AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಗೆ ಚಿನ್ನದ ನೆಕ್ಲೇಸ್ ನೀಡಿದ ತಮಿಳುನಾಡು ಸಿಎಂ ವಿಜಯ್

ಟಿವಿಕೆ ಅಸೋಸಿಯೇಷನ್ ​​ಆಯೋಜಿಸಿದ್ದ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ 10 ಮತ್ತು 12ನೇ ತರಗತಿಯ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಿದರು. ಈ ವೇಳೆ ಪಿಯುಸಿಯಲ್ಲಿ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿಯರಿಗೆ ಸಿಎಂ ವಿಜಯ್ ಚಿನ್ನದ ನೆಕ್ಲೇಸ್ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ವಿಜಯ್, "ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ; ನಾನು ಯಾವಾಗಲೂ ನಿಮ್ಮ ಅಣ್ಣನಾಗಿ ಬಂದಿದ್ದೇನೆ" ಎಂದು ಹೇಳಿದರು.

ಪಿಯುಸಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಗೆ ಚಿನ್ನದ ನೆಕ್ಲೇಸ್ ನೀಡಿದ ತಮಿಳುನಾಡು ಸಿಎಂ ವಿಜಯ್
ರ‍್ಯಾಂಕ್ ಪಡೆದ ವಿದ್ಯಾರ್ಥಿನಿಗೆ ಚಿನ್ನದ ನೆಕ್ಲೇಸ್ ನೀಡಿದ ತಮಿಳುನಾಡು ಸಿಎಂ ವಿಜಯ್Image Credit source: PTI
ಸುಷ್ಮಾ ಚಕ್ರೆ
|

Updated on: Nov 04, 2026 | 10:00 PM

Share

ಚೆನ್ನೈ, ನವೆಂಬರ್ 4: ತಮಿಳುನಾಡಿನ 10 ಮತ್ತು 12ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಚೆನ್ನೈನಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾರಂಭದಲ್ಲಿ ದ್ವಿತೀಯ ಪಿಯುಸಿಯ ರಾಜ್ಯ ಮಟ್ಟದ ಪ್ರಥಮ ರ‍್ಯಾಂಕ್ ವಿಜೇತೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಚಿನ್ನದ ನೆಕ್ಲೇಸ್ ನೀಡಿ ಗೌರವಿಸಿದರು. ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಆಯೋಜಿಸಿದ್ದ ಶೈಕ್ಷಣಿಕ ಪುರಸ್ಕಾರ ಸಮಾರಂಭದ ಮೊದಲ ಹಂತದ ಕಾರ್ಯಕ್ರಮದಲ್ಲಿ ಸಿಎಂ ವಿಜಯ್ ಸ್ವತಃ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳು ಮತ್ತು ನಗದು ಬಹುಮಾನಗಳನ್ನು ವಿತರಿಸಿದರು. ಬೆಳಿಗ್ಗೆಯಿಂದಲೇ ಸಭಾಂಗಣಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

600ಕ್ಕೆ 566 ಅಂಕ ಗಳಿಸಿದ ತಿರುವಣ್ಣಾಮಲೈನ ಮೋನಿಕಾ ಮಾತನಾಡಿ, “ಮುಖ್ಯಮಂತ್ರಿಯವರಿಂದಲೇ ಈ ಪ್ರಶಸ್ತಿ ಸ್ವೀಕರಿಸಿರುವುದು ಅತ್ಯಂತ ವಿಶೇಷ ಕ್ಷಣವಾಗಿದೆ. ಇದು ಮುಂಬರುವ ತಲೆಮಾರಿಗೆ ಪ್ರೇರಣೆಯಾಗಲಿದೆ” ಎಂದಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಬೆಳಗ್ಗೆ 6 ಗಂಟೆಗೆ ಸಿನಿಮಾ ಪ್ರದರ್ಶಿಸಲು ಅನುಮತಿ ನೀಡಿದ ಸಿಎಂ ವಿಜಯ್

ಈ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುವಂತೆ ಮತ್ತು ಭ್ರಷ್ಟಾಚಾರ ಹಾಗೂ ಮಾದಕ ದ್ರವ್ಯಗಳಿಂದ ದೂರವಿರುವಂತೆ ಕರೆ ನೀಡಿದರು. “ನಾನಿಲ್ಲಿ ರಾಜಕೀಯ ಮಾತನಾಡಲು, ವೋಟ್ ಕೇಳಲು ಅಥವಾ ನನ್ನ ಪಕ್ಷದ ಬಗ್ಗೆ ಮಾತನಾಡಲು ಬಂದಿಲ್ಲ. ಸದ್ಯಕ್ಕೆ ನಿಮಗೆ ಪಕ್ಷದ ರಾಜಕೀಯದ ಅಗತ್ಯವಿಲ್ಲ. ಚೆನ್ನಾಗಿ ಓದಿ, ದೊಡ್ಡ ಸಾಧನೆ ಮಾಡಿ, ನಿಮ್ಮ ಜೀವನವನ್ನು ಬದಲಾಯಿಸಿಕೊಳ್ಳಿ. ಆ ನಂತರ ನಮ್ಮ ಸಮಾಜ ಮತ್ತು ತಮಿಳುನಾಡಿನ ಬಗ್ಗೆ ಯೋಚಿಸಬಹುದು.” ಎಂದಿದ್ದಾರೆ.

ಇದನ್ನೂ ಓದಿ: ಮುರಸು ಚಂಡಮಾರುತ: ನವೆಂಬರ್ 3ರ ಬೆಳಗಿನ ಜಾವ ಆಂಧ್ರಕ್ಕೆ ಅಪ್ಪಳಿಸುವ ಸಾಧ್ಯತೆ, ತಮಿಳುನಾಡು, ಒಡಿಶಾದಲ್ಲೂ ಕಟ್ಟೆಚ್ಚರ

“ಸಿನಿಮಾ ರಂಗದಿಂದ ಆಡಳಿತಕ್ಕೆ ಬಂದಿರುವ ನಾನು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಯನ್ನು ಮನಸ್ಸಿನಲ್ಲಿಟ್ಟುಕೊಂಡೇ ರಾಜಕೀಯಕ್ಕೆ ಬಂದಿದ್ದೇನೆ. ನಿಮ್ಮ ಹಾದಿಯಲ್ಲಿ ಜನರು ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದರೆ, ನಿಮ್ಮ ಗೆಲುವು ಈಗಾಗಲೇ ಖಚಿತವಾಗಿದೆ ಎಂದರ್ಥ. ಆದ್ದರಿಂದ ಸವಾಲುಗಳಿಗೆ ಅಂಜದಿರಿ.” ಎಂದು ಸಿಎಂ ವಿಜಯ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ