Armstrong Death: ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ

ಬಹುಜನ ಸಮಾಜವಾದಿ ಪಕ್ಷ (ಬಿಎಸ್​ಪಿ)ದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈ ಬಳಿಯ ಅವರ ಪೆರಂಬೂರ್ ನಿವಾಸದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯನ್ನು ಮಾಡಿದ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Armstrong Death: ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ
ಆರ್ಮ್‌ಸ್ಟ್ರಾಂಗ್
Follow us
ಸುಷ್ಮಾ ಚಕ್ರೆ
|

Updated on: Jul 05, 2024 | 9:56 PM

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಇಂದು (ಜುಲೈ 5) ಪೆರಂಬೂರ್‌ನಲ್ಲಿರುವ ಅವರ ನಿವಾಸದ ಬಳಿ 6 ಮಂದಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿದೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೊಲೆಯ ಹಿಂದಿನ ಉದ್ದೇಶವು ಅಸ್ಪಷ್ಟವಾಗಿದೆ.

ಸೇಂಬಿಯಂ ಪೊಲೀಸರ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಇದನ್ನೂ ಓದಿ: ಕಸದ ತೊಟ್ಟಿಯಲ್ಲಿತ್ತು ದೇಹದ ತುಂಡುಗಳು; ಕೊಲೆ ರಹಸ್ಯದ ಸುಳಿವು ನೀಡಿತ್ತು ಕಪ್ಪು ಮೀಸೆ!

ವರದಿಗಳ ಪ್ರಕಾರ, ಅಪರಿಚಿತ ಗ್ಯಾಂಗ್ ಪೆರಂಬೂರಿನ ಸದಾಯಪ್ಪನ್ ಸ್ಟ್ರೀಟ್‌ನಲ್ಲಿರುವ ಅವರ ಮನೆಯ ಸಮೀಪವೇ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಪರಾರಿಯಾಗಿದೆ. ತಕ್ಷಣ ಬಿಎಸ್​ಪಿ ರಾಜ್ಯಾಧ್ಯಕ್ಷರನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಸದ್ಯ ಪೊಲೀಸರು ಈ ಕೊಲೆಯ ತನಿಖೆ ನಡೆಸುತ್ತಿದ್ದಾರೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಈ ಹತ್ಯೆಯನ್ನು ಖಂಡಿಸಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯನ್ನು ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?