AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ತಮಿಳುನಾಡಿನಲ್ಲಿ ಎಲ್ಲ ಸರ್ಕಾರಿ ಉದ್ಯೋಗಕ್ಕೆ ತಮಿಳು ಕಡ್ಡಾಯ

ತಮಿಳು ಭಾಷೆಯ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಸರ್ಕಾರಿ ಸೇವೆ ಮತ್ತು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಕೆಲಸ ಮಾಡಲು ಅರ್ಹರು ಎಂದು ತಮಿಳುನಾಡು ವಿಧಾನಸಭೆಯಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

Tamil Nadu: ತಮಿಳುನಾಡಿನಲ್ಲಿ ಎಲ್ಲ ಸರ್ಕಾರಿ ಉದ್ಯೋಗಕ್ಕೆ ತಮಿಳು ಕಡ್ಡಾಯ
ಎಂಕೆ ಸ್ಟಾಲಿನ್
TV9 Web
| Edited By: |

Updated on: Jan 13, 2023 | 5:56 PM

Share

ಚೆನ್ನೈ: ತಮಿಳುನಾಡು ಸರ್ಕಾರ (Tamil Nadu Government) ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಮಿಳು ಭಾಷೆಯ ಪ್ರಶ್ನೆಪತ್ರಿಕೆಯನ್ನು ಕಡ್ಡಾಯಗೊಳಿಸಿ ತಮಿಳುನಾಡು ವಿಧಾನಸಭೆಯು ಇಂದು (ಶುಕ್ರವಾರ) ಕಾಯ್ದೆಗೆ ತಿದ್ದುಪಡಿ ಮಾಡಿದೆ. 2021ರ ಡಿಸೆಂಬರ್ 1ರಿಂದ ರಾಜ್ಯ ಸರ್ಕಾರಿ ಸೇವೆಗಳಿಗೆ ನೇಮಕಾತಿಗಾಗಿ ತಮಿಳು ಭಾಷೆಯ (Tamil Language) ಪೇಪರ್‌ನಲ್ಲಿ ತೇರ್ಗಡೆಯಾಗುವುದನ್ನು ಕಡ್ಡಾಯಗೊಳಿಸಲಾಗಿದೆ.

ಇದರ ಪ್ರಕಾರ, ಯಾವುದೇ ವ್ಯಕ್ತಿಯು ನೇರ ನೇಮಕಾತಿಯ ಮೂಲಕ ಯಾವುದೇ ಸೇವೆಗೆ ನೇಮಕಾತಿಗೆ ಅರ್ಹನಾಗಿರುವುದಿಲ್ಲ. ರಾಜ್ಯದ ಅಧಿಕೃತ ಭಾಷೆ ಅಂದರೆ ತಮಿಳು ಬಗ್ಗೆ ಸಾಕಷ್ಟು ಜ್ಞಾನ ಇರುವುದು ಅಗತ್ಯ ಎಂದು ಸೂಚಿಸಲಾಗಿದೆ. ತಮಿಳು ಭಾಷೆಯ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಸರ್ಕಾರಿ ಸೇವೆ ಮತ್ತು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಕೆಲಸ ಮಾಡಲು ಅರ್ಹರು ಎಂದು ತಮಿಳುನಾಡು ಸರ್ಕಾರ ಪ್ರಕಟಿಸಿದೆ. ಈ ತಿದ್ದುಪಡಿ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಇದನ್ನೂ ಓದಿ: ಸೇತುಸಮುದ್ರಂ ಯೋಜನೆಗೆ ಷರತ್ತುಗಳೊಂದಿಗೆ ಬೆಂಬಲ ನೀಡಿದ ಬಿಜೆಪಿ; ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

2021ರ ಡಿಸೆಂಬರ್ 1ರ ಸರ್ಕಾರಿ ಆದೇಶದ ಪ್ರಕಾರ, ತಮಿಳುನಾಡು ಸರ್ಕಾರ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 10ನೇ ತರಗತಿಯ ಮಾನದಂಡಗಳಿಗೆ ಅನುಗುಣವಾಗಿ ತಮಿಳು ಭಾಷೆಯ ಪೇಪರ್ ಕಡ್ಡಾಯವಾಗಿದೆ. ಇದರಲ್ಲಿ ಕನಿಷ್ಠ ಶೇ. 40 ಅಂಕ ಪಡೆಯಬೇಕು. ಅರ್ಹತಾ ತಮಿಳು ಭಾಷೆಯ ಪತ್ರಿಕೆಯಲ್ಲಿ ಆಕಾಂಕ್ಷಿಗಳು ತೇರ್ಗಡೆಯಾಗದಿದ್ದರೆ ಒಟ್ಟಾರೆ ಪರೀಕ್ಷೆಯ ಯೋಜನೆಯ ಭಾಗವಾಗಿರುವ ಇತರ ವಿಷಯಗಳ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಮಿಳು ಭಾಷೆಯ ಪೇಪರ್ ಕಡ್ಡಾಯವಾಗಿದ್ದು, ಅದರಲ್ಲಿ ಉತ್ತೀರ್ಣರಾದರೆ ಮಾತ್ರ ಸರ್ಕಾರಿ ಮತ್ತು ಪಿಎಸ್‌ಯು ಸೇವೆಗಳಿಗೆ ಪ್ರವೇಶಕ್ಕೆ ಅರ್ಹತೆ ಪಡೆಯಲಿದ್ದಾರೆ. ಈ ನಿಯಮವು ತಮಿಳುನಾಡು ಪಬ್ಲಿಕ್ ಸರ್ವಿಸ್ ಕಮಿಷನ್ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರದ ನೇಮಕಾತಿ ಏಜೆನ್ಸಿಗಳಿಗೆ ಅನ್ವಯವಾಗುತ್ತದೆ. ಈ ವಿಭಾಗವು ಅರ್ಜಿಯ ಸಮಯದಲ್ಲಿ ತಮಿಳಿನಲ್ಲಿ ಸಾಕಷ್ಟು ಜ್ಞಾನವನ್ನು ಹೊಂದಿರದ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಕ್ರೀಡಾ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆ

ತಮಿಳುನಾಡಿನ ಎಲ್ಲಾ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಶೇ. 100ರಷ್ಟು ತಮಿಳು ಯುವಕರ ನೇಮಕಾತಿಯನ್ನು ಮಾಡಲು ಎಲ್ಲಾ ನೇಮಕಾತಿ ಏಜೆನ್ಸಿಗಳು ನಡೆಸುವ ನೇರ ನೇಮಕಾತಿಗಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ತಮಿಳು ಭಾಷಾ ಪತ್ರಿಕೆಯನ್ನು ಪರಿಚಯಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ