Exit Poll Results 2021: ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ; ಫಲಿತಾಂಶಕ್ಕೂ ಮುನ್ನ ಈ ಸಮೀಕ್ಷೆಗಳನ್ನೂ ಅವಲೋಕಿಸಿ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರಿಪಬ್ಲಿಕ್ ಟಿವಿ-ಸಿಎನ್​ಎಕ್ಸ್ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಡಿಎಂಕೆ ಮೈತ್ರಿಕೂಟ 160-170 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಎಐಎಡಿಎಂಕೆ ಮೈತ್ರಿಕೂಟ 58-68 ಕ್ಷೇತ್ರಗಳಲ್ಲಿ, ಎಎಂಎಂಕೆ ಮೈತ್ರಿಕೂಟ 4-6 ಕ್ಷೇತ್ರಗಳಲ್ಲಿ ಗೆಲ್ಲಲಿದೆ.

Exit Poll Results 2021: ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ; ಫಲಿತಾಂಶಕ್ಕೂ ಮುನ್ನ ಈ ಸಮೀಕ್ಷೆಗಳನ್ನೂ ಅವಲೋಕಿಸಿ
ಕಾಂಗ್ರೆಸ್ ಸಂಸದ ಗಾಂಧಿ ತಮಿಳುನಾಡು, ಪುದುಚೇರಿ ಮತ್ತು ಅಸ್ಸಾಂಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು
Follow us
|

Updated on:Apr 29, 2021 | 9:16 PM

ತಮಿಳುನಾಡಿನಲ್ಲಿ ಡಿಎಂಕೆ- ಎಐಎಡಿಎಂಕೆ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇಂದು ನಿನ್ನೆಯದಲ್ಲ. ಒಂದು ಬಾರಿ ಡಿಎಂಕೆ ಮತ್ತೊಮ್ಮೆ ಎಐಎಡಿಎಂಕೆ ಎಂಬ ರೀತಿಯಲ್ಲಿ ಅಧಿಕಾರ ನಡೆಸಿದ ಪ್ರಮುಖ ಪಕ್ಷಗಳಿವು.  ಈ ಬಾರಿ ಎಐಎಡಿಎಂಕೆ – ಬಿಜೆಪಿ ಮೈತ್ರಿಕೂಟವು ಗದ್ದುಗೇರಲು ಶತಾಯಗತಾಯ ಪ್ರಯತ್ನ ಪಡುತ್ತಿದೆ. Tv9-Polstrat ಸಮೀಕ್ಷೆಯ ಪ್ರಕಾರ ಡಿಎಂಕೆ ಪರ ತಮಿಳುನಾಡಿನ ಜನ ಹೆಚ್ಚಿನ ಒಲವು ತೋರಿಸಿದ್ದಾರೆ. Tv9 ಮತಗಟ್ಟೆ ಸಮೀಕ್ಷೆಗಳಲ್ಲಿ (ಎಕ್ಸಿಟ್ ಪೋಲ್) ಸಂಗ್ರಹಿಸಿದ ಅಭಿಪ್ರಾಯ ಮತ್ತು ಅಂಶಗಳ ಪ್ರಕಾರ ಡಿಎಂಕೆ ಪಕ್ಷ 143ರ ರಿಂದ 153ಸೀಟುಗಳನ್ನು ಗಳಿಸುವ ಸಾಧ್ಯತೆ ಇದೆ. ಅದೇ ವೇಳೆ ಎಐಎಡಿಎಂಕೆ 75-80, ಇತರೆ ಪಕ್ಷಗಳು 20-12 ಸೀಟುಗಳಿಸುವ ಸಾಧ್ಯತೆ ಇದೆ. ತಮಿಳುನಾಡು ವಿಧಾನಸಭೆಯಲ್ಲಿ ಒಟ್ಟು 243 ಸೀಟುಗಳಿವೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರಿಪಬ್ಲಿಕ್ ಟಿವಿ-ಸಿಎನ್​ಎಕ್ಸ್ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಡಿಎಂಕೆ ಮೈತ್ರಿಕೂಟ 160-170 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಎಐಎಡಿಎಂಕೆ ಮೈತ್ರಿಕೂಟ 58-68 ಕ್ಷೇತ್ರಗಳಲ್ಲಿ, ಎಎಂಎಂಕೆ ಮೈತ್ರಿಕೂಟ 4-6 ಕ್ಷೇತ್ರಗಳಲ್ಲಿ ಗೆಲ್ಲಲಿದೆ.

ಅಸ್ಸಾಂನಲ್ಲಿ ಏನಾಗಬಹುದು? ಎಬಿಪಿ-ಸಿ ವೋಟರ್ ಸಮೀಕ್ಷೆ ಪ್ರಕಾರ ಅಸ್ಸಾಂನಲ್ಲಿ ಎನ್​ಡಿಎ ಮೈತ್ರಿಕೂಟ ಮೇಲುಗೈ ಸಾಧಿಸಲಿದೆ. ಎನ್​ಡಿಎ ಮೈತ್ರಿಕೂಟ 58-71 ಕ್ಷೇತ್ರಗಳಲ್ಲಿ, ಕಾಂಗ್ರೆಸ್​ ಮೈತ್ರಿಕೂಟ 53-66 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇತರರು ಹೆಚ್ಚೆಂದರೆ 5 ಸ್ಥಾನಗಳಲ್ಲಿ ಜಯಭೇರಿ ಭಾರಿಸಲಿದ್ದಾರೆ.

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಮುನ್ನಡೆ ಸಾಧ್ಯತೆಯನ್ನು ರಿಪಬ್ಲಿಕ್ ಟಿವಿ-ಸಿಎನ್​ಎಕ್ಸ್ ಸಮೀಕ್ಷೆಯೂ ತೆರೆದಿಟ್ಟಿದೆ.

ಬಿಜೆಪಿ ಮೈತ್ರಿಕೂಟ: 74-84 ಕಾಂಗ್ರೆಸ್ ಮೈತ್ರಿಕೂಟ: 40-50 ಇತರರು: 1-3 ಕ್ಷೇತ್ರಗಳಲ್ಲಿ ಗೆಲ್ಲಲಿದ್ದಾರೆ ಎಂದು ರಿಪಬ್ಲಿಕ್ ಟಿವಿ-ಸಿಎನ್​ಎಕ್ಸ್ ಸಮೀಕ್ಷೆ ತೆರೆದಿಟ್ಟಿದೆ.

ಪುದುಚೇರಿಯಲ್ಲಿ ಬಿಜೆಪಿಗೆ ಮುನ್ನಡೆ ಸಾಧ್ಯತೆ

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭೆಯಲ್ಲಿ ಈ ಬಾರಿ ಬಿಜೆಪಿ ಮುನ್ನಡೆ ಪಡೆಯುವ ಸಾಧ್ಯತೆಯಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಕರ್ನಾಟಕ ಹೊರತುಪಡಿಸಿ ಮತ್ತೊಂದು ರಾಜ್ಯದಲ್ಲಿ ಕಮಲ ಅರಳಿಸುವ ಬಿಜೆಪಿ ನಾಯಕರ ಪ್ರಯತ್ನಕ್ಕೆ ತಕ್ಕಮಟ್ಟಿಗೆ ಯಶಸ್ಸು ಸಿಗುವ ಸಾಧ್ಯತೆ ಕಾಣಿಸುತ್ತಿದೆ.

ರಿಪಬ್ಲಿಕ್-ಸಿಎನ್​ಎಕ್ಸ್ ಸಮೀಕ್ಷೆಯ ಪ್ರಕಾರ ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ 18, ಕಾಂಗ್ರೆಸ್ ನೇತೃತ್ವದ ಯುಪಿಎ 12 ಸ್ಥಾನ ಪಡೆಯಬಹುದು.

ಎಬಿಪಿ-ಸಿ ವೋಟರ್ ಸಮೀಕ್ಷೆಯ ಪ್ರಕಾರ ಪುದುಚೇರಿಯಲ್ಲಿ ಎನ್​ಡಿಎ 19-23, ಎಸ್​ಡಿಎ 6-10, ಇತರರು 1-2 ಸ್ಥಾನ ಪಡೆಯಬಹುದು.

ಇದನ್ನೂ ಓದಿ: Exit Poll Results 2021 LIVE: ಚುನಾವಣೋತ್ತರ ಸಮೀಕ್ಷೆ; ಬಂಗಾಳದಲ್ಲಿ ದೀದಿ ಗೆಲುವು; ತಮಿಳುನಾಡಲ್ಲಿ ಡಿಎಂಕೆಗೆ ಜಯಭೇರಿ ಸಾಧ್ಯತೆ

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ

(Tamil Nadu Assam Puducherry election 2021 ABP C Voter Republic CNX exit poll results)

Published On - 9:14 pm, Thu, 29 April 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ