ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗಾಗಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ತನ್ನ ಮೈತ್ರಿ ಪಾಲುದಾರ ಪಕ್ಷವಾದ ಕಾಂಗ್ರೆಸ್‌ಗೆ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷದ ಮುಖ್ಯಸ್ಥ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್, "ಜೂನ್ 18 ರಂದು ತಮಿಳುನಾಡಿನಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ, ತಮಿಳಗ ವೆಟ್ರಿ ಕಳಗಂ ನೇತೃತ್ವದ ಮೈತ್ರಿಕೂಟವು ತನ್ನ ಮೈತ್ರಿ ಪಾಲುದಾರ ಪಕ್ಷವಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ಆ ರಾಜ್ಯಸಭಾ ಸ್ಥಾನವನ್ನು ಹಂಚಿಕೆ ಮಾಡಲು ನಿರ್ಧರಿಸಿದೆ" ಎಂದು ತಿಳಿಸಿದ್ದಾರೆ.

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ
Rahul Gandhi With Cm Vijay
Image Credit source: PTI

Updated on: Jun 03, 2026 | 8:39 PM

ಚೆನ್ನೈ, ಜೂನ್ 3: ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗೆ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಪಾಲಿನ ಸೀಟನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ನಿರ್ಧರಿಸಿದೆ. ಈ ನಿರ್ಧಾರವು ಮುಂಬರುವ ದಿನಗಳಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ತೆರವಾಗಿರುವ 1 ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಉಪಚುನಾವಣೆ ಪ್ರಕಟಿಸಿತ್ತು.

ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ ಹೊರಬೀಳಲಿದೆ. ವಿಧಾನಸಭೆಯಲ್ಲಿನ ಸಂಖ್ಯಾಬಲ ಮತ್ತು ರಾಜಕೀಯ ತಂತ್ರಗಾರಿಕೆಯ ಭಾಗವಾಗಿ ಟಿವಿಕೆ ಈ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದು, ಕಾಂಗ್ರೆಸ್ ಶೀಘ್ರದಲ್ಲೇ ತನ್ನ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಿದೆ.


ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ಟಿವಿಕೆ ಪಕ್ಷವು ತಮಿಳುನಾಡಿನ ರಾಜಕೀಯ ರಂಗಕ್ಕೆ ಪ್ರವೇಶಿಸಿದ ನಂತರ ತೆಗೆದುಕೊಳ್ಳುತ್ತಿರುವ ಪ್ರಮುಖ ರಾಜಕೀಯ ನಿರ್ಧಾರ ಇದಾಗಿದೆ. ಈಗಾಗಲೇ ಚುನಾವಣಾ ಅಧಿಸೂಚನೆ ಹೊರಬಿದ್ದಿರುವುದರಿಂದ, ಕಾಂಗ್ರೆಸ್ ಹೈಕಮಾಂಡ್ ತಮಿಳುನಾಡಿನ ಹಿರಿಯ ನಾಯಕರೊಬ್ಬರನ್ನು ಈ ಸ್ಥಾನಕ್ಕೆ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us