AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡು ಸಿಎಂ ಸ್ಟಾಲಿನ್​ ನಿರ್ಧಾರ; ಅಣ್ಣಾಮಲೈರಿಂದ ವಿರೋಧ

ಸಿಎಂ ಎಂ.ಕೆ. ಸ್ಟಾಲಿನ್ ನಿರ್ಧಾರದ ಬಗ್ಗೆ ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ್ದ ಬಿಜೆಪಿ ನಾಯಕ ನೈನಾರ್​ ನಾಗೇಂದ್ರನ್ ಸಮ್ಮತ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡು ಸಿಎಂ ಸ್ಟಾಲಿನ್​ ನಿರ್ಧಾರ; ಅಣ್ಣಾಮಲೈರಿಂದ ವಿರೋಧ
ಎಂ.ಕೆ.ಸ್ಟಾಲಿನ್​ ಮತ್ತು ಕೆ.ಅಣ್ಣಾಮಲೈ
TV9 Web
| Edited By: |

Updated on: Sep 17, 2021 | 1:46 PM

Share

ಚೆನ್ನೈ: ಇಂದು (ಸೆಪ್ಟೆಂಬರ್ 17) ದ್ರಾವಿಡಿಯನ್​ ಚಳವಳಿ ನಾಯಕನಾದ ಪೆರಿಯಾರ್​ ಇ.ವಿ.ರಾಮಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿರ್ಧರಿಸಿದ್ದಾರೆ. ಆದರೆ ಈ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪೆರಿಯಾರ್​ ಅವರ ಜನ್ಮದಿನವನ್ನು ಸಾಮಾಜಿಕ ನ್ಯಾಯದ ದಿನವನ್ನಾಗಿ ಆಚರಿಸಲು ಒಪ್ಪಿಗೆ ಇದೆ, ಆದರೆ ಡಿಎಂಕೆ ಸರ್ಕಾರ ಉಳಿದ ಸಮಾಜ ಸುಧಾಕರನ್ನು ನಿರ್ಲಕ್ಷಿಸುವುದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ.

1879ರ ಸೆಪ್ಟೆಂಬರ್​ 17ರಂದು ಜನಿಸಿದ್ದ ಪೆರಿಯಾರ್ ಇ.ವಿ.ರಾಮಸ್ವಾಮಿಯವರನ್ನು ದ್ರಾವಿಡ ಚಳವಳಿಯ ಜನಕ ಎಂದೇ ಕರೆಯಲಾಗುತ್ತದೆ. ಜಾತಿ, ಲಿಂಗತಾರತಮ್ಯವನ್ನು ಬಲವಾಗಿ ವಿರೋಧಿಸಿದ್ದ ಇವರು, ಅಂಥ ಅಸಮಾನತೆ ವಿರುದ್ಧ ಹಲವು ಚಳವಳಿಗಳನ್ನು ಹಮ್ಮಿಕೊಂಡಿದ್ದವರು. ಹಾಗಾಗಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ವರ್ಷದಿಂದ,  ಇನ್ನುಮುಂದೆ ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯದ ದಿನವನ್ನಾಗಿ ಆಚರಿಸುವುದಾಗಿ ಎಂ.ಕೆ.ಸ್ಟಾಲಿನ್​ ಹೇಳಿದ್ದಾರೆ. ಅಷ್ಟೇ ಅಲ್ಲ,  ಪೆರಿಯಾರ್​ ಸಿದ್ಧಾಂತವು ಸಾಮಾಜಿಕ ನ್ಯಾಯ, ಆತ್ಮಗೌರವ, ಸಮಾನತೆ, ಭ್ರಾತೃತ್ ಮತ್ತು ವೈಚಾರಿಕತೆಯ ಪ್ರತಿಬಿಂಬವಾಗಿದೆ ಎಂದು ಹೇಳಿದ್ದರು.

ಸ್ಟಾಲಿನ್ ನಿರ್ಧಾರದ ಬಗ್ಗೆ ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ್ದ ಬಿಜೆಪಿ ನಾಯಕ ನೈನಾರ್​ ನಾಗೇಂದ್ರನ್​, ಸಾಮಾಜಿಕ ನ್ಯಾಯ ಎಂಬುದು ಬಿಜೆಪಿಯ ತತ್ವಗಳ ಪರಿಕಲ್ಪನೆಯಾಗಿದೆ. ಹಾಗಾಗಿ ನಮ್ಮ ಪಕ್ಷ ಈ ನಿರ್ಧಾರವನ್ನು ಸ್ವಾಗತಿಸುತ್ತದೆ ಎಂದು ಹೇಳಿದ್ದರು.  ಆದರೆ ಬಿಜೆಪಿ ತಮಿಳುನಾಡು ಮುಖ್ಯಸ್ಥ ಅಣ್ಣಾಮಲೈ ಎಂ.ಕೆ.ಸ್ಟಾಲಿನ್ ನಿರ್ಧಾರವನ್ನು ವಿರೋಧಿಸಿದ್ದಾರೆ. ಡಿಎಂಕೆ ಸರ್ಕಾರ ಉಳಿದ ಸಮಾಜ ಸುಧಾಕರನ್ನು ಕಡೆಗಣಿಸುತ್ತಿದೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾಕವಿ ಭಾರತಿಯಾರ್​ರಂಥವರಿಗೂ ಸರ್ಕಾರ ಮನ್ನಣೆ ನೀಡಬೇಕು ಎಂದಿದ್ದಾರೆ.

ಇದನ್ನೂ ಓದಿ: Shocking News: ಯುವತಿ ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಮನುಷ್ಯನ ಬೆರಳು; ಬೆಚ್ಚಿಬೀಳಿಸಿದ ಘಟನೆಯ ತನಿಖೆ ಶುರು

ಆಕ್ಸಿಡೆಂಟ್​ ಝೋನ್​ ಆದರೂ ಸಿಲಿಕಾನ್ ಸಿಟಿ ಫ್ಲೈ ಓವರ್ ಮೇಲೆ ಮುಂದುವರಿದಿದೆ ಯುವಕ-ಯುವತಿಯರ ಹುಚ್ಚಾಟ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ