AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Road Accident: ತಮಿಳುನಾಡಿನ ತಿರುತ್ತಣಿಯಲ್ಲಿ ಭಾರೀ ರಸ್ತೆ ಅಪಘಾತ, ಐವರು ವಿದ್ಯಾರ್ಥಿಗಳು ಸಾವು

ತಮಿಳುನಾಡಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಅಸುನೀಗಿದ್ದಾರೆ. ಪೊಲೀಸರ ಪ್ರಕಾರ, ಒಟ್ಟು ಏಳು ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್​ ಒಂದು ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಸುದ್ದಿ ಹೊರಬಿದ್ದ ನಂತರ ರಕ್ಷಣಾ ತಂಡಗಳು ಮತ್ತು ಕನಗಮ್ಮಛತ್ರಂ ಪೊಲೀಸರು ಘಟನಾ ಸ್ಥಳಕ್ಕೆ ಬಂದಿದ್ದಾರೆ.

Tamil Nadu Road Accident: ತಮಿಳುನಾಡಿನ ತಿರುತ್ತಣಿಯಲ್ಲಿ ಭಾರೀ ರಸ್ತೆ ಅಪಘಾತ, ಐವರು ವಿದ್ಯಾರ್ಥಿಗಳು ಸಾವು
ಅಪಘಾತ
ನಯನಾ ರಾಜೀವ್
| Edited By: |

Updated on:Aug 12, 2024 | 11:41 AM

Share

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರ ಪ್ರಕಾರ, ಒಟ್ಟು ಏಳು ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್​ ಒಂದು ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ರಸ್ತೆ ಅಪಘಾತದ ಸುದ್ದಿ ಹೊರಬಿದ್ದ ನಂತರ ರಕ್ಷಣಾ ತಂಡಗಳು ಮತ್ತು ಕನಗಮ್ಮಛತ್ರಂ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದರು. ಅಪಘಾತದಲ್ಲಿ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರಿಂದ ದೇಹಗಳನ್ನು ಹೊರತೆಗೆಯುವುದು ಸವಾಲಿನ ಕೆಲಸವಾಗಿತ್ತು.

ಗಾಯಗೊಂಡ ಇಬ್ಬರನ್ನು ತಕ್ಷಣ ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಕನಗಮ್ಮಛತ್ರಂ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತಕ್ಕೀಡಾದ ಐವರು ವಿದ್ಯಾರ್ಥಿಗಳು ಓಂಗೋಲ್ ಮೂಲದವರಾಗಿದ್ದು, ಚೆನ್ನೈನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಾರೆ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು

ಚೆನ್ನೈನ ಖಾಸಗಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳು ಮತ್ತು ಚಾಲಕ ಸೇರಿದಂತೆ ಎಂಟು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿರುವಣ್ಣಾಮಲೈ ಮತ್ತು ಆಂಧ್ರಪ್ರದೇಶದ ದೇವಸ್ಥಾನಗಳಿಗೆ ಭೇಟಿ ನೀಡಿ ಚೆನ್ನೈಗೆ ಹಿಂತಿರುಗುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಐವರು ವಿದ್ಯಾರ್ಥಿಗಳು ತಕ್ಷಣ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಕುರ್ದನ್ (21), ಯುಕೇಶ್, ನಿತೀಶ್, ನಿತೀಶ್ ವರ್ಮಾ ಮತ್ತು ರಾಮ್‌ಕೋಮನ್ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಾದ ಚೈತನ್ಯ (21) ಮತ್ತು ವಿಷ್ಣು (21) ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಚೆನ್ನೈನ ಎಸ್‌ಆರ್‌ಎಂ ಕಾಲೇಜಿನಲ್ಲಿ ಸಿಎಸ್‌ಸಿ ಡೇಟಾ ಸೈನ್ಸ್ ಮೂರನೇ ವರ್ಷದಲ್ಲಿ ಓದುತ್ತಿದ್ದರು.

ಅಪಘಾತದ ತನಿಖೆ ಮುಂದುವರಿದಿದೆ ಎಂದು ಕೆಕೆ ಛತ್ರಂ ಪೊಲೀಸರು ಖಚಿತಪಡಿಸಿದ್ದಾರೆ. ಅಪಘಾತದ ಕಾರಣ ಇನ್ನೂ ಪರಿಶೀಲನೆಯಲ್ಲಿದೆ, ಪ್ರಾಥಮಿಕ ಸಂಶೋಧನೆಗಳು ಲಾರಿಗೆ ಡಿಕ್ಕಿ ಹೊಡೆಯುವ ಮೊದಲು ವಾಹನದ ನಿಯಂತ್ರಣ ಕಳೆದುಕೊಂಡ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:23 am, Mon, 12 August 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!