AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CUET ತಮಿಳುನಾಡು ವಿಧಾನಸಭೆಯಲ್ಲಿ ಸಿಯುಇಟಿ ವಿರುದ್ಧ ನಿರ್ಣಯ ಅಂಗೀಕಾರ

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ವಿಸಿಕೆ ಮತ್ತು ರಾಜ್ಯದ ಪ್ರತಿಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ಪಕ್ಷಗಳು ಇದನ್ನು ಬೆಂಬಲಿಸಿದ್ದರಿಂದ ವಿಧಾನಸಭೆಯಲ್ಲಿ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಆದರೆ, ಬಿಜೆಪಿ ಈ ಕ್ರಮದ ವಿರುದ್ಧ ಅಸಮ್ಮತಿ ವ್ಯಕ್ತಪಡಿಸಿ ವಿಧಾನಸಭೆಯಿಂದ ಹೊರನಡೆದಿದೆ.

CUET  ತಮಿಳುನಾಡು ವಿಧಾನಸಭೆಯಲ್ಲಿ ಸಿಯುಇಟಿ ವಿರುದ್ಧ ನಿರ್ಣಯ ಅಂಗೀಕಾರ
ತಮಿಳುನಾಡು ವಿಧಾನಸಭೆಯಲ್ಲಿ ಸ್ಟಾಲಿನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 11, 2022 | 7:11 PM

Share

ಚೆನ್ನೈ: ನೀಟ್​​ನಂತಹ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆಯು (CUET) ದೇಶಾದ್ಯಂತ ವೈವಿಧ್ಯಮಯ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಬದಿಗೊತ್ತುತ್ತದೆ ಎಂದು ಆರೋಪಿಸಿ, ತಮಿಳುನಾಡು (Tamil Nadu) ವಿಧಾನಸಭೆಯು ದೇಶದಾದ್ಯಂತ 45 ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಎಲ್ಲಾ ಪದವಿಪೂರ್ವ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆಯನ್ನು ನಡೆಸುವ ಪ್ರಸ್ತಾಪವನ್ನು ಹಿಂಪಡೆಯಲು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿತು. ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ವಿಸಿಕೆ ಮತ್ತು ರಾಜ್ಯದ ಪ್ರತಿಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ಪಕ್ಷಗಳು ಇದನ್ನು ಬೆಂಬಲಿಸಿದ್ದರಿಂದ ವಿಧಾನಸಭೆಯಲ್ಲಿ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಆದರೆ, ಬಿಜೆಪಿ ಈ ಕ್ರಮದ ವಿರುದ್ಧ ಅಸಮ್ಮತಿ ವ್ಯಕ್ತಪಡಿಸಿ ವಿಧಾನಸಭೆಯಿಂದ ಹೊರನಡೆದಿದೆ. ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (UGC) ಯಿಂದ ಧನಸಹಾಯ ಪಡೆದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶವನ್ನು ಸಿಯುಇಟಿ ಮೂಲಕ ಮಾತ್ರ ಮಾಡಲಾಗುತ್ತದೆ. 2022-23 ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇದನ್ನು ನಡೆಸುತ್ತದೆ ಎಂದು ಕೇಂದ್ರದ ಪ್ರಕಟಣೆಯ ನಂತರ ಈ ನಿರ್ಣಯವು ಬಂದಿದೆ. ಸಿಯುಇಟಿನಲ್ಲಿನ ಅಂಕಗಳ ಆಧಾರದ ಮೇಲೆ ಮಾತ್ರ ವಿದ್ಯಾರ್ಥಿಗಳನ್ನು ಅಂತಹ ಕಾಲೇಜುಗಳಿಗೆ ಸ್ವೀಕರಿಸಲಾಗುವುದು ಮತ್ತು ವಿದ್ಯಾರ್ಥಿಗಳು ತಮ್ಮ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳನ್ನು ಅಲ್ಲ ಎಂದು ಕೇಂದ್ರವು ಹೇಳಿದೆ.

ನ್ಯಾಶನಲ್ ಕೌನ್ಸಿಲ್ ಫಾರ್ ಎಜುಕೇಶನ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಪಠ್ಯಕ್ರಮವನ್ನು ಆಧರಿಸಿದ ಯಾವುದೇ ಪ್ರವೇಶ ಪರೀಕ್ಷೆಯು ದೇಶಾದ್ಯಂತ ವಿವಿಧ ರಾಜ್ಯ ಬೋರ್ಡ್ ಪಠ್ಯಕ್ರಮಗಳಲ್ಲಿ ಅಧ್ಯಯನ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ಅವಕಾಶವನ್ನು ಒದಗಿಸುವುದಿಲ್ಲ ಎಂದು ರಾಜ್ಯ ವಿಧಾನಸಭೆಯು ಭಾವಿಸುತ್ತದೆ ಎಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಂಡಿಸಿದ ನಿರ್ಣಯವು ಹೇಳಿದೆ.

“ಹೆಚ್ಚಿನ ರಾಜ್ಯಗಳಲ್ಲಿ ರಾಜ್ಯ ಮಂಡಳಿಯ ಪಠ್ಯಕ್ರಮವು ಒಟ್ಟು ವಿದ್ಯಾರ್ಥಿ ಜನಸಂಖ್ಯೆಯ ಶೇಕಡಾ 80 ಕ್ಕಿಂತ ಹೆಚ್ಚು ಹೊಂದಿದೆ. ವಿದ್ಯಾರ್ಥಿಗಳು ಏಕರೂಪವಾಗಿ ಅಂಚಿನಲ್ಲಿರುವ ವಿಭಾಗಗಳಿಂದ ಬಂದವರು. ಆದ್ದರಿಂದ  ಎನ್‌ಸಿಇಆರ್‌ಟಿ ಪಠ್ಯಕ್ರಮ ಆಧಾರಿತ ಪ್ರವೇಶ ಪರೀಕ್ಷೆಯು ಈ ಅರ್ಹ ಬಹುಮತವನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯುವಲ್ಲಿ ಅನನುಕೂಲಕರ ಸ್ಥಾನದಲ್ಲಿ ಇರಿಸುತ್ತದೆ, ”ಎಂದು ನಿರ್ಣಯವು ಹೇಳಿದೆ.

ಇದು ವಿವಿಧ ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ರಾಜ್ಯದ ವಿದ್ಯಾರ್ಥಿಗಳ ಸಂಖ್ಯೆಯನ್ನು ತೀವ್ರವಾಗಿ ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಸ್ಟಾಲಿನ್ ಹೇಳಿದರು.

“ಈ ಸಿಯುಇಟಿ, ನೀಟ್ (National Eligibility Cum Entrance Test) ಪರೀಕ್ಷೆಗಳು ದೇಶಾದ್ಯಂತ ವೈವಿಧ್ಯಮಯ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಬದಿಗೊತ್ತುತ್ತವೆ ಎಂಬುದರಲ್ಲಿ ಸಂದೇಹವಿಲ್ಲ.  ಇವು ಶಾಲೆಗಳಲ್ಲಿ ಒಟ್ಟಾರೆ ಅಭಿವೃದ್ಧಿ ಆಧಾರಿತ ದೀರ್ಘ-ರೂಪದ ಕಲಿಕೆಯ ಪ್ರಸ್ತುತತೆಯನ್ನು ಸಂಪೂರ್ಣವಾಗಿ ಹಾಳುಮಾಡುತ್ತದೆ ಮತ್ತು ವಿದ್ಯಾರ್ಥಿಗಳು ತಮ್ಮ ಪ್ರವೇಶ ಪರೀಕ್ಷೆಯ ಅಂಕಗಳನ್ನು ಸುಧಾರಿಸಲು ಕೋಚಿಂಗ್ ಸೆಂಟರ್‌ಗಳನ್ನು ಅವಲಂಬಿಸುವಂತೆ ಮಾಡುತ್ತದೆ ಎಂದು ಅವರು ಹೇಳಿದರು.

ಇದು ಕೋಚಿಂಗ್ ಸೆಂಟರ್‌ಗಳ ಮತ್ತಷ್ಟು ಬೆಳವಣಿಗೆಗೆ ಮಾತ್ರ ಒಲವು ತೋರುತ್ತದೆ ಎಂದು ತಮಿಳುನಾಡಿನ ಜನರು ಭಾವಿಸುತ್ತಾರೆ. ನಿಯಮಿತ ಶಾಲಾ ಶಿಕ್ಷಣದೊಂದಿಗೆ ಇಂತಹ ಪ್ರವೇಶ ಪರೀಕ್ಷೆಯನ್ನು ಜಾರಿಗೊಳಿಸುವುದರಿಂದ ವಿದ್ಯಾರ್ಥಿ ಸಮುದಾಯದಲ್ಲಿ ಮಾನಸಿಕ ಒತ್ತಡ ಉಂಟಾಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.  ಸ್ಟಾಲಿನ್ ಅವರು ಈಗಾಗಲೇ ಒಂದು ವಾರದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಕ್ಕಾಗಿ ಸಿಯುಇಟಿ ಅನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:  ಕರ್ನಾಟಕ ಪ್ರಗತಿ ನಿಲ್ಲಿಸೋಕೆ ಯಾರಿಂದಲೂ ಸಾಧ್ಯವಿಲ್ಲ; ತಮಿಳುನಾಡು, ತೆಲಂಗಾಣ ರಾಜ್ಯಗಳ ವಿರುದ್ದ ಸಿಎಂ ಕಿಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ