ಸರ್ಕಾರಿ ಗೌರವದೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ತಮಿಳುನಾಡು ಸರ್ಕಾರ ಘೋಷಣೆ

|

Updated on: Sep 23, 2023 | 3:52 PM

ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಆ ದಾನಿಗಳ ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

ಸರ್ಕಾರಿ ಗೌರವದೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ತಮಿಳುನಾಡು ಸರ್ಕಾರ ಘೋಷಣೆ
ಎಂಕೆ ಸ್ಟಾಲಿನ್
Image Credit source: Mint
Follow us on

ಚೆನ್ನೈ: ಅಂಗಾಂಗ ದಾನ ಮಾಡುವ ದಾನಿಗಳ ಗೌರವಾರ್ಥವಾಗಿ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಸುವುದಾಗಿ ತಮಿಳುನಾಡು ಸರ್ಕಾರ ಇಂದು ಘೋಷಿಸಿದೆ. ತಮ್ಮ ಅಂಗಾಂಗಗಳನ್ನು ದಾನ ಮಾಡಿ ಅನೇಕ ಜೀವಗಳನ್ನು ಉಳಿಸಿದವರ ತ್ಯಾಗವನ್ನು ಗೌರವಿಸಲು ಆ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಇನ್ನುಮುಂದೆ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಜೀವ ನೀಡುವಲ್ಲಿ ತಮಿಳುನಾಡು ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ. ಅಂಗಾಂಗ ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ. ಮೆದುಳು ಡೆಡ್ ಆದ ಕುಟುಂಬದ ಸದಸ್ಯರ ದುರಂತ ಪರಿಸ್ಥಿತಿಯ ನಡುವೆಯೂ ಅವರು ನೀಡುವ ಅಂಗಗಳಿಂದ ಬೇರೆಯವರು ಮರುಜೀವ ಪಡೆಯುತ್ತಿದ್ದಾರೆ. ಹೀಗಾಗಿ, ಆ ದಾನಿಗಳನ್ನು ಗೌರವಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.


ಇದನ್ನೂ ಓದಿ: ಹಾಸನ: ಮೆದುಳು ನಿಷ್ಕ್ರಿಯಗೊಂಡು ಸಾವಿನ ಸನಿಹಕ್ಕೆ ಹೋದವನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ದುರಂತ ಪರಿಸ್ಥಿತಿಯಲ್ಲಿ ತಮ್ಮ ಆತ್ಮೀಯರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಆ ದಾನಿಗಳ ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sat, 23 September 23