ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ ತಮಿಳುನಾಡು: ಸಿಎಂ ಸ್ಟಾಲಿನ್

MK Stalin: ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ಮತ್ತು ಅದಕ್ಕೆ ಅಗತ್ಯವಾದ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸುವುದಾಗಿ ಡಿಎಂಕೆ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು.

ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ ತಮಿಳುನಾಡು: ಸಿಎಂ ಸ್ಟಾಲಿನ್
ಎಂ.ಕೆ. ಸ್ಟಾಲಿನ್​
Follow us
ರಶ್ಮಿ ಕಲ್ಲಕಟ್ಟ
|

Updated on: May 26, 2021 | 12:52 PM

ಚೆನ್ನೈ: ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಕೋರಿ ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬುಧವಾರ ಹೇಳಿದ್ದಾರೆ.  ಕೇಂದ್ರ ಸರ್ಕಾರವು ತಂದ ಮೂರು ಕೃಷಿ ಕಾನೂನುಗಳು: ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಮಸೂದೆ, ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಹಾಗೂ ರಕ್ಷಣೆ), ಅಗತ್ಯ ವಸ್ತುಗಳ (ತಿದ್ದುಪಡಿ) ಈ ಮೂರು ಕಾಯ್ದೆಗಳ ವಿರುದ್ಧ ತಮಿಳುನಾಡು ನಿರ್ಣಯ ಅಂಗೀಕರಿಸಲಿದೆ. ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ಮತ್ತು ಅದಕ್ಕೆ ಅಗತ್ಯವಾದ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸುವುದಾಗಿ ಡಿಎಂಕೆ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು.

ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ ನಡೆಸಿದ ಚಳವಳಿಗೆ ಆರು ತಿಂಗಳು ಕಳೆದಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರವು ರೈತರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿಲ್ಲ ಅಥವಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಕ್ರಮ ಕೈಗೊಂಡಿಲ್ಲ ಎಂಬುದು ಆತಂಕಕಾರಿ ಅಂಶವಾಗಿದೆ ಎಂದು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಹೇಳಿದ್ದಾರೆ.

ಈ ಹಿಂದೆ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳಾದ ಪಂಜಾಬ್, ರಾಜಸ್ಥಾನ, ಛತ್ತೀಸಗಡ, ದೆಹಲಿ, ಕೇರಳ ಮತ್ತು ಪಶ್ಚಿಮ ಬಂಗಾಳ ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಈ ಕಾನೂನುಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿವೆ.

ಇಂದು ಕರಾಳ ದಿನ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಚಳವಳಿ ಆರು ತಿಂಗಳು ಪೂರ್ಣಗೊಂಡಿದ್ದನ್ನು ಗುರುತಿಸಲು ರೈತ ಸಂಘಗಳು ಮೇ 26 ಅನ್ನು ‘ಕರಾಳದಿನ’ ಎಂದು ಆಚರಿಸುತ್ತಿವೆ. ರೈತರು ತಮ್ಮ ಮನೆ, ವಾಹನಗಳು ಮತ್ತು ಇತರ ಸ್ಥಳಗಳಿಂದ ಕಪ್ಪು ಧ್ವಜಗಳನ್ನು ಹಾರಿಸುವುದರ ಜೊತೆಗೆ ಕಪ್ಪು ಟರ್ಬನ್ ಮತ್ತು ಕಪ್ಪು ದುಪಟ್ಟಾ ಧರಿಸಿ ಕಪ್ಪು ದಿನವನ್ನು ಆಚರಿಸುತ್ತಿದ್ದಾರೆ. ರೈತರು ಪ್ರತಿ ಗಡಿಯಲ್ಲಿಯೂ ಕಪ್ಪು ಧ್ವಜಗಳನ್ನು ಹಾರಿಸಿದ್ದಾರೆ. ದೇಶದ ಗಡಿಯಲ್ಲಿ ರೈತರು ಕಪ್ಪು ದಿನವನ್ನು ಆಚರಿಸುತ್ತಾರೆ, ಆದರೆ ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದಿಲ್ಲ ಎಂದು ರೈತ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ತಮ್ಮ ಮನೆಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ರೈತರನ್ನು ಬೆಂಬಲಿಸುವಂತೆ ಅವರು ದೇಶಾದ್ಯಂತದ ನಾಗರಿಕರನ್ನು ಒತ್ತಾಯಿಸಿದರು.

ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮಂಗಳವಾರ ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಕೊರೊನಾನವೈರಸ್ ಪರಿಸ್ಥಿತಿಯಿಂದಾಗಿ ತಮ್ಮ ಮನೆಗಳಿಂದ ಹೊರಗೆ ಬಂದು ಅನಗತ್ಯವಾಗಿ ಒಟ್ಟುಗೂಡಿಸಬಾರದು ಎಂದು ಜನರನ್ನು ಒತ್ತಾಯಿಸಿದರು. ಕಳೆದ ವಾರ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಡ ಪಕ್ಷಗಳು, ಎಸ್ಪಿ, ಎನ್‌ಸಿಪಿ ಮತ್ತು ಡಿಎಂಕೆ ಸೇರಿದಂತೆ ಹನ್ನೆರಡು ಪ್ರಮುಖ ವಿರೋಧ ಪಕ್ಷಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದವು.

 ಇದನ್ನೂ ಓದಿ: Farmers Protest ಕೃಷಿ ಕಾಯ್ದೆ ವಿರೋಧಿಸಿ ರೈತರ ಹೋರಾಟಕ್ಕೆ 6 ತಿಂಗಳು: ಇಂದು ಕರಾಳ ದಿನ ಆಚರಣೆ, ರೈತರಿಂದ ಕಪ್ಪು ಧ್ವಜ  ಪ್ರದರ್ಶನ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ