Rajiv Gandhi Death Anniversary 2021: ರಾಜೀವ್ ಗಾಂಧಿ ಹಂತಕರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

MK Stalin:ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ಅಪರಾಧಿಗಳು 30 ವರ್ಷಗಳಿಂದ ಶಿಕ್ಷೆ ಅನುಭವಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಅವರ ಶಿಕ್ಷೆಯನ್ನು ಕಡಿತಗೊಳಿಸಿ ಬಿಡುಗಡೆಗೊಳಿಸಲು ಈಗಾಗಲೇ ಮನವಿ ಮಾಡಿದೆ. ನಮ್ಮ ಮನವಿಯನ್ನು ಪರಿಗಣಿಸಿ ಎಲ್ಲಾ 7 ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಕೋರಿ ಅವರು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

Rajiv Gandhi Death Anniversary 2021: ರಾಜೀವ್ ಗಾಂಧಿ ಹಂತಕರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್
ಎಂ.ಕೆ. ಸ್ಟಾಲಿನ್
Follow us
guruganesh bhat
|

Updated on: May 20, 2021 | 9:38 PM

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ರಾಷ್ಟ್ರಪತಿ ರಾಮನಾಥ್ ಕೋವಿಂದದ ಅವರಿಗೆ ಪತ್ರ ಬರೆದಿದ್ದಾರೆ. 2018ರಲ್ಲಿ ತಮಿಳುನಾಡು ಸರ್ಕಾರ ನೀಡಿದ್ದ ಶಿಫಾರಸುಗಳನ್ನು ಪರಿಗಣಿಸಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎಲ್ಲಾ 7 ಅಪರಾಧಿಗಳನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಗ್ರಹಿಸಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ಅಪರಾಧಿಗಳು 30 ವರ್ಷಗಳಿಂದ ಶಿಕ್ಷೆ ಅನುಭವಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಅವರ ಶಿಕ್ಷೆಯನ್ನು ಕಡಿತಗೊಳಿಸಿ ಬಿಡುಗಡೆಗೊಳಿಸಲು ಈಗಾಗಲೇ ಮನವಿ ಮಾಡಿದೆ. ಅಲ್ಲದೇ ಬಹುತೇಕ ರಾಜಕೀಯ ಪಕ್ಷಗಳು ಸಹ ಈ ಮನವಿಗೆ ದನಿಗೂಡಿಸಿವೆ. ನಮ್ಮ ಮನವಿಯನ್ನು ಪರಿಗಣಿಸಿ ಎಲ್ಲಾ 7 ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಕೋರಿ ಅವರು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

ವಿ.ಶ್ರೀಹರನ್ ಅಲಿಯಾಸದ್ ಮುರುಗನ್, ಈತನ ಪತ್ನಿ ನಳಿನಿ, ಸಾಂಥನ್, ಎಜಿ ಪೆರಾರಿವಾಲನ್, ಜಯಕುಮಾರ್, ರಾಬರ್ಟ್​ ಪಾಯಸ್ ಮತ್ತು ಪಿ.ರವಿಚಂದ್ರನ್ ಅವರುಗಳೇ ರಾಜೀವ್ ಗಾಂಧಿ ಹತ್ಯಗೈದ ಅಪರಾಧದಲ್ಲಿ ಶಿಕ್ಷೆ ಅನುಭವಿಸುತ್ತಿರುವವರು. ಇವರನ್ನು ಬಿಡುಗಡೆ ಮಾಡಬೇಕೆಂದು ಕೋರಿ 2018, ಸೆಪ್ಟೆಂಬರ್ 9ರಂದು ಅಂದಿನ ತಮಿಳುನಾಡು ರಾಜ್ಯಪಾಲರಾಗಿದ್ದ ಬನ್ವಾರಿಲಾಲ್ ಪುರೋಹಿತ್ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದರು. ಅಪರಾಧಿಗಳನ್ನು 3 ದಶಕಗಳ ಕಾಲ ಶಿಕ್ಷೆ ಅನುಭವಿಸಿದ್ದಾರೆ ಎಂಬ ಕಾರಣ ನೀಡಿ ಜೈಲುವಾಸದಿಂದ ಬಿಡುಗಡೆಗೊಳಿಸಲು ಕೋರಿದ್ದರು.

ನಾಳೆಯೇ ರಾಜೀವ್ ಗಾಂಧಿ ದಿವಂಗತರಾದ ದಿನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಲ್​ಟಿಟಿಇ ಉಗ್ರರಿಂದ ಹತರಾಗಿ 2021ರ ಮೇ 21ಕ್ಕೆ  30 ನೇ ವರ್ಷ. ತಮಿಳುನಾಡು ರಾಜಧಾನಿ ಚೆನ್ನೈ ಸಮೀಪದ ಪೆರಂಬದೂರು ಬಳಿ ಕಾಂಗ್ರೆಸ್​ ಪರ ಪ್ರಚಾರದಲ್ಲಿ ನಿರತರಾಗಿದ್ದ ರಾಜೀವ್ ಗಾಂಧಿ ತಮಗರಿವಿಲ್ಲದೇ ಉಗ್ರರಿಂದ ಮೃತರಾಗಿದ್ದರು.

ಎಲ್​ಟಿಟಿಟಿಯ ಸದಸ್ಯರು ಸ್ವತಃ ಮಾನವ ಬಾಂಬ್ ಆಗಿ ಪರಿವರ್ತನೆಗೊಂಡು ರಾಜೀವ್ ಗಾಂಧಿಯವರು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಪೆರಂಬದೂರ್​ಗೆ ಆಗಮಿಸಿದ್ದರು. ಪ್ರಧಾನಿಯವರಿಗೆ ನಮಸ್ಕರಿಸುವುದಾಗಿ ಕೆಳಗೆ ಬಾಗಿ ರಾಜೀವ್ ಗಾಂಧಿಯವರ ಪಾದಗಳನ್ನು ಸ್ಪರ್ಶಿಸುತ್ತಿದ್ದಂತೆಯೇ ಮಾನವ ಬಾಂಬ್ ಸಿಡಿದಿತ್ತು. ಮಾನವ ಬಾಂಬ್​ ಆಗಿದ್ದ ವ್ಯಕ್ತಿಯು ಸೇರಿ ಒಟ್ಟು 14 ಜನರು ಈ ಆತ್ಮಾಹುತಿ ಬಾಂಬ್​ ದಾಳಿಯನ್ನು ಜೀವ ಕಳೆದುಕೊಂಡಿದ್ದರು.

ಇದನ್ನೂ ಓದಿ: Rajiv Gandhi Death Anniversary 2021: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸ್ಮರಣಾರ್ಥ ನಾಳೆ ಸೇವಾ ಮತ್ತು ಸದ್ಭಾವನಾ ದಿನ ಆಚರಣೆಗೆ ಕಾಂಗ್ರೆಸ್ ಕರೆ

Anti Terrorism Day 2021 May 21: ನಾಳೆಯೇ ಭಯೋತ್ಪಾದನಾ ವಿರೋಧಿ ದಿನ: ಏನಿದರ ಮಹತ್ವ, ಆಚರಣೆಯ ಹಿಂದಿನ ಕಾರಣವೇನು?

(Tamil Nadu CM MK Stalin writes President Kovind to release Rajiv Gandhi Assassination Convicts)

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ