AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿ ಮೊದಲ ಮಹಿಳಾ ಕಾವಾಡಿ ಆಗಿ ನೇಮಕ

ನೇಮಕಾತಿಗೆ ಪ್ರತಿಕ್ರಿಯೆಯಾಗಿ, ಪರಿಸರ ಹವಾಮಾನ ಬದಲಾವಣೆ ಮತ್ತು ಅರಣ್ಯಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು, ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ ಸರ್ಕಾರದಿಂದ ಕಾಯಂ ಮಹಿಳಾ ಕಾವಾಡಿ (ಆನೆಯ ಕೇರ್ ಟೇಕರ್) ಆಗಿ ನೇಮಕಗೊಂಡ ಮೊದಲ ಮಹಿಳೆಯಾಗಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡು: 'ದಿ ಎಲಿಫೆಂಟ್ ವಿಸ್ಪರರ್ಸ್' ಖ್ಯಾತಿಯ ಬೆಳ್ಳಿ ಮೊದಲ ಮಹಿಳಾ ಕಾವಾಡಿ ಆಗಿ ನೇಮಕ
ಬೆಳ್ಳಿ
ರಶ್ಮಿ ಕಲ್ಲಕಟ್ಟ
|

Updated on:Aug 02, 2023 | 5:19 PM

Share

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಬುಧವಾರ ರಾಜ್ಯ ಅರಣ್ಯ ಇಲಾಖೆ ವತಿಯಿಂದ ನೀಲಗಿರಿ ಜಿಲ್ಲೆಯ ತೆಪ್ಪಕ್ಕಾಡ್ ಆನೆ ಶಿಬಿರದಲ್ಲಿ (Theppakkad Elephant Camp) ಮೊದಲ ಮಹಿಳಾ ಕಾವಾಡಿ (Elephant Care Taker) ಆಗಿ ನೇಮಕಗೊಂಡಿರುವ ವಿ ಬೆಳ್ಳಿಯವರಿಗೆ (V Bellie) ನೇಮಕಾತಿ ಆದೇಶ ಹೊರಡಿಸಿದ್ದಾರೆ. ನೇಮಕಾತಿಗೆ ಪ್ರತಿಕ್ರಿಯೆಯಾಗಿ, ಪರಿಸರ ಹವಾಮಾನ ಬದಲಾವಣೆ ಮತ್ತು ಅರಣ್ಯಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು, ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ ಸರ್ಕಾರದಿಂದ ಕಾಯಂ ಮಹಿಳಾ ಕಾವಾಡಿ (ಆನೆಯ ಕೇರ್ ಟೇಕರ್) ಆಗಿ ನೇಮಕಗೊಂಡ ಮೊದಲ ಮಹಿಳೆಯಾಗಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡು, ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರದಲ್ಲಿ ಆನೆ ಮರಿಗಳನ್ನು ಉಳಿಸುವಲ್ಲಿ ನಿಸ್ವಾರ್ಥ ಮತ್ತು ಸಮರ್ಪಿತ ಸೇವೆ ಅವರದ್ದು. ಬೊಮ್ಮನ್ ಮತ್ತು ಬೆಳ್ಳಿ ನಿಜವಾಗಿಯೂ ಸ್ಪೂರ್ತಿ. ಅವರು ನಿಜವಾಗಿಯೂ ಅರ್ಹರಾಗಿರುವ ಈ ಮನ್ನಣೆಗಾಗಿ ಸಿಎಂ ಸ್ಟಾಲಿನ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಒಬ್ಬಂಟಿಯಾಗಿಲ್ಲ ಎಂದ ತೆಲಂಗಾಣ ಸಿಎಂ ಕೆಸಿಆರ್ ; 2024ರ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಬೆಂಬಲ?

ಸ್ಟಾಲಿನ್ ಅವರು ಆನೆ ಪಾಲಕ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ಅಭಿನಂದಿಸಿದ್ದಾರೆ. ‘ದಿ ಎಲಿಫೆಂಟ್ ವಿಸ್ಪರೆರ್ಸ್’ ಸಾಕ್ಷ್ಯಚಿತ್ರಕ್ಕಾಗಿ ಆಸ್ಕರ್ ಪ್ರಶಸ್ತಿ ಗೆದ್ದ ನಂತರ ಈ ದಂಪತಿಗೆ ತಲಾ 1 ಲಕ್ಷ ಚೆಕ್ ಅನ್ನು ಉಡುಗೊರೆಯಾಗಿ ಸ್ಟಾಲಿನ್ ನೀಡಿದ್ದರು. ಈ ಸಾಕ್ಷ್ಯಚಿತ್ರವು ಆನೆ ಮರಿ ಅಮ್ಮು ಮತ್ತು ರಘುವನ್ನು ಪೋಷಿಸುವ ಅರಣ್ಯವಾಸಿ ಸಮುದಾಯಕ್ಕೆ ಸೇರಿದ ಬೊಮ್ಮನ್ ಮತ್ತು ಬೆಳ್ಳಿಯ ಜೀವನ ಮತ್ತು ಕೆಲಸವನ್ನು ಆಧರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Wed, 2 August 23

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!