AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಲುಷಿತ ನೀರು ಸೇವಿಸಿ ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮಿಳುನಾಡು: ಕಲುಷಿತ ನೀರು ಸೇವಿಸಿ ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಕಲುಷಿತ ನೀರುImage Credit source: Eureka Forbes
ನಯನಾ ರಾಜೀವ್
|

Updated on: Dec 06, 2024 | 10:10 AM

Share

ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಾಂತ್ವನ ಹೇಳಿದ ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯನ್, ನೀರಿನ ಮಾದರಿಗಳನ್ನು ವಿವರವಾಗಿ ವಿಶ್ಲೇಷಿಸಲಾಗುತ್ತಿದೆ, ಆ ನೀರನ್ನು ಕಿಂಗ್ ಇನ್‌ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್ ಮತ್ತು ರಿಸರ್ಚ್‌ಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಫಲಿತಾಂಶ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಸಚಿವ ಸುಬ್ರಮಣಿಯನ್ ಹೇಳಿದ್ದಾರೆ. ಮೃತರನ್ನು 56 ವರ್ಷದ ತಿರುವೀತಿ, 42 ವರ್ಷದ ಮೋಹನರಂಗಂ ಮತ್ತು 88 ವರ್ಷದ ವರಲಕ್ಷ್ಮಿ ಎಂದು ಗುರುತಿಸಲಾಗಿದೆ.

ಪಲ್ಲಾವರಂ ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಗೆ ಕೊಳಚೆ ನೀರು ಸೇರಿಕೊಂಡು ಕುಡಿಯುವ ನೀರು ಕಲುಷಿತಗೊಂಡಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ. ರೋಗಿಗಳಿಗೆ ಸಾಂತ್ವನ ಹೇಳಲು ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಎಂಎಸ್‌ಎಂಇ ಸಚಿವ ಟಿ.ಎಂ.ಅನ್ಬರಸನ್, ನೀರು ಕಲುಷಿತವಾಗಿದೆ ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ, ಅನಾರೋಗ್ಯಕ್ಕೆ ವಿಷಕಾರಿ ಆಹಾರ ಕಾರಣವಾಗಿರಬಹುದು ಎಂದು ಹೇಳಿದರು.

ಮತ್ತಷ್ಟು ಓದಿ: ಹಾಸನ: ಕಲುಷಿತ ಆಹಾರ ಸೇವಿಸಿ ಮೃತಪಟ್ಟ ದಂಪತಿ ಮೃತ್ಯು ರಹಸ್ಯ ಬಯಲು, ತಂದೆ-ತಾಯಿಗೆ ವಿಷ ಹಾಕಿದ ಮಗ

ಪಲ್ಲಾವರಂನ ಕಾಮರಾಜ್ ನಗರ ಮತ್ತು ಮನಲ್‌ಮೇಡು ನಿವಾಸಿಗಳು ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದು ತಾಂಬರಂನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾರೆ.

ಈ ಅವಧಿಯಲ್ಲಿ ಒಟ್ಟು 34 ವ್ಯಕ್ತಿಗಳು ದಾಖಲಾಗಿದ್ದು, 14 ಮಂದಿ ಬಿಡುಗಡೆಯಾಗಿದ್ದು, 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು