AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಉಪಚುನಾವಣೆ ಫಲಿತಾಂಶ; ಧಾರಾಪುರಂ, ಮಧುರಾಂತಕಂ ಕ್ಷೇತ್ರಗಳಲ್ಲಿ ಟಿವಿಕೆಗೆ ಭರ್ಜರಿ ಗೆಲುವು

ಏಪ್ರಿಲ್ 2026ರಲ್ಲಿ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ, ಮರಗತಮ್ ಕುಮಾರವೇಲ್ ಅವರು ಎಐಎಡಿಎಂಕೆ ಪರವಾಗಿ ಮಧುರಾಂತಕಂ ಕ್ಷೇತ್ರವನ್ನು ಗೆದ್ದರು. ಅದೇ ರೀತಿ, ಎಐಎಡಿಎಂಕೆಯ ಪಿ. ಸತ್ಯಭಾಮ ಧಾರಾಪುರಂ ಕ್ಷೇತ್ರವನ್ನು ಗೆದ್ದಿದ್ದರು. ಈ ಪರಿಸ್ಥಿತಿಯಲ್ಲಿ, ಚುನಾವಣಾ ಫಲಿತಾಂಶಗಳು ಪ್ರಕಟವಾದ ಕೆಲವೇ ವಾರಗಳಲ್ಲಿ ಇಬ್ಬರೂ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಟಿಡಿಪಿ ಸೇರಿದರು. ಇದರ ಪರಿಣಾಮವಾಗಿ, ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಘೋಷಿಸಲಾಯಿತು. ಇಂದು ಉಪಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳನ್ನು ಸಿಎಂ ವಿಜಯ್ ನೇತೃತ್ವದ ಟಿವಿಕೆ ತನ್ನದಾಗಿಸಿಕೊಂಡಿದೆ.

ತಮಿಳುನಾಡು ಉಪಚುನಾವಣೆ ಫಲಿತಾಂಶ; ಧಾರಾಪುರಂ, ಮಧುರಾಂತಕಂ ಕ್ಷೇತ್ರಗಳಲ್ಲಿ ಟಿವಿಕೆಗೆ ಭರ್ಜರಿ ಗೆಲುವು
ಮಧುರಾಂತಕಂ ಮತ್ತು ಧಾರಾಪುರಂ ಉಪಚುನಾವಣೆ ಅಭ್ಯರ್ಥಿಗಳ ಜೊತೆ ಸಿಎಂ ವಿಜಯ್ Image Credit source: TV9
ಸುಷ್ಮಾ ಚಕ್ರೆ
|

Updated on: Oct 09, 2026 | 8:50 PM

Share

ಚೆನ್ನೈ, ಅಕ್ಟೋಬರ್ 9: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಮಧುರಾಂತಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಅಧಿಕಾರಕ್ಕೆ ಬಂದ ಕೇವಲ 5 ತಿಂಗಳಲ್ಲಿ ಲಭಿಸಿದ ಈ ಗೆಲುವು ಆಡಳಿತಾರೂಢ ಟಿವಿಕೆಗೆ ದೊಡ್ಡ ಬಲ ತಂದುಕೊಟ್ಟಿದೆ. ಮತ್ತೊಂದೆಡೆ, ತನ್ನ ಹಳೆಯ ಮೈತ್ರಿಕೂಟದ ಪಾಲುದಾರರಿಲ್ಲದೆ ಏಕಾಂಗಿಯಾಗಿ ಸ್ಪರ್ಧಿಸಿದ್ದ ಡಿಎಂಕೆ ಎರಡೂ ಕ್ಷೇತ್ರಗಳಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ತನ್ನ ಜನಪ್ರಿಯತೆ ಮತ್ತು ಮೂಲ ಮತಬಲ ಇನ್ನು ಕುಸಿದಿಲ್ಲ ಎಂಬುದನ್ನು ಸಾಬೀತುಪಡಿಸಿದೆ.

ಧಾರಾಪುರಂ ಕ್ಷೇತ್ರ:

ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು 66,841 ಮತಗಳನ್ನು ಪಡೆದು, ತಮ್ಮ ಸಮೀಪದ ಎದುರಾಳಿ ಡಿಎಂಕೆ ಅಭ್ಯರ್ಥಿ ಎಸ್. ಸುಗುಣ್ಯಾ ವಿರುದ್ಧ 9,471 ಮತಗಳ ಅಂತರದಿಂದ ಜಯ ಗಳಿಸಿದರು. ಎಐಎಡಿಎಂಕೆ ಅಭ್ಯರ್ಥಿ ಕೆ. ಭಾನುಮತಿ 45,280 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು.

ಇದನ್ನೂ ಓದಿ: ‘ಈ ಜನಾದೇಶ ಹೊಸ ಬಲ ತುಂಬಿದೆ’; ಬಂಗಾಳ, ಅಸ್ಸಾಂ ಉಪಚುನಾವಣೆಯ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ

ಮಧುರಾಂತಕಂ ಕ್ಷೇತ್ರ:

ಟಿವಿಕೆ ಅಭ್ಯರ್ಥಿ ಕೆ. ಮರಗತಂ ಕುಮಾರವೇಲ್ 74,048 ಮತಗಳನ್ನು (ಶೇ. 40) ಪಡೆಯುವ ಮೂಲಕ ಡಿಎಂಕೆ ಅಭ್ಯರ್ಥಿ ಐ. ಪಾರಂದಾಮನ್ ವಿರುದ್ಧ 20,040 ಮತಗಳ ಅಂತರದ ದೊಡ್ಡ ಗೆಲುವು ಸಾಧಿಸಿದರು. ಎಐಎಡಿಎಂಕೆ ಅಭ್ಯರ್ಥಿ ಎಸ್. ಕಣಿತಾ ಸಂಪತ್ ಮೂರನೇ ಸ್ಥಾನ ಪಡೆದರೆ, ನೋಟಾಗೆ 652 ಮತಗಳು ಬಿದ್ದವು.

ಉಪಚುನಾವಣೆಗೆ ಹಿನ್ನೆಲೆ:

ಕಳೆದ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಟಿಕೆಟ್‌ನಿಂದ ಗೆದ್ದಿದ್ದ ಶಾಸಕರಾದ ಮರಗತಂ ಕುಮಾರವೇಲ್ ಮತ್ತು ಸತ್ಯಭಾಮಾ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಡಳಿತಾರೂಢ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದರಿಂದಾಗಿ ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ಅನಿವಾರ್ಯವಾಗಿತ್ತು. ಮುಖ್ಯಮಂತ್ರಿ ವಿಜಯ್ ಅವರು ಎರಡೂ ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ