AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸಿಎಂಗೆ ಕೋವಿಡ್-19 ಪಾಸಿಟಿವ್, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು  ಇಂದು (ಗುರುವಾರ)  ಬೆಳಗ್ಗೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡು ಸಿಎಂಗೆ ಕೋವಿಡ್-19 ಪಾಸಿಟಿವ್, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು
MK Stalin
TV9 Web
| Edited By: |

Updated on: Jul 14, 2022 | 1:24 PM

Share

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಮಂಗಳವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು  ಇಂದು (ಗುರುವಾರ)  ಬೆಳಗ್ಗೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಹೊರಡಿಸಿದ ವೈದ್ಯಕೀಯ ಬುಲೆಟಿನ್‌ನಲ್ಲಿ ಸ್ಟಾಲಿನ್ ಅವರನ್ನು “ಕೋವಿಡ್-ಸಂಬಂಧಿತ ರೋಗಲಕ್ಷಣಗಳ ಪರೀಕ್ಷಿಸಲು ಮತ್ತು  ವೀಕ್ಷಣೆಗಾಗಿ ದಾಖಲಿಸಲಾಗಿದೆ ಎಂದು ಹೇಳಿದೆ.

ಮಂಗಳವಾರ, ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ ನನಗೆ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು  ಕೋವಿಡ್-19 ಪಾಸಿಟಿವ್ ಎಂದು ದೃಢಪಟ್ಟಿದೆ. ಯಾವುದೇ ಆಂತಕ ಪಡುವ ಅಗತ್ಯ ಇಲ್ಲ, ಈಗಾಗಗಲ್ಲೇ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.  ಎಲ್ಲರು ಮಾಸ್ಕ್ ಧರಿಸೋಣ, ಲಸಿಕೆಯನ್ನು ಪಡೆಯೋಣ ಮತ್ತು ಸುರಕ್ಷಿತವಾಗಿರೋಣ ಎಂದು  ಟ್ವೀಟ್ ಮಾಡಿದ್ದಾರೆ.

Follow Us
TV9 Web
TV9 Web

TV9 Kannada

Read More