Tamil Nadu: ಆಳವಾದ ಕಂದಕಕ್ಕೆ ಉರುಳಿದ ಬಸ್, ನಾಲ್ವರು ಸಾವು, 45 ಮಂದಿಗೆ ಗಂಭೀರ ಗಾಯ
ಬಸ್ವೊಂದು ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿ, 45 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಎರ್ಕಾಡ್‌ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಗುಡ್ಡದ ಕೆಳಗೆ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.
ತಮಿಳುನಾಡಿನ ಸೇಲಂನಲ್ಲಿ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 45 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರ್ಕಾಡ್‌ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಗುಡ್ಡದ ಕೆಳಗೆ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.
13 ನೇ ಹೇರ್‌ಪಿನ್ ಬೆಂಡ್ ಬಳಿ ಚಾಲಕನು ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದರು ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ, ಬೆಟ್ಟದ ಇಳಿಜಾರಿನಲ್ಲಿ ತುಂಬಾ ಕಾಳಜಿಯಿಂದ ಚಲಿಸಬೇಕಾಗುತ್ತದೆ.
ಅಪಘಾತದ ಸ್ಥಳಕ್ಕೆ ಸ್ಥಳೀಯರೊಂದಿಗೆ ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಕನಿಷ್ಠ ನಾಲ್ವರು ಗಾಯಗೊಂಡು ಸಾವನ್ನಪ್ಪಿದ್ದಾರೆ. ಸೇಲಂ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕಬಿಲನ್ ಮತ್ತು ಸೇಲಂ ಶಾಸಕ ಆರ್ ರಾಜೇಂದ್ರನ್ ಅವರು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಸ್ಥಳದಲ್ಲಿ ಉಪಸ್ಥಿತರಿದ್ದರು.
ಮತ್ತಷ್ಟು ಓದಿ: ಆಂಬ್ಯುಲೆನ್ಸ್ ಡ್ರೈವರ್ ಅವಾಂತರ; ಮೂರು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ
ಘಟನೆಯ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ರಾಜ್ಯ ಸಚಿವ ಎಲ್ ಮುರುಗನ್ ಅವರು ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಸಂತ್ರಸ್ತರಿಗೆ ಮತ್ತು ಗಾಯಾಳುಗಳಿಗೆ ತಮಿಳುನಾಡು ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸಚಿವರು ಒತ್ತಾಯಿಸಿದರು.
ಮಹಾರಾಷ್ಟ್ರ: ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಸಾವು, 30 ಮಂದಿಗೆ ಗಾಯ ಮಹಾರಾಷ್ಟ್ರದ ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, ಬಸ್ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತ ತುಂಬಾ ಭಯಾನಕವಾಗಿತ್ತು.
ಪ್ರಯಾಣಿಕರನ್ನು ಹೊರತರಲು ಬಸ್ಸನ್ನು ಮಧ್ಯವನ್ನು ಹೊಡೆಯಲಾಗಿತ್ತು. ಈ ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳು ಹಾಗೂ ಮೃತರನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ