ತಮಿಳುನಾಡಿನಲ್ಲಿ ಲಾರಿ ಹರಿದು ಆರು ಮಂದಿ ಪಾದಚಾರಿಗಳು ಸಾವು
Tamil Nadu Accident: ತಮಿಳುನಾಡಿನಲ್ಲಿ ಲಾರಿ ಹರಿದು ನಾಲ್ವರು ಪಾದಚಾರಿಗಳು ಸಾವನ್ನಪ್ಪಿದ್ದಾರೆ. ಚೆನ್ನೈ-ತಿರುಚ್ಚಿ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಪಾದಚಾರಿಗಳ ಸ್ಥಿತಿ ಗಂಭೀರ ವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡಿನಲ್ಲಿ ಲಾರಿ ಹರಿದು ಆರು ಪಾದಚಾರಿಗಳು ಸಾವನ್ನಪ್ಪಿದ್ದಾರೆ. ಚೆನ್ನೈ-ತಿರುಚ್ಚಿ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಪಾದಚಾರಿಗಳ ಸ್ಥಿತಿ ಗಂಭೀರ ವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತ ಖಂಡಿಸಿ ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತೀ ವೇಗದಲ್ಲಿ ಬಂದ ಲಾರಿ ಒಂದರ ಹಿಂದೆ ಒಂದರಂತೆ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್ ಲಾರಿ ವಾಹನಗಳಿಗೆ ಮಾತ್ರವಲ್ಲದೆ ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಮತ್ತಷ್ಟು ಓದಿ: ಗುಜರಾತ್: ಬಾವ್ಲಾ-ಬಗೋದರ ಹೆದ್ದಾರಿಯಲ್ಲಿ ಎರಡು ಟ್ರಕ್ಗಳ ನಡುವೆ ಡಿಕ್ಕಿ, 10 ಮಂದಿ ಸಾವು
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಚೆಂಗಲ್ಪಟ್ಟು ಪೊಲೀಸ್ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:17 pm, Fri, 11 August 23