AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Accident: ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ಲಾರಿಗೆ ಬಸ್ ಡಿಕ್ಕಿ; 6 ಜನ ಸಾವು, 10 ಮಂದಿಗೆ ಗಾಯ

ಐರನ್​ ವೈರ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಓವರ್​ಟೇಕ್ ಮಾಡಲು ಹೋದ ಸರ್ಕಾರಿ ಬಸ್​ ಅನ್ನು ತಪ್ಪಿಸಲು ಹೋಗಿ ಲಾರಿ ಎಡಕ್ಕೆ ಪಲ್ಟಿ ಹೊಡೆದಿದೆ. ಈ ಅಪಘಾತದಲ್ಲಿ 6 ಜನ ಮೃತಪಟ್ಟಿದ್ದಾರೆ.

Tamil Nadu Accident: ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ಲಾರಿಗೆ ಬಸ್ ಡಿಕ್ಕಿ; 6 ಜನ ಸಾವು, 10 ಮಂದಿಗೆ ಗಾಯ
ತಮಿಳುನಾಡಿನಲ್ಲಿ ಅಪಘಾತ
TV9 Web
| Updated By: ಸುಷ್ಮಾ ಚಕ್ರೆ|

Updated on: Jul 08, 2022 | 11:35 AM

Share

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ (Chengalpattu) ಇಂದು ಬೆಳಗ್ಗೆ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಕೂಡ ಸೇರಿದ್ದಾರೆ. ಸರ್ಕಾರಿ ಬಸ್​​ನಲ್ಲಿ 50 ಜನರು ಚೆನ್ನೈನಿಂದ ಚಿದಂಬರಂಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚೆಂಗಲ್ಪಟ್ಟು ಜಿಲ್ಲೆಯ ತೊಲಪ್ಪೆಡು ಬಳಿ ಚೆನ್ನೈ- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಅಪಘಾತ ಸಂಭವಿಸಿದೆ.

ಐರನ್​ ವೈರ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಓವರ್​ಟೇಕ್ ಮಾಡಲು ಹೋದ ಸರ್ಕಾರಿ ಬಸ್​ ಅನ್ನು ತಪ್ಪಿಸಲು ಹೋಗಿ ಲಾರಿ ಎಡಕ್ಕೆ ಪಲ್ಟಿ ಹೊಡೆದಿದೆ. ಈ ವೇಳೆ ಇಬ್ಬರು ಮಹಿಳೆಯರು ಸೇರಿದಂತೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಗೊಂಡವರನ್ನು ಚೆಂಗಲ್ಪಟ್ಟು ಮತ್ತು ಮಧುರಾಂತಕಂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Kullu Bus Accident: ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಜನ ಸಾವು

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ ಈ ಅಪಘಾತದ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಗುರುತನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ಅಪಘಾತದಿಂದಾಗಿ ಚೆನ್ನೈ- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?