ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಗರದ ಹಿಲ್‌ಫೋರ್ಟ್ ಮೆಟ್ರಿಕ್ಯುಲೇಷನ್ ಶಾಲೆಯ ವಿದ್ಯಾರ್ಥಿನಿ ಲಯಾ ಮನೆಯ ಬಳಿ ಶಾಲಾ ವ್ಯಾನ್ನಿಂದ ಇಳಿದಿದ್ದಳು. ಪೊಲೀಸರ ಪ್ರಕಾರ, ಚಾಲಕ ತ್ಯಾಗರಾಜನ್ ಬಾಲಕಿಯನ್ನು ಗಮನಿಸದೆ ವಾಹನವನ್ನು ಹಿಮ್ಮುಖಗೊಳಿಸಿದಾಗ ಶಾಲಾ ವ್ಯಾನ್‌ನ ಒಂದು ಚಕ್ರದ ಕೆಳಗೆ ಬಿದ್ದಿದ್ದಾಳೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಈ ಹಿಂದೆ, ತಮಿಳುನಾಡಿನ ಭವಾನಿಯಲ್ಲಿ ಇದೇ ರೀತಿಯ ಘಟನೆಯಲ್ಲಿ, 8 ನೇ ತರಗತಿಯ ವಿದ್ಯಾರ್ಥಿ ಬಸ್‌ನಿಂದ ಕೆಳಗೆ ಬಿದ್ದ ಬಳಿಕ ಆ ಬಾಲಕ ಪ್ರಯಾಣಿಸುತ್ತಿದ್ದ ಶಾಲಾ ಬಸ್ ಬಾಲಕನ ಮೇಲೆ ಹರಿದು ಸಾವನ್ನಪ್ಪಿದ್ದ.
ವಿಶಾಖಪಟ್ಟಣಂನಲ್ಲಿ ಶಾಲಾ ಮಕ್ಕಳಿದ್ದ ಆಟೋ ಅಪಘಾತ
ಆಟೋವೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮತ್ತಷ್ಟು ಓದಿ: ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವೇಗವಾಗಿ ಬರುತ್ತಿದ್ದ ಲಾರಿಗೆ ಆಟೋ ನೇರವಾಗಿ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ, ಪಲ್ಟಿಯಾಗಿ 2-3 ಮಕ್ಕಳು ವಾಹನದಿಂದ ಹೊರಗೆ ಬಿದ್ದಿದ್ದರು, ಇನ್ನೂ ಕೆಲವರು ಆಟೋದಲ್ಲೇ ಸಿಲುಕಿದ್ದರು. ಅಪಘಾತ ಸಂಭವಿಸಿದ ಸ್ಥಳದಿಂದ 100 ಮೀಟರ್ ಮುಂದೆ ಲಾರಿ ಚಾಲಕ ತನ್ನ ವಾಹನವನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ