೊಲೀಸರಿಂದ ಬಿಗಿ ಭದ್ರತೆ
ತಾಜ್ ಮಹಲ್
Follow us
ಸುಷ್ಮಾ ಚಕ್ರೆ
|

Updated on: Dec 03, 2024 | 5:29 PM

ಆಗ್ರಾ: ಆಗ್ರಾದ ತಾಜ್‌ಮಹಲ್‌ನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ನಂತರ ಅದು ಸುಳ್ಳು ಕರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗ್ರಾದ ತಾಜ್ ಮಹಲ್‌ಗೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. “ಪ್ರವಾಸೋದ್ಯಮ ಇಲಾಖೆಗೆ ಇಮೇಲ್ ಬಂದಿದೆ. ಅದರ ಆಧಾರದ ಮೇಲೆ ತಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಂಡ ಮತ್ತು ಸ್ಥಳೀಯ ಪೊಲೀಸರು ಮೊಘಲ್ ಸ್ಮಾರಕವಾದ ತಾಜ್ ಮಹಲ್​ಗೆ ಧಾವಿಸಿ ದೇಶದ ಪ್ರಮುಖ ಪ್ರವಾಸಿ ಸ್ಥಳದ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಗ್ರಾದಲ್ಲಿರುವ ಉತ್ತರ ಪ್ರದೇಶ ಪ್ರವಾಸೋದ್ಯಮದ ಪ್ರಾದೇಶಿಕ ಕಚೇರಿಗೆ ಮಂಗಳವಾರ ತಾಜ್‌ಮಹಲ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದಿದ್ದು, ನಂತರ ಅದು ಸುಳ್ಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ತಾಜ್​ಮಹಲ್​ನ ಶಿವ ದೇವಾಲಯವೆಂದು ಕರೆದು ಗಂಗಾಜಲ ಸಿಂಪಡಿಸಲು ಹೋಗಿದ್ದ ಮಹಿಳೆ

ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳನ್ನು ಸೇವೆಗೆ ಕರೆದೊಯ್ದರೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ತಾಜ್‌ ಮಹಲ್​ನ ಭದ್ರತೆಯನ್ನು ವಹಿಸಿರುವ ಎಸಿಪಿ ತಿಳಿಸಿದ್ದಾರೆ.

“ತಾಜ್ ಮಹಲ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಉತ್ತರ ಪ್ರದೇಶ ಪ್ರವಾಸೋದ್ಯಮ ಕಚೇರಿಗೆ ಬಂದಿದೆ. ಇಮೇಲ್ ಪ್ರಕಾರ ನಮಗೆ ಏನೂ ಸಿಕ್ಕಿಲ್ಲ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳು ಸುರಕ್ಷತಾ ಪರಿಶೀಲನೆಗಾಗಿ ತಾಜ್ ಮಹಲ್ ತಲುಪಿವೆ” ಎಂದು ಅವರು ಹೇಳಿದ್ದಾರೆ.

ತಾಜ್ ಮಹಲ್ ಅನ್ನು ವಿಶ್ವದ 7 ಅದ್ಭುತಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹಜಹಾನ್ 1648ರಲ್ಲಿ ತನ್ನ ಪತ್ನಿ ಮುಮ್ತಾಜ್ ಮಹಲ್ ನೆನಪಿಗಾಗಿ ನಿರ್ಮಿಸಿದನು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ