AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ

ತಮಿಳುನಾಡಿನ ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ
ಸ್ಫೋಟ
ನಯನಾ ರಾಜೀವ್
|

Updated on:Sep 01, 2024 | 10:29 AM

Share

ತಮಿಳುನಾಡಿನ ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದು, ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಮುಖ್ಯಮಂತ್ರಿಗಳು ತಲಾ 1 ಲಕ್ಷ ರೂ. ಘೋಷಿಸಿದ್ದಾರೆ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು ಪಶ್ಚಿಮ ಬಂಗಾಳ(West Bengal)ದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ.

ಕೆಲ ತಿಂಗಳಿಂದ ಕಾರ್ಖಾನೆ ಅಕ್ರಮ ನಡೆಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಸ್ಥಳಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಡಳಿತವು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಬಿಡುಗಡೆ ಮಾಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:26 am, Sun, 1 September 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ