AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ ದೀಪೋತ್ಸವಕ್ಕೂ ಮುನ್ನ ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಬಂಧನ; 750 ನಾಯಕರಿಗೆ ಗೃಹಬಂಧನ

ಮಧುರೈನ ತಿರುಪ್ಪರಂಕುಂಡ್ರಂ ಬೆಟ್ಟದ ಮೇಲಿರುವ ವಿವಾದಿತ ಕಲ್ಲಿನ ಸ್ತಂಭವಾದ ‘ದೀಪತೂಣ್’ ಬಳಿ ಕಾರ್ತಿಕ ದೀಪ ಬೆಳಗಿಸುವ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ರಾಜಕೀಯ ಹಾಗೂ ಧಾರ್ಮಿಕ ಉದ್ವಿಗ್ನತೆ ತೀವ್ರಗೊಂಡಿದೆ. ಸುಪ್ರೀಂ ಕೋರ್ಟ್ ದೀಪ ಬೆಳಗಿಸಲು ಅನುಮತಿ ನೀಡಿದ ಬೆನ್ನಲ್ಲೇ, ಮಧುರೈಗೆ ತೆರಳುತ್ತಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ದಕ್ಷಿಣ ಜಿಲ್ಲೆಗಳಾದ್ಯಂತ ಸುಮಾರು 750 ಬಿಜೆಪಿ ಮತ್ತು ಹಿಂದೂ ಮುನ್ನಣಿ ನಾಯಕರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಕಾರ್ತಿಕ ದೀಪೋತ್ಸವಕ್ಕೂ ಮುನ್ನ ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಬಂಧನ; 750 ನಾಯಕರಿಗೆ ಗೃಹಬಂಧನ
ಕಾರ್ತಿಕ ದೀಪಂImage Credit source: PTI
ಸುಷ್ಮಾ ಚಕ್ರೆ
|

Updated on: Nov 24, 2026 | 7:29 PM

Share

ನವದೆಹಲಿ, ನವೆಂಬರ್ 24: ಕಾರ್ತಿಕ ದೀಪೋತ್ಸವದ ಆಚರಣೆಗೂ ಮುನ್ನ ಮಧುರೈನಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಬಿಜೆಪಿಯ ಸುಮಾರು 750 ನಾಯಕರು ಮತ್ತು ಹಿಂದೂ ಮುನ್ನಣಿ ಪದಾಧಿಕಾರಿಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಅಥವಾ ತಿರುಪ್ಪರಂಕುಂಡ್ರಂ ಬೆಟ್ಟಕ್ಕೆ ಪ್ರಯಾಣಿಸದಂತೆ ತಡೆಯಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ನವೆಂಬರ್ 24ರಂದು ಬೆಟ್ಟದ ಮೇಲಿರುವ ‘ದೀಪತೂಣ್’ ಬಳಿ ಸಾಂಪ್ರದಾಯಿಕ ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಮರುದಿನವೇ ಈ ಆರೋಪಗಳು ಕೇಳಿಬಂದಿವೆ. ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾಗದಂತೆ ತಡೆಯಲು ತಮಿಳುನಾಡು ಸರ್ಕಾರವು ಈ ಪ್ರದೇಶದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದು, 5,600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ. ಧಾರ್ಮಿಕ ಕಾರ್ಯಕ್ರಮಕ್ಕಾಗಿ ತಮ್ಮ ನಾಯಕರು ಮತ್ತು ಹಿಂದೂ ಸಂಘಟನೆಗಳು ಬೆಟ್ಟವನ್ನು ತಲುಪದಂತೆ ರಾಜ್ಯ ಸರ್ಕಾರ ತಡೆಯಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

5,600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ:

ಮಧುರೈ ಮತ್ತು ಸುತ್ತಮುತ್ತಲಿನ ನಾಲ್ಕು ದಕ್ಷಿಣ ಜಿಲ್ಲೆಗಳಲ್ಲಿ ಸುಮಾರು 750 ಬಿಜೆಪಿ ಪದಾಧಿಕಾರಿಗಳು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ತಿರುಪ್ಪರಂಕುಂಡ್ರಂ ಬೆಟ್ಟ ಮತ್ತು ಮಧುರೈ ನಗರದಾದ್ಯಂತ ಸುಮಾರು 5,600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಟ್ಟದ ಮೇಲೆ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ ಹಾಗೂ 70ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಗೋಧ್ರಾ ದುರಂತ; 2 ದಶಕಗಳ ಬಳಿಕ ಅಪರಾಧಿಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಈ ಆದೇಶವು ಸೋಮವಾರ ರಾತ್ರಿ 9 ಗಂಟೆಗೆ ಜಾರಿಗೆ ಬಂದಿದ್ದು, ನವೆಂಬರ್ 25ರ ಬೆಳಿಗ್ಗೆ 10 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಅಧಿಕೃತ ದೇವಾಲಯದ ಆಚರಣೆಗಳು, ಸುಪ್ರೀಂ ಕೋರ್ಟ್ ಆದೇಶದ ವ್ಯಾಪ್ತಿಗೆ ಬರುವ ಚಟುವಟಿಕೆಗಳು ಮತ್ತು ದರ್ಗಾಕ್ಕೆ ಭೇಟಿ ನೀಡುವುದು ಸೇರಿದಂತೆ ಇತರ ಕಾನೂನುಬದ್ಧ ಧಾರ್ಮಿಕ ಚಟುವಟಿಕೆಗಳಿಗೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.

ಬಂಧನದ ಕುರಿತು ಬಿಜೆಪಿ ಆರೋಪ:

ತಮಿಳುನಾಡು ಬಿಜೆಪಿ ಐಟಿ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಶಕ್ತಿ ಕೃಷ್ಣನ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ಹಲವಾರು ಬಿಜೆಪಿ ನಾಯಕರು ಮತ್ತು ಹಿಂದೂ ಮುನ್ನಣಿ ಪದಾಧಿಕಾರಿಗಳನ್ನು ಅವರ ಮನೆಗಳಲ್ಲೇ ನಿರ್ಬಂಧಿಸಲಾಗಿದೆ ಅಥವಾ ತಿರುಪ್ಪರಂಕುಂಡ್ರಂಗೆ ಪ್ರಯಾಣಿಸದಂತೆ ತಡೆಯಲಾಗಿದೆ ಎಂದು ಆರೋಪಿಸಿದ್ದಾರೆ.

ತಿರುನಲ್ವೇಲಿಯ ತಮ್ಮ ನಿವಾಸದಿಂದ ಬೆಂಬಲಿಗರೊಂದಿಗೆ ಮಧುರೈನತ್ತ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರನ್ನು ತಚ್ಚನಲ್ಲೂರು ಚೆಕ್​ಪೋಸ್ಟ್ ಬಳಿ ತಡೆದ ಪೊಲೀಸರು ವಶಕ್ಕೆ ಪಡೆದು ಸಮೀಪದ ಕಲ್ಯಾಣ ಮಂಟಪಕ್ಕೆ ಕರೆದೊಯ್ದರು. ಇದೇ ವೇಳೆ, ಮಾಜಿ ಕೇಂದ್ರ ಸಚಿವ ಎಲ್. ಮುರುಗನ್ ಅವರನ್ನು ಕೊಯಮತ್ತೂರಿನ ಅನ್ನೂರು ಬಳಿ ಹಾಗೂ ಮಾಜಿ ರಾಜ್ಯಾಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರ ನಿವಾಸದ ಹೊರಗೆ 40ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, 4 ದಕ್ಷಿಣ ಜಿಲ್ಲೆಗಳಲ್ಲಿ ಸುಮಾರು 750 ಬಿಜೆಪಿ ಮತ್ತು ಹಿಂದೂ ಮುನ್ನಣಿ ಪದಾಧಿಕಾರಿಗಳು ಹೊರಗೆ ಹೋಗದಂತೆ ನಿರ್ಬಂಧಿಸಲಾಗಿದೆ ಎಂದೂ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆಯಲ್ಲಿ ಎಂಕೆ ಸ್ಟಾಲಿನ್ ಅವರನ್ನು ಸೋಲಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

ಸಿಕಂದರ್ ಬಾದುಷಾ ದರ್ಗಾದ ಬಳಿಯಿರುವ ಪ್ರಾಚೀನ ಕಲ್ಲಿನ ಸ್ತಂಭವಾದ ‘ದೀಪತೂಣ್’ ಸುತ್ತ ಈ ವಿವಾದ ಕೇಂದ್ರೀಕೃತವಾಗಿದೆ. ಮಾಲೀಕತ್ವ ಅಥವಾ ಸಾಂಪ್ರದಾಯಿಕ ಹಕ್ಕುಗಳ ದೊಡ್ಡ ಪ್ರಶ್ನೆಗಳನ್ನು ನಿರ್ಧರಿಸದೆ, ಒಂದು ದಿನದ ಮಟ್ಟಿಗೆ ಅಲ್ಲಿ ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ನವೆಂಬರ್ 20ರಂದು ಅನುಮತಿ ನೀಡಿತ್ತು.

ಈ ವಿವಾದವು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಸರ್ಕಾರ ಧಾರ್ಮಿಕ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ, ಆರ್‌ಎಸ್‌ಎಸ್ ಮತ್ತು ಹಿಂದೂ ಮುನ್ನಣಿ ಕೋಮು ಉದ್ವಿಗ್ನತೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ಮಾಣಿಕ್ಕಂ ಠಾಗೋರ್ ಪ್ರತ್ಯಾರೋಪ ಮಾಡಿದ್ದಾರೆ. ಇತ್ತ ಎಐಎಡಿಎಂಕೆ ಕೂಡ ರಾಜ್ಯ ಸರ್ಕಾರ ಈ ವಿಷಯವನ್ನು ನಿಭಾಯಿಸಿದ ರೀತಿಯನ್ನು ಟೀಕಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಧಾರಾಕಾರ ಮಳೆಯ ನಡುವೆಯೂ ಆಶಾ ಕಾರ್ಯಕರ್ತೆಯರ ಹೋರಾಟ
ಧಾರಾಕಾರ ಮಳೆಯ ನಡುವೆಯೂ ಆಶಾ ಕಾರ್ಯಕರ್ತೆಯರ ಹೋರಾಟ
ಗೊರಗುಂಟೆಪಾಳ್ಯದಿಂದ ಬೊಮ್ಮಸಂದ್ರಕ್ಕೆ ಹೃದಯ ಸಾಗಣೆ
ಗೊರಗುಂಟೆಪಾಳ್ಯದಿಂದ ಬೊಮ್ಮಸಂದ್ರಕ್ಕೆ ಹೃದಯ ಸಾಗಣೆ
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ