ಮೇ 24ರೊಳಗೆ ತಮಿಳುನಾಡು ವಿಧಾನಸಭೆ ಚುನಾವಣೆ, ಶೀಘ್ರ ದಿನಾಂಕ ಘೋಷಣೆ: ಚುನಾವಣಾ ಆಯೋಗ

Tamilnadu assembly election 2021 ತಮಿಳುನಾಡು ವಿಧಾನಸಭೆ ಜತೆಗೆ ಕನ್ಯಾಕುಮಾರಿ ಲೋಕಸಭೆ ಉಪಚನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಚುನಾವಣೆ ನಡೆಸುವ ಕುರಿತು ರಾಜಕೀಯ ನಾಯಕರ ಜತೆ ಚರ್ಚೆ ಮಾಡಿದ್ದೇವೆ ಎಂದು ಸುನೀಲ್​ ಅರೋರ ಮಾಹಿತಿ ನೀಡಿದರು.

ಮೇ 24ರೊಳಗೆ ತಮಿಳುನಾಡು ವಿಧಾನಸಭೆ ಚುನಾವಣೆ, ಶೀಘ್ರ ದಿನಾಂಕ ಘೋಷಣೆ: ಚುನಾವಣಾ ಆಯೋಗ
ಸುನೀಲ್​ ಅರೋರಾ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 11, 2021 | 4:51 PM

ಚೆನ್ನೈ: ಮೇ 24ರೊಳಗೆ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಸುತ್ತೇವೆ. ಈ ಬಗ್ಗೆ ಶೀಘ್ರವೇ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರ ಹೇಳಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಕುರಿತು ಚೆನ್ನೈನಲ್ಲಿ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 24ಕ್ಕೆ ತಮಿಳುನಾಡು ವಿಧಾನಸಭೆ ಅವಧಿ ಪೂರ್ಣಗೊಳ್ಳುತ್ತದೆ. ಹೀಗಾಗಿ, ಈ ಅವಧಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನಾವು ದೆಹಲಿಗೆ ಹೋದ ನಂತರ ಚುನಾವಣೆ ದಿನಾಂಕವನ್ನು ‌ಬಹಿರಂಗಪಡಿಸಲಾಗುವುದು ಎಂದರು.

ಕನ್ಯಾಕುಮಾರಿ ಲೋಕಸಭೆ ಉಪಚನಾವಣೆಯೂ ನಡೆಯಲಿದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮತದಾನ ನಡೆಸುತ್ತೇವೆ ಎಂದಿರುವ ಸುನೀಲ್ ಅರೋರ, ತಮಿಳುನಾಡು ವಿಧಾನಸಭೆ ಜತೆಗೆ ಕನ್ಯಾಕುಮಾರಿ ಲೋಕಸಭೆ ಉಪಚನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಚುನಾವಣೆ ನಡೆಸುವ ಕುರಿತು ರಾಜಕೀಯ ನಾಯಕರ ಜತೆ ಚರ್ಚೆ ಮಾಡಿದ್ದೇವೆ. ಕೊರೊನಾ‌ ಮಾರ್ಗಸೂಚಿ ಪ್ರಕಾರವೇ ಮುಂಜಾಗ್ರತಾ ಕ್ರಮ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಮತದಾನ ಕೇಂದ್ರಗಳನ್ನು ಹೆಚ್ಚಾಗಿ ಸ್ಥಾಪಿಸುವ ಬಗ್ಗೆಯೂ ಮಾಹಿತಿ ನೀಡಿರುವ ಸುನೀಲ್ ಅರೋರ, 25 ಸಾವಿರ ಮತದಾನ ಕೇಂದ್ರಗಳನ್ನು ಹೆಚ್ಚಾಗಿ ಸ್ಥಾಪಿಸಲಾಗುವುದು. ಕಳೆದಬಾರಿ 68 ಸಾವಿರ ಇದ್ದ ಮತಗಟ್ಟೆ ಈ ಬಾರಿ 93 ಸಾವಿರಕ್ಕೆ ಏರಿಕೆ ಆಗುವ ಸಾಧ್ಯತೆ ಇದೆ. ರಾಜಕೀಯ ನಾಯಕರು ಕೂಡ ಕೆಲ ಸಲಹೆಗಳನ್ನು ನೀಡಿದ್ದಾರೆ. ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ರಾಷ್ಟ್ರೀಯ ಮತದಾರರ ದಿನಾಚರಣೆ | ರಿಮೋಟ್​ ವೋಟಿಂಗ್ ತಂತ್ರಜ್ಞಾನ ಅಭಿವೃದ್ಧಿಗೆ ಆಯೋಗ ಪ್ರಯತ್ನ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್