AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ, 4 ಮಂದಿ ಸಾವು

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತಮಿಳುನಾಡು: ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ, 4 ಮಂದಿ ಸಾವು
ಕಾರುImage Credit source: India Today
ನಯನಾ ರಾಜೀವ್
|

Updated on: Feb 22, 2024 | 1:59 PM

Share

ಟ್ರ್ಯಾಕ್ಟರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಚಾಲಕ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಗುರುವಾರ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.  ಆಂಧ್ರಪ್ರದೇಶ ನೋಂದಣಿಯ ಮಾರುತಿ ಸ್ವಿಫ್ಟ್ ಕಾರು ಕೆಳಪೆನ್ನತ್ತೂರು ಕಡೆಗೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಎಲ್ಲಾ ನಾಲ್ವರು ಅಳಗನ್, ಪಾಂಡಿಯನ್, ಪ್ರಕಾಶ್ ಮತ್ತು ಚಿರಂಜೀವಿ-ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಟ್ರಾಕ್ಟರ್ ಚಾಲಕನ ಕೈ ಮುರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತದೇಹಗಳನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ.

ತೆಲಂಗಾಣ: ಮರಕ್ಕೆ ಕಾರು ಡಿಕ್ಕಿ, 3 ಮಂದಿ ಸಾವು ರಭಸದಿಂದ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮತ್ತಷ್ಟು ಓದಿ: ಚನ್ನಪಟ್ಟಣ: ಬೈರಾಪಟ್ಟಣದ ಬಳಿ ಲಾರಿ, ಟಿಟಿ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು

ಪೊಲೀಸ್​ ಅಧಿಕಾರಿ ಫೆಬ್ರವರಿ 15 ರಂದು ಅಂದರೆ ಒಂದು ವಾರದ ಹಿಂದೆ ಮದುವೆಯಾದ ಅವರ ಮಗಳು ಹಾಗೂ ಅಳಿಯನನ್ನು ಔತಣಕೂಟಕ್ಕೆ ಕರೆದೊಯ್ಯುತ್ತಿದ್ದರು. ಅಪಘಾತದಲ್ಲಿ ತೀವ್ರ ಗಾಯಗೊಂಡು ಮಹಬೂಬ್‌ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರು ನಂದ್ಯಾಲ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ವೆಂಕಟರಮಣ (57), ಅವರ ಅಳಿಯ ಪವನ್ ಸಾಯಿ (25), ಚಾಲಕ ಚಂದ್ರು (23).

ಕುಟುಂಬವು ಹೈದರಾಬಾದ್‌ನಿಂದ ಅನಂತಪುರಕ್ಕೆ ತೆರಳುತ್ತಿತ್ತು, ಅಲ್ಲಿ ಅವರು ಪವನ್ ಸಾಯಿ ಅವರ ನಿವಾಸದಲ್ಲಿ ಔತಣಕೂಟದಲ್ಲಿ ಭಾಗವಹಿಸಿದ್ದರು. ಅವರ ಮಾರುತಿ ಸ್ವಿಫ್ಟ್ ಡಿಜೈರ್ ಅವರು ಅಣ್ಣಾಸಾಗರ್ ಪ್ರದೇಶವನ್ನು ತಲುಪಿದಾಗ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!