ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ (Chengalpattu) ಇಂದು ಬೆಳಗ್ಗೆ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಕೂಡ ಸೇರಿದ್ದಾರೆ. ಸರ್ಕಾರಿ ಬಸ್ನಲ್ಲಿ 50 ಜನರು ಚೆನ್ನೈನಿಂದ ಚಿದಂಬರಂಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚೆಂಗಲ್ಪಟ್ಟು ಜಿಲ್ಲೆಯ ತೊಲಪ್ಪೆಡು ಬಳಿ ಚೆನ್ನೈ- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಅಪಘಾತ ಸಂಭವಿಸಿದೆ.
ಐರನ್ ವೈರ್ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಓವರ್ಟೇಕ್ ಮಾಡಲು ಹೋದ ಸರ್ಕಾರಿ ಬಸ್ ಅನ್ನು ತಪ್ಪಿಸಲು ಹೋಗಿ ಲಾರಿ ಎಡಕ್ಕೆ ಪಲ್ಟಿ ಹೊಡೆದಿದೆ. ಈ ವೇಳೆ ಇಬ್ಬರು ಮಹಿಳೆಯರು ಸೇರಿದಂತೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಗೊಂಡವರನ್ನು ಚೆಂಗಲ್ಪಟ್ಟು ಮತ್ತು ಮಧುರಾಂತಕಂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Tamil Nadu | 6 dead, over 10 injured after a bus allegedly rammed into a lorry which was stationary, in Chengalpattu this morning, confirms district police pic.twitter.com/csxamjHiVb
— ANI (@ANI) July 8, 2022
ಇದನ್ನೂ ಓದಿ: Kullu Bus Accident: ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಜನ ಸಾವು
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ ಈ ಅಪಘಾತದ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಗುರುತನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ಅಪಘಾತದಿಂದಾಗಿ ಚೆನ್ನೈ- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಿದೆ.