ಉದಯನಿಧಿ ಅವರ ‘ಸನಾತನ ಧರ್ಮ’ ಹೇಳಿಕೆಯನ್ನು ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ಸ್ಟಾಲಿನ್

ಸುಳ್ಳುಸುದ್ದಿ ಮತ್ತು ನಂಬಿಕೆಯ ವಿಷಯಗಳ ಮೇಲಿನ ದಾಳಿಗಳ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, “ಈ ಪರಿಸ್ಥಿತಿಯಲ್ಲಿ, ಗೌರವಾನ್ವಿತ ಪ್ರಧಾನಿಯವರು ಉದಯನಿಧಿ ಅವರ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಹೇಳಿದ್ದನ್ನು ಕೇಳಲು ಬೇಸರವಾಗಿದೆ ಎಂದಿದ್ದಾರೆ.

ಉದಯನಿಧಿ ಅವರ ‘ಸನಾತನ ಧರ್ಮ’ ಹೇಳಿಕೆಯನ್ನು ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ಸ್ಟಾಲಿನ್
ಎಂಕೆ ಸ್ಟಾಲಿನ್
Follow us
|

Updated on:Sep 07, 2023 | 3:55 PM

ಚೆನ್ನೈ ಸೆಪ್ಟೆಂಬರ್ 07: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಗುರುವಾರ ತಮ್ಮ ಸಂಪುಟ ಸಹೋದ್ಯೋಗಿ ಮತ್ತು ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ‘ಸನಾತನ ಧರ್ಮ’ ಕುರಿತ ಟೀಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಉದಯನಿಧಿ ಅವರು ಪರಿಶಿಷ್ಟ ಜಾತಿಗಳು, ಬುಡಕಟ್ಟುಗಳು ಮತ್ತು ಮಹಿಳೆಯರ ವಿರುದ್ಧ ತಾರತಮ್ಯ ಮಾಡುವ ತತ್ವಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ. ತಂದೈ ಪೆರಿಯಾರ್, ಮಹಾತ್ಮ ಜ್ಯೋತಿರಾವ್ ಫುಲೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಅನೇಕ ಭಾರತೀಯ ನಾಯಕರು “ಒಬ್ಬರ ಜನ್ಮದ ಆಧಾರದ ಮೇಲೆ ತಾರತಮ್ಯವನ್ನು ಸಮರ್ಥಿಸುವ” ಪ್ರತಿಗಾಮಿ ಸನಾತನ ಸಿದ್ಧಾಂತಗಳ ವಿರುದ್ಧ ಮಾತನಾಡಿದ್ದಾರೆ ಎಂದು ದ್ರಾವಿಡ ಮುನ್ನೇತ್ರ ಕಳಗಂ (DMK) ನಾಯಕ ಹೇಳಿದ್ದಾರೆ.

ನಾವು ಚಂದ್ರನಲ್ಲಿಗೆ ಚಂದ್ರಯಾನವನ್ನು ಪ್ರಾರಂಭಿಸಿದಾಗಲೂ, ಕೆಲವರು ಜಾತಿ ತಾರತಮ್ಯವನ್ನು ಪ್ರಚಾರ ಮಾಡುವುದನ್ನು ಮುಂದುವರೆಸುತ್ತಾರೆ. ವರ್ಣಾಶ್ರಮ ತತ್ವಗಳ ಆಧಾರದ ಮೇಲೆ ಸಾಮಾಜಿಕ ಶ್ರೇಣೀಕರಣವನ್ನು ಒತ್ತಿಹೇಳುವುದು ಮತ್ತು ಅವರ ಪಂಥೀಯ ಹಕ್ಕುಗಳನ್ನು ಬೆಂಬಲಿಸಲು ಶಾಸ್ತ್ರಗಳು ಮತ್ತು ಇತರ ಪ್ರಾಚೀನ ಪಠ್ಯಗಳನ್ನು ಉಲ್ಲೇಖಿಸುವುದು ಮಾಡುತ್ತಿರುತ್ತಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

“ಉದಯನಿಧಿ ಇಂತಹ ದಬ್ಬಾಳಿಕೆಯ ಸಿದ್ಧಾಂತಗಳ ವಿರುದ್ಧ ಮಾತ್ರ ಮಾತನಾಡಿದ್ದಾರೆ. ಆ ಸಿದ್ಧಾಂತಗಳ ಆಧಾರದ ಮೇಲೆ ನಡೆಯುವ ಆಚರಣೆಗಳನ್ನು ನಿರ್ಮೂಲನೆ ಮಾಡಲು ಕರೆ ನೀಡಿದ್ದರು ಎಂದು ಸ್ಟಾಲಿನ್ ಹೇಳಿದ್ದಾರೆ.

ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿದ್ದೇನು?

ಈ ತಿಂಗಳ ಆರಂಭದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸ್ಥಾಪಿಸಲು ಸನಾತನ ಧರ್ಮವನ್ನು (ಹಿಂದೂ ಧರ್ಮದಲ್ಲಿ ನಿಷೇಧಿಸಲಾಗಿರುವ ಕರ್ತವ್ಯಗಳು ಮತ್ತು ಜೀವನ ವಿಧಾನ) ನಿರ್ಮೂಲನೆಗೆ ಕರೆ ನೀಡಿದ ವಿಡಿಯೊ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ, ರಾಜಕೀಯ ವಲಯದಲ್ಲಿ ಭಾರೀ ವಾದ- ವಿವಾದಗಳು ನಡೆದಿವೆ.

ಕಳೆದ ಶನಿವಾರ ಚೆನ್ನೈನಲ್ಲಿ ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಉದಯನಿಧಿ ಸ್ಟಾಲಿನ್ ತಮಿಳಿನಲ್ಲಿ ಹೇಳಿದ್ದು ಹೀಗೆ: “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು ಅಥವಾ ಕೊರೊನಾವನ್ನು(ಕೋವಿಡ್-19) ತಡೆಯಲು ಸಾಧ್ಯವಿಲ್ಲ. ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನ (ಧರ್ಮ)ವನ್ನು ನಿರ್ಮೂಲನೆ ಮಾಡಬೇಕು. ಕೇವಲ ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು.

ಉದಯನಿಧಿ ಅವರ ಭಾಷಣದ ವಿಡಿಯೊ ಪ್ರಸಾರವಾಗುತ್ತಿದ್ದಂತೆ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ ಬಿಜೆಪಿ, ಡಿಎಂಕೆ ನಾಯಕ ನರಮೇಧಕ್ಕೆ ಕರೆ ನೀಡುತ್ತಿದ್ದಾರೆ ಎಂದು ಆರೋಪಿಸಿತು. ಇದಕ್ಕೆ ಉದಯನಿಧಿ, ಬಿಜೆಪಿಯದ್ದು “ಸುಳ್ಳು ನಿರೂಪಣೆ” ಎಂದು ತಳ್ಳಿಹಾಕಿದರು.

“ಬಿಜೆಪಿಯಿಂದ ಪೋಷಿಸಲ್ಪಟ್ಟ ಸಾಮಾಜಿಕ ಮಾಧ್ಯಮ ಗುಂಪು ಈ ಸುಳ್ಳನ್ನು ಉತ್ತರದ ರಾಜ್ಯಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದೆ. ಆದರೆ, ಮಾನ್ಯ ಸಚಿವರಾದ ಉದಯನಿಧಿ ಅವರು ‘ಜನಾಂಗೀಯ ಹತ್ಯೆ’ ಎಂಬ ಪದವನ್ನು ತಮಿಳು ಅಥವಾ ಇಂಗ್ಲಿಷ್‌ನಲ್ಲಿ ಬಳಸಿಲ್ಲ. ಆದರೂ ಹೀಗೆ ಹೇಳಿಕೊಂಡು ಸುಳ್ಳುಗಳನ್ನು ಹಬ್ಬಿಸಲಾಯಿತು. ಬಿಜೆಪಿಯ ಟ್ರೋಲ್ ಆರ್ಮಿ ಈ ಸುಳ್ಳುಗಳನ್ನು ಹರಡಿದೆ. ಇತ್ತ ಬಿಜೆಪಿ ಸರ್ಕಾರದ ಜವಾಬ್ದಾರಿಯುತ ಕೇಂದ್ರ ಸಚಿವರು ಮತ್ತು ರಾಜ್ಯ ಮುಖ್ಯಮಂತ್ರಿಗಳು ಉದಯನಿಧಿ ಅವರ ಬಗ್ಗೆ ಪ್ರತಿಕ್ರಿಯಿಸುವ ಮೊದಲು ನಿಜವಾಗಿ ಏನು ಮಾತನಾಡಿದ್ದಾರೆ ಎಂಬುದನ್ನು ಪರಿಶೀಲಿಸಬೇಕು ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ನಾನು ಯಾವುದೇ ಧರ್ಮದ ಶತ್ರುವಲ್ಲ: ಉದಯನಿಧಿ ಸ್ಟಾಲಿನ್

ಉದಯನಿಧಿಯ ಶಿರಚ್ಛೇದಕ್ಕೆ ₹10 ಕೋಟಿ ಬಹುಮಾನ ಘೋಷಣೆ

ಉದಯನಿಧಿಯ ಶಿರಚ್ಛೇದಕ್ಕೆ ₹ 10 ಕೋಟಿ ಬಹುಮಾನ ಘೋಷಿಸಿದ ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ ವಿರುದ್ಧ ಕ್ರಮ ಕೈಗೊಳ್ಳದ ಉತ್ತರ ಪ್ರದೇಶ ಸರ್ಕಾರವನ್ನು ಸ್ಟಾಲಿನ್ ತರಾಟೆಗೆ ತೆಗೆದುಕೊಂಡರು. ಸುಳ್ಳುಸುದ್ದಿ ಮತ್ತು ನಂಬಿಕೆಯ ವಿಷಯಗಳ ಮೇಲಿನ ದಾಳಿಗಳ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, “ಈ ಪರಿಸ್ಥಿತಿಯಲ್ಲಿ, ಗೌರವಾನ್ವಿತ ಪ್ರಧಾನಿಯವರು ಉದಯನಿಧಿ ಅವರ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಹೇಳಿದ್ದನ್ನು ಕೇಳಲು ಬೇಸರವಾಗಿದೆ ಎಂದಿದ್ದಾರೆ.

ಮೋದಿ ತಮ್ಮಮಂತ್ರಿಮಂಡಲದ ಸಭೆಯಲ್ಲಿ ಟೀಕೆಗಳಿಗೆ ಸರಿಯಾದ ಪ್ರತಿಕ್ರಿಯೆಯ ಅಗತ್ಯವಿದೆ ಎಂದು ಹೇಳಿದ್ದರು.

ಯಾವುದೇ ಹಕ್ಕು ಅಥವಾ ವರದಿಯನ್ನು ಪರಿಶೀಲಿಸಲು ಗೌರವಾನ್ವಿತ ಪ್ರಧಾನ ಮಂತ್ರಿಗಳು ಎಲ್ಲಾ ಸಂಪನ್ಮೂಲಗಳಿಗೆ ಪ್ರವೇಶವನ್ನು ಹೊಂದಿದ್ದಾರೆ. ಹಾಗಾದರೆ, ಗೌರವಾನ್ವಿತ ಪ್ರಧಾನ ಮಂತ್ರಿಗಳು ಉದಯನಿಧಿಯ ಬಗ್ಗೆ ಹರಡಿರುವ ಸುಳ್ಳುಗಳ ಬಗ್ಗೆ ತಿಳಿದಿಲ್ಲವೇ ಅಥವಾ ಅವರು ಹಾಗೆ ತಿಳಿದಿದ್ದಾರೆಯೇ? ‘ಒಂದು ರಾಷ್ಟ್ರ-ಒಂದು ಚುನಾವಣೆ’ಯನ್ನು ಪ್ರತಿಪಾದಿಸುತ್ತಿರುವ ಪ್ರಧಾನಿ ಮೋದಿ, ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾದಿಂದ ಭಯಗೊಂಡಿದ್ದಾರೆ.

ಬಿಜೆಪಿಯು ಸನಾತನ ಸಂಸ್ಥೆಯಲ್ಲಿನ ತಾರತಮ್ಯದ ಆಚರಣೆಗಳ ಬಗ್ಗೆ ನಿಜವಾದ ಕಾಳಜಿ ಹೊಂದಿಲ್ಲ. ಆದರೆ ವಿರೋಧ ಪಕ್ಷದ ಮೈತ್ರಿಯೊಳಗೆ ವಿಭಜನೆಯನ್ನು ಸೃಷ್ಟಿಸಲು ಹತಾಶವಾಗಿದೆ ಎಂಬುದು ಸ್ಪಷ್ಟವಾಗಿದೆ. ಇದನ್ನು ರಾಜಕೀಯ ಗಿಮಿಕ್ ಎಂದು ಗುರುತಿಸಲು ರಾಜಕೀಯ ಪ್ರತಿಭೆಯ ಅಗತ್ಯವಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.

ಸನಾತನ ಧರ್ಮ ವಿರೋಧಿ ಹೇಳಿಕೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ  ವಿರುದ್ಧ ವಾಗ್ದಾಳಿ ನಡೆಸಿದ ಉದಯನಿಧಿ, ಬಿಜೆಪಿ ನಾಯಕರು ತಮ್ಮ ಹೇಳಿಕೆಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ 9 ವರ್ಷಗಳಿಂದ ನಿಮ್ಮ (ಬಿಜೆಪಿ) ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ, ನಮ್ಮ ಕಲ್ಯಾಣಕ್ಕಾಗಿ ನೀವು ನಿಖರವಾಗಿ ಏನು ಮಾಡಿದ್ದೀರಿ ಎಂಬುದು ಫ್ಯಾಸಿಸ್ಟ್ ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶವು ಒಗ್ಗಟ್ಟಿನಿಂದ ಕೇಳುತ್ತಿರುವ  ಪ್ರಶ್ನೆಯಾಗಿದೆ. ಬಿಜೆಪಿ ನಾಯಕರು ಟಿಎನ್‌ಪಿಡಬ್ಲ್ಯೂಎಎ ಸಮಾವೇಶದಲ್ಲಿ ನನ್ನ ಭಾಷಣವನ್ನು ‘ಜನಾಂಗೀಯ ಹತ್ಯೆಗೆ ಪ್ರಚೋದನೆ’ ಎಂದು ತಿರುಚಿದ್ದಾರೆ. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಅಸ್ತ್ರವೆಂದು ಇದನ್ನು ಪರಿಗಣಿಸಿದ್ದಾರೆ ಎಂದು ಉದಯನಿಧಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Thu, 7 September 23

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ