AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್

ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್
ಎಂ.ಕೆ. ಸ್ಟಾಲಿನ್​
Follow us
TV9 Web
| Updated By: ganapathi bhat

Updated on: Jun 05, 2021 | 11:12 PM

ಚೆನ್ನೈ: ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸಸ್ (ಏಮ್ಸ್- AIIMS) ನ್ನು ಮಧುರೈನಲ್ಲಿ ಸ್ಥಾಪಿಸಲು ತಡವಾಗುತ್ತಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಆ ಮೂಲಕ, ಯೋಜನೆ ಸಂಪೂರ್ಣವಾಗುವಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಕೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಬೇಕಾದ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಕೇಂದ್ರಕ್ಕೆ ತಿಳಿಸಿದ್ದಾರೆ.

ತಮಿಳುನಾಡು ರಾಜ್ಯ ಸರ್ಕಾರ, ಯೋಜನೆ ಪೂರ್ಣಗೊಳ್ಳಲು ಬೇಕಾದಂತೆ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಸಿದ್ಧವಿದೆ. ಆದರೆ, ಪ್ರಧಾನಿ ಮೋದಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಸ್ಟಾಲಿನ್ ಹೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಮಧುರೈನಲ್ಲಿ 2019, ಜನವರಿ 27ರಂದು ಭೂಮಿ ಪೂಜೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಮರುಮಾತಿಲ್ಲದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಭೂಮಿ ಹಸ್ತಾಂತರ ಮಾಡಿದೆ ಎಂಬುದನ್ನು ನೆನಪಿಸಿಕೊಂಡಿದ್ದಾರೆ.

ಆದರೆ, ಸದ್ಯ ಕಂಪೌಂಡ್ ವಾಲ್ ಕೆಲಸವೊಂದೇ ಸಂಪೂರ್ಣವಾಗಿದ್ದು, ಉಳಿದಂತೆ ಯಾವುದೇ ಬೆಳವಣಿಗೆ ಯೋಜನೆಯಲ್ಲಿ ಕಂಡುಬಂದಿಲ್ಲ. ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಯೋಜನೆಯ ಸಂಬಂಧ ಕೇಂದ್ರ ಕೆಲವು ಸಮಿತಿಯನ್ನು ರಚಿಸಿದೆ ಆದರೆ ಅದಕ್ಕೆ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಕೆಲ ಸಮಸ್ಯೆ ಉಂಟಾಗುತ್ತಿದೆ ಎಂದು ಸ್ಟಾಲಿನ್ ವಿವರಿಸಿದ್ದಾರೆ. ಹೀಗಾಗಿ ಕಾರ್ಯದಲ್ಲಿ ಮೋದಿ ಖುದ್ದು ಮಧ್ಯಪ್ರವೇಶ ಮಾಡಬೇಕು. ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ ತಮಿಳುನಾಡು: ಸಿಎಂ ಸ್ಟಾಲಿನ್

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ

(Tamil Nadu CM MK Stalin writes to PM Narendra Modi flags delay in setting up AIIMS)

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್