Tamil Nadu Lockdown: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ಸಿಎಂ ಸ್ಟಾಲಿನ್

ಕೊವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ಲಾಕ್‌ಡೌನ್ ಶನಿವಾರ ರಾತ್ರಿ 10 ಗಂಟೆಗೆ ಪ್ರಾರಂಭವಾಗುತ್ತದೆ. ಸೋಮವಾರ ಬೆಳಿಗ್ಗೆ 5ರವರೆಗೆ ಲಾಕ್​ಡೌನ್ ಜಾರಿಯಲ್ಲಿರುತ್ತದೆ.

Tamil Nadu Lockdown: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ಸಿಎಂ ಸ್ಟಾಲಿನ್
ಎಂಕೆ ಸ್ಟಾಲಿನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 21, 2022 | 4:55 PM

ಚೆನ್ನೈ: ಕೊವಿಡ್ ಪ್ರಕರಣಗಳು (Covid Cases) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಈ ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ (MK Stalin) ತಿಳಿಸಿದ್ದಾರೆ. ಆಟೋಗಳು ಮತ್ತು ಟ್ಯಾಕ್ಸಿಗಳಲ್ಲಿ ವಿಮಾನ ನಿಲ್ದಾಣ, ಬಸ್ ಮತ್ತು ರೈಲು ನಿಲ್ದಾಣಗಳಿಗೆ ಹೋಗಲು ಅನುಮತಿ ನೀಡಲಾಗುವುದು. ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರವು ಜನವರಿ 9ರಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಿತ್ತು. ತಮಿಳುನಾಡಿನಲ್ಲಿ ಉಳಿದ ಎಲ್ಲಾ ದಿನಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ (Night Curfew) ಇರಲಿದೆ.

ಈ ತಿಂಗಳಾಂತ್ಯದೊಳಗೆ 10 ಲಕ್ಷ ಜನರಿಗೆ ‘ಮುನ್ನೆಚ್ಚರಿಕೆ ಬೂಸ್ಟರ್ ಡೋಸ್’ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ ಎಂದು ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಬ್ರಮಣ್ಯನ್ ಹೇಳಿದ್ದಾರೆ. ಕೊವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ಲಾಕ್‌ಡೌನ್ ಶನಿವಾರ ರಾತ್ರಿ 10 ಗಂಟೆಗೆ ಪ್ರಾರಂಭವಾಗುತ್ತದೆ. ಸೋಮವಾರ ಬೆಳಿಗ್ಗೆ 5ರವರೆಗೆ ಲಾಕ್​ಡೌನ್ ಜಾರಿಯಲ್ಲಿರುತ್ತದೆ.

ಭಾನುವಾರ ಹಾಲಿನ ಅಂಗಡಿಗಳು, ಎಟಿಎಂ ಕೇಂದ್ರಗಳು, ಆಸ್ಪತ್ರೆಗಳು, ಆಸ್ಪತ್ರೆಗೆ ಸಂಬಂಧಿಸಿದ ಕೆಲಸಗಳು, ಸರಕು ಸಾಗಣೆ ಮತ್ತು ಪೆಟ್ರೋಲ್ ಬಂಕ್‌ಗಳನ್ನು ಒಳಗೊಂಡಿರುವ ಕಾರ್ಯಾಚರಣೆಯ ಅಗತ್ಯ ಸೇವೆಗಳನ್ನು ಅನುಮತಿಸಲಾಗಿದೆ. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಬೆಳಿಗ್ಗೆ 7 ರಿಂದ ರಾತ್ರಿ 10ರವರೆಗೆ ಪಾರ್ಸಲ್ ಸೇವೆಗಳನ್ನು ನೀಡಬಹುದು.

ಗುರುವಾರ ತಮಿಳುನಾಡಿನಲ್ಲಿ 28,561 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 30,42,796ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 19,978 ಜನರು ಡಿಸ್ಚಾರ್ಜ್ ಆಗುವುದರೊಂದಿಗೆ 1,79,205 ಸಕ್ರಿಯ ಸೋಂಕನ್ನು ಬಿಟ್ಟು ಚೇತರಿಸಿಕೊಂಡವರ ಸಂಖ್ಯೆ 28,26,479ಕ್ಕೆ ಏರಿದೆ.

ಇದನ್ನೂ ಓದಿ: Omicron: ಭಾರತದ ಮೆಟ್ರೋ ಸಿಟಿಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆ

ಕೊರೊನಾ ಹರಡಿ ಸೂಪರ್ ಸ್ಪ್ರೆಡ್ಡರ್ ಆದರಾ ಶಿಕ್ಷಕಿ; 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್