AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

ತಮಿಳುನಾಡಿನ ಜನರು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಸ್ವಾಗತಿಸಿದ್ದಾರೆ. ಎತ್ತು ಮತ್ತು ಯುವಜನರಿಬ್ಬರೂ ಸುರಕ್ಷತೆಯಿಂದ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ತಮಿಳುನಾಡಿನ ಸಂಸ್ಕೃತಿ ರಕ್ಷಣೆಗೆ ಸದಾ ಬದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ  ಅತ್ಯವಶ್ಯಕ: ರಾಹುಲ್ ಗಾಂಧಿ
ತಮಿಳುನಾಡಿಗೆ ಆಗಮಿಸಿದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ
guruganesh bhat
| Edited By: |

Updated on:Jan 14, 2021 | 2:25 PM

Share

ಚೆನ್ನೈ: ತನ್ನದೇ ಪ್ರತ್ಯೇಕ ಭಾಷೆ, ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿರುವ ತಮಿಳುನಾಡನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ ಎಂದು ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಮಕರ ಸಂಕ್ರಾಂತಿಯಂದು ಮಧುರೈನಲ್ಲಿ ನಡೆದ ಜಲ್ಲಿಕಟ್ಟು ಉತ್ಸವದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡ ಅವರು, ಯಾರಿಂದಲೂ ತಮಿಳು ಸಂಸ್ಕೃತಿಗೆ ಘಾಸಿ ತರಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶ ರವಾನಿಸಲು ತಮಿಳುನಾಡಿಗೆ ಭೇಟಿಯಿತ್ತಿದ್ದೇನೆ ಎಂದು ಘೋಷಿಸಿದರು.

ತಮಿಳುನಾಡಿನ ಜನರ ಪ್ರೀತಿಗೆ ಋಣಿ ತಮಿಳುನಾಡಿನ ಜನರು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಸ್ವಾಗತಿಸಿದ್ದಾರೆ. ಅವರ ಪ್ರೀತಿಗೆ ಋಣಿಯಾಗಿದ್ದೇನೆ. ಎತ್ತು ಮತ್ತು ಯುವಜನರಿಬ್ಬರೂ ಸುರಕ್ಷತೆಯಿಂದ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ತಮಿಳುನಾಡಿನ ಸಂಸ್ಕೃತಿ ರಕ್ಷಣೆಗೆ ಸದಾ ಬದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಈ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಲಾಭವಾಗಬಹುದಾದ ಎಲ್ಲ ಅವಕಾಶಗಳನ್ನೂ ರಾಜಕೀಯ ಪಕ್ಷಗಳು ಉಪಯೋಗಿಸಿಕೊಳ್ಳುತ್ತಿವೆ. ಆರ್​ಎಸ್​ಎಸ್​ ಸರ ಸಂಘಚಾಲಕ ಮೋಹನ್ ಭಾಗವತ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಮಿಳುನಾಡಿನಲ್ಲಿ ಮಕರ ಸಂಕ್ರಾಂತಿ ಆಚರಿಸುತ್ತಿದ್ದಾರೆ.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

Published On - 2:25 pm, Thu, 14 January 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ