ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ

|

Updated on: Sep 01, 2024 | 10:29 AM

ತಮಿಳುನಾಡಿನ ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ
ಸ್ಫೋಟ
Follow us on

ತಮಿಳುನಾಡಿನ ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದು, ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಮುಖ್ಯಮಂತ್ರಿಗಳು ತಲಾ 1 ಲಕ್ಷ ರೂ. ಘೋಷಿಸಿದ್ದಾರೆ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು
ಪಶ್ಚಿಮ ಬಂಗಾಳ(West Bengal)ದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ.

ಕೆಲ ತಿಂಗಳಿಂದ ಕಾರ್ಖಾನೆ ಅಕ್ರಮ ನಡೆಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಸ್ಥಳಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಡಳಿತವು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಬಿಡುಗಡೆ ಮಾಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:26 am, Sun, 1 September 24