ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಕ್ರೀಡಾ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಅವರ ಸಂಪುಟಕ್ಕೆ ಕ್ರೀಡಾ ಸಚಿವರಾಗಿ ಸೇರ್ಪಡೆಯಾಗಿದ್ದಾರೆ. ಇಂದು ಉದಯನಿಧಿ ತಮಿಳುನಾಡಿನ ಕ್ರೀಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಚೆನ್ನೈ: ತಮಿಳುನಾಡು (Tamil Nadu) ಸಿಎಂ ಎಂಕೆ ಸ್ಟಾಲಿನ್ (MK Stalin)ಪುತ್ರ ಸಚಿವ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಅವರ ಸಂಪುಟಕ್ಕೆ ಕ್ರೀಡಾ ಸಚಿವರಾಗಿ ಸೇರ್ಪಡೆಯಾಗಿದ್ದಾರೆ. ಇಂದು ಉದಯನಿಧಿ ತಮಿಳುನಾಡಿನ ಕ್ರೀಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಡಿಎಂಕೆ ಶಾಸಕ ಮತ್ತು ಪಕ್ಷದ ಯುವ ವಿಭಾಗದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಬುಧವಾರ ಸಚಿವರಾಗಿ ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ಉದಯನಿಧಿ ಅವರಿಗೆ ರಾಜ್ಯಪಾಲ ಆರ್‌ಎನ್ ರವಿ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಇದನ್ನು ಓದಿ: ಡಿಎಂಕೆ ಪಕ್ಷದ ಅಧ್ಯಕ್ಷರಾಗಿ 2ನೇ ಬಾರಿ ಎಂಕೆ ಸ್ಟಾಲಿನ್ ಆಯ್ಕೆ
ತಮ್ಮ ಟ್ರೇಡ್‌ಮಾರ್ಕ್ ಬಿಳಿ ಅಂಗಿಯನ್ನು ಧರಿಸಿ, ಅದರ ಮೇಲೆ ಡಿಎಂಕೆಯ ಯುವ ವಿಭಾಗದ ಲಾಂಛನವನ್ನು ಹಾಕಿರುವ ಬಟ್ಟೆಯನ್ನು ಧರಿಸಿ ಎಲ್ಲರನ್ನೂ ಆರ್ಕಷಿಸಿದರು. ಉದಯನಿಧಿ ಅವರು ತಮ್ಮ ತಂದೆ, ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ವಿಶಿಷ್ಟ ಶೈಲಿಯಲ್ಲಿ ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
10 ನಿಮಿಷದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಯಿತು. ಉದಯನಿಧಿ ಅವರನ್ನು ರಾಜ್ಯ ಸಚಿವರು ಮತ್ತು ಪಕ್ಷದ ಹಿರಿಯ ನಾಯಕರು ಅಭಿನಂದಿಸಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:15 am, Wed, 14 December 22