AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಬಿಜೆಪಿಯಲ್ಲಿ ಬಿರುಕಿಲ್ಲ; ತಮಿಳಿಸೈ ಸೌಂದರರಾಜನ್ ಭೇಟಿಯಾದ ಅಣ್ಣಾಮಲೈ ಪ್ರತಿಕ್ರಿಯೆ

ತಮಿಳುನಾಡು ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವೆದ್ದಿದೆ ಎಂಬ ಊಹಾಪೋಹಗಳ ನಡುವೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಇಂದು ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪಕ್ಷದ ಬೆಳವಣಿಗೆಗೆ ಸ್ಫೂರ್ತಿ ನೀಡಿದ್ದಕ್ಕಾಗಿ ತಮಿಳಿಸೈ ಸೌಂದರರಾಜನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ತಮಿಳುನಾಡು ಬಿಜೆಪಿಯಲ್ಲಿ ಬಿರುಕಿಲ್ಲ; ತಮಿಳಿಸೈ ಸೌಂದರರಾಜನ್ ಭೇಟಿಯಾದ ಅಣ್ಣಾಮಲೈ ಪ್ರತಿಕ್ರಿಯೆ
ತಮಿಳಿಸೈ ಸೌಂದರರಾಜನ್- ಅಣ್ಣಾಮಲೈ
ಸುಷ್ಮಾ ಚಕ್ರೆ
|

Updated on: Jun 14, 2024 | 8:58 PM

Share

ಚೆನ್ನೈ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (K Annamalai) ಇಂದು (ಶುಕ್ರವಾರ) ಪಕ್ಷದ ನಾಯಕಿ ಮತ್ತು ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ (Tamilisai Soundararajan) ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ (Lok Sabha Elections 2024) ತಮಿಳುನಾಡಿನಲ್ಲಿ ಪಕ್ಷದ ಹೀನಾಯ ಪ್ರದರ್ಶನದ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಊಹಾಪೋಹಗಳ ಮಧ್ಯೆ ಈ ಸಭೆ ನಡೆದಿದೆ.

ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಅವರೊಂದಿಗಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಂಭಾಷಣೆಯ ವೈರಲ್ ವಿಡಿಯೋದ ಬಗ್ಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಅವರೆಲ್ಲರೂ ಬಿಜೆಪಿ ಕಾರ್ಯಕರ್ತರು. ಅವರು ನಮಗೆ ಹೇಳುವುದು ಅದನ್ನೇ. ನೀವು ನೋಡಿದ ಸಂಭಾಷಣೆಯು ಅಮಿತ್ ಶಾ ಮತ್ತು ಪಕ್ಷದ ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಅವರ ನಡುವಿನ ಸೌಹಾರ್ದ ಸಂಭಾಷಣೆಯಾಗಿದೆ. ಕೆಲವು ಸಾಮಾಜಿಕ ಮಾಧ್ಯಮದವರು ಅದನ್ನು ತಿರುಚಿ, ಸಂದರ್ಭಕ್ಕೆ ವಿರುದ್ಧವಾಗಿ ಮಾಡಿದ್ದಾರೆ. ತಮಿಳಿಸೈ ಸೌಂದರರಾಜನ್ ಬಿಜೆಪಿಯ ಹಿರಿಯ ಸದಸ್ಯರಾಗಿದ್ದಾರೆ. ಇಂದು ನಾನು ಅವರ ಮನೆಗೆ ಹೋಗಿದ್ದೆ. ನಾನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ವೇದಿಕೆಯಲ್ಲಿ ಮಾಜಿ ರಾಜ್ಯಪಾಲೆ​​ ತಮಿಳ್​​ಸಾಯಿಗೆ ಗದರಿದ ಅಮಿತ್ ಶಾ, ಅಣ್ಣಾಮಲೈ ವಿರುದ್ಧ ನೀಡಿದ ಆ ಹೇಳಿಕೆ ಕಾರಣವೇ?

ಈ ಭೇಟಿಯ ನಂತರ, ಅಣ್ಣಾಮಲೈ ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ. ಈ ಹಿಂದೆ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಉತ್ತಮವಾಗಿ ಕೆಲಸ ಮಾಡಿದ ಹಿರಿಯ ನಾಯಕರಲ್ಲಿ ಒಬ್ಬರಾದ ಡಾ. ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ. ಅವರ ರಾಜಕೀಯ ಅನುಭವ ಮತ್ತು ಸಲಹೆಗಳು ಪಕ್ಷದ ಬೆಳವಣಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ನಂತರ, ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದರೆ ತಮಿಳುನಾಡಿನಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡಬಹುದಿತ್ತು ಎಂದು ತಮಿಳಿಸೈ ಸೌಂದರರಾಜನ್ ಹೇಳಿದ್ದಾರೆ. ಬಿಜೆಪಿ-ಎಐಎಡಿಎಂಕೆ ವಿಭಜನೆಗೆ ಅಣ್ಣಾಮಲೈ ಕಾರಣ ಎಂದು ಆರೋಪಿಸಿ ಎಐಎಡಿಎಂಕೆ ನಾಯಕರೊಬ್ಬರನ್ನು ಬಹಿರಂಗವಾಗಿ ಬೆಂಬಲಿಸಿದ್ದರು. ಯಾರನ್ನೂ ಹೆಸರಿಸದೆ ತಮಿಳಿಸೈ ಸೌಂದರರಾಜನ್ ಅವರು ಬಿಜೆಪಿಯಲ್ಲಿ “ಕ್ರಿಮಿನಲ್ ಅಂಶಗಳಿವೆ” ಎಂದು ಹೇಳಿದ್ದರು.

ಇದನ್ನೂ ಓದಿ: Annamalai: ಮೇಕೆಗೆ ಅಣ್ಣಾಮಲೈ ಫೋಟೋ ಹಾಕಿ ಕುತ್ತಿಗೆ ಕತ್ತರಿಸಿದ ವಿಡಿಯೋ ವೈರಲ್; ಬಿಜೆಪಿ ನಾಯಕ ಹೇಳಿದ್ದೇನು?

ಜೂನ್ 9ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳಿಸೈ ಸೌಂದರರಾಜನ್ ಅವರನ್ನು ವೇದಿಕೆಯಲ್ಲಿ ನಿಂದಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಡಲು ಪ್ರಾರಂಭಿಸಿತು. ಅಣ್ಣಾಮಲೈ ವಿರುದ್ಧದ ಹೇಳಿಕೆಗಾಗಿಯೇ ಅವರಿಗೆ ಈ ರೀತಿ ಸಾರ್ವಜನಿಕ ವೇದಿಕೆಯಲ್ಲಿ ಅವಮಾನ ಮಾಡಲಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿಡಿಯೋದಲ್ಲಿ ಅಮಿತ್ ಶಾ ಅವರು ಅಣ್ಣಾಮಲೈ ವಿರುದ್ಧದ ಆಪಾದಿತ ನಿಲುವಿಗೆ ತಮಿಳಿಸೈ ಸೌಂದರರಾಜನ್ ಅವರಿಗೆ ತಾಕೀತು ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡಿತ್ತು.

ಆದರೆ, ಇದಕ್ಕೆ ಪ್ರತಿಕ್ರಿಯಿಸಿದ್ದ ತಮಿಳಿಸೈ ಸೌಂದರರಾಜನ್, ಈ ರೀತಿಯ ಅನಗತ್ಯವಾದ ಊಹಾಪೋಹಗಳನ್ನು ಬಿಟ್ಟುಬಿಡಿ. ಅಮಿತ್ ಶಾ ಅವರು ರಾಜಕೀಯ ಮತ್ತು ಕ್ಷೇತ್ರ ಕಾರ್ಯಗಳನ್ನು ತೀವ್ರವಾಗಿ ಕೈಗೊಳ್ಳಲು ನನಗೆ ಸಲಹೆ ನೀಡುತ್ತಿರುವ ವಿಡಿಯೋ ಅದಾಗಿದೆ ಎಂದು ಹೇಳಿದ್ದರು.

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ 39 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಡಿಎಂಕೆ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಅದರ ಮಿತ್ರಪಕ್ಷ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಒಂದೂ ಸ್ಥಾನವನ್ನು ಗಳಿಸಿಲ್ಲ. ದಕ್ಷಿಣ ಚೆನ್ನೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ತಮಿಳಿಸೈ ಸೌಂದರರಾಜನ್ ಕೂಡ ಭಾರೀ ಸೋಲು ಕಂಡಿದ್ದಾರೆ. ಹಾಗೇ, ಕೊಯಮತ್ತೂರಿನಲ್ಲಿ ಸ್ಪರ್ಧಿಸಿದ್ದ ಕೆ. ಅಣ್ಣಾಮಲೈ ಕೂಡ ಸೋಲನ್ನು ಅನುಭವಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು