Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ತಮಿಳುನಾಡು ಚುನಾವಣೆಗೆ ನಟ ದಳಪತಿ ವಿಜಯ್ ಸಿದ್ಧತೆ, ಪಕ್ಷದ ಚಿಹ್ನೆ ಬಿಡುಗಡೆ

ತಮಿಳು ನಟ ವಿಜಯ್ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಅದರ ಭಾಗವಾಗಿ ಇಂದು ಪಕ್ಷದ ಚಿಹ್ನೆಯನ್ನು ಬಿಡುಗಡೆ ಮಾಡಿದರು. ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು.

Thalapathy Vijay: ತಮಿಳುನಾಡು ಚುನಾವಣೆಗೆ ನಟ ದಳಪತಿ ವಿಜಯ್ ಸಿದ್ಧತೆ, ಪಕ್ಷದ ಚಿಹ್ನೆ ಬಿಡುಗಡೆ
ದಳಪತಿ ವಿಜಯ್
Follow us
ನಯನಾ ರಾಜೀವ್
|

Updated on: Aug 22, 2024 | 10:02 AM

ನಟ ದಳಪತಿ ವಿಜಯ್(Thalapathy Vijay) ರಾಜಕೀಯ ಪಯಣ ಆರಂಭಗೊಂಡಿದೆ. ಇಂದು ಪಕ್ಷದ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಫೆಬ್ರವರಿಯಲ್ಲಿ ಪ್ರಾರಂಭಿಸಿದ್ದರು. ವಿಜಯ್ ಅವರ ಪಕ್ಷವು 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ಇದೀಗ ದಳಪತಿ ವಿಜಯ್ ಗುರುವಾರ ತಮ್ಮ ರಾಜಕೀಯ ಪಕ್ಷದ ಬಾವುಟ ಹಾಗೂ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ.

2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಯಾವುದೇ ಮೈತ್ರಿ ಅಥವಾ ಪಕ್ಷವನ್ನು ಬೆಂಬಲಿಸಲಿಲ್ಲ.

ಮತ್ತಷ್ಟು ಓದಿ: Tamizhaga Vetri Kazhagam: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ

ಮೂರು ವರ್ಷಗಳಲ್ಲಿ 9.74 ಲಕ್ಷ ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಬಂದಿದೆ: ಸ್ಟಾಲಿನ್ ಮತ್ತೊಂದೆಡೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಕಳೆದ ಮೂರು ವರ್ಷಗಳಲ್ಲಿ ರಾಜ್ಯವು 9.74 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ, ಇದು 31 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ಹೇಳಿದರು.

ತಮಿಳುನಾಡಿನಲ್ಲಿ 68,773 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಸ್ಟಾಲಿನ್, ಈ ಯೋಜನೆಗಳು ಸುಮಾರು ಒಂದು ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ