ತಮಿಳುನಾಡಿನ ಸರ್ಕಾರಿ ಶಾಲೆಯಲ್ಲಿ ವಿಭೂತಿ ಧರಿಸಿದ ವಿದ್ಯಾರ್ಥಿನಿಗೆ ಕಿರುಕುಳ; ಬಲವಂತವಾಗಿ ಮತಾಂತರಕ್ಕೆ ಯತ್ನ

ಶಿಕ್ಷಕನು ದೇವರಲ್ಲಿ ಬಲಶಾಲಿ ಯಾರು? ಎಂದು ಕೇಳಿದಾಗ ನಾನು ಶಿವ ಎಂದು ಉತ್ತರಿಸಿದೆ. ಅದಕ್ಕೆ ಅವರು, ಶಿವನಲ್ಲ, ಎಲ್ಲ ದೇವರುಗಳಲ್ಲಿ ಬಲಶಾಲಿ ಜೀಸಸ್ ಎಂದು ಹೇಳಿದರು ಎಂದು ಬಾಲಕಿ ವಿವರಿಸಿದ್ದಾಳೆ.

ತಮಿಳುನಾಡಿನ ಸರ್ಕಾರಿ ಶಾಲೆಯಲ್ಲಿ ವಿಭೂತಿ ಧರಿಸಿದ ವಿದ್ಯಾರ್ಥಿನಿಗೆ ಕಿರುಕುಳ; ಬಲವಂತವಾಗಿ ಮತಾಂತರಕ್ಕೆ ಯತ್ನ
ಮತಾಂತರದ ಆರೋಪ ಮಾಡಿದ ಬಾಲಕಿ
Follow us
| Edited By: Sushma Chakre

Updated on: Apr 26, 2022 | 3:18 PM

ಚೆನ್ನೈ: ತಮಿಳುನಾಡಿನ (Tamil Nadu) ತಿರುಪ್ಪೂರ್‌ನ ಸರ್ಕಾರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಧರ್ಮದ ಕಾರಣಕ್ಕೆ ಇಬ್ಬರು ಶಿಕ್ಷಕರು ಹಲ್ಲೆ ನಡೆಸಿ, ಬಲವಂತವಾಗಿ ಮತಾಂತರ (Conversion) ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾಳೆ. ನನ್ನ ಶಿಕ್ಷಕರು ನನಗೆ ವಿಭೂತಿ ಧರಿಸಿರುವ ಕತ್ತೆ ಎಂದು ಜರಿದಿದ್ದಾರೆ. ವಿಭೂತಿ ಧರಿಸಿದ್ದಕ್ಕೆ ನನಗೆ ಕಿರುಕುಳ ನೀಡಿದ್ದಾರೆ. ಒಮ್ಮೆ ಆ ಶಿಕ್ಷಕಿ ತನ್ನ ಕೈಯನ್ನು ನೀರಿನಲ್ಲಿ ಇಟ್ಟು ಯೇಸುವಿನ ಬಗ್ಗೆ ಹೇಳಿದರು. ನಂತರ, ತನ್ನ ಕೈಯಲ್ಲಿ ನೀರಿನಿಂದ ಹಿಂದೂವಾದ (Hindu) ನನ್ನ ಹೊಟ್ಟೆಯನ್ನು ಮೂರು ಬಾರಿ ಮುಟ್ಟಿದರು ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ಶಿಕ್ಷಕಿ ತನ್ನ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಕ್ರೈಸ್ತರ ಸಂಪ್ರದಾಯದಂತೆ ಪ್ರಾರ್ಥನೆ ಮಾಡುವಂತೆ ಹೇಳಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ. ಒಂದು ದಿನ ಆ ಶಿಕ್ಷಕಿ ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗ ತಮ್ಮ ಪ್ರಾಣವನ್ನು ಕೊಟ್ಟು ನಮ್ಮನ್ನು ರಕ್ಷಿಸಿದವರು ಯಾರು? ಎಂದು ಕೇಳಿದರು. ನಾವು ಬೇರೆ ಬೇರೆ ಹೆಸರುಗಳನ್ನು ಹೇಳಿದೆವು. ಆದರೆ, ನಾವು ಯೇಸುವಿನ ಹೆಸರನ್ನು ಏಕೆ ಹೇಳಲಿಲ್ಲ? ಎಂದು ಅವರು ನಮ್ಮನ್ನು ಗದರಿಸಿದರು ಎಂದು ಆಕೆ ಹೇಳಿದ್ದಾಳೆ.

ಇನ್ನೋರ್ವ ಶಿಕ್ಷಕನು ದೇವರಲ್ಲಿ ಬಲಶಾಲಿ ಯಾರು? ಎಂದು ಕೇಳಿದಾಗ ನಾನು ಶಿವ ಎಂದು ಉತ್ತರಿಸಿದೆ. ಅದಕ್ಕೆ ಅವರು, ಶಿವನಲ್ಲ, ಎಲ್ಲ ದೇವರುಗಳಲ್ಲಿ ಬಲಶಾಲಿ ಜೀಸಸ್ ಎಂದು ಹೇಳಿದರು ಎಂದು ಬಾಲಕಿ ವಿವರಿಸಿದ್ದಾಳೆ. ಈ ಕುರಿತು ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ತನಿಖೆ ಆರಂಭಿಸಲಾಗಿದೆ.

ಬಿಜೆಪಿಯಿಂದ ಕ್ರಮಕ್ಕೆ ಆಗ್ರಹ: ಈ ಘಟನೆ ಬಗ್ಗೆ ಮಾತನಾಡಿದ ಬಿಜೆಪಿ ವಕ್ತಾರ ನಾರಾಯಣ ತ್ರಿಪಾಠಿ, ಆಡಳಿತಾರೂಢ ಡಿಎಂಕೆ ಸರ್ಕಾರ ಬಲವಂತದ ಮತಾಂತರದ ಘಟನೆಗಳಿಗೆ ಮೂಕಪ್ರೇಕ್ಷಕವಾಗಿದೆ ಎಂದು ಆರೋಪಿಸಿದ್ದಾರೆ ಪೊಲೀಸರು ಹಾಗೂ ಸರಕಾರ ಕೂಡಲೇ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ಮತಾಂತರವು ಅತ್ಯಂತ ಅಪಾಯಕಾರಿ ವಿಷಯವಾಗಿದ್ದು, ತಮಿಳುನಾಡಿನಲ್ಲಿ ತಕ್ಷಣದಿಂದಲೇ ಮತಾಂತರ ವಿರೋಧಿ ಕಾನೂನು ಜಾರಿಗೆ ತರಬೇಕು ಎಂದಿದ್ದಾರೆ.

ಈ ಹಿಂದೆ ಕನ್ಯಾಕುಮಾರಿಯ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯೊಳಗೆ ಕ್ರೈಸ್ತ ಧರ್ಮ ಪ್ರಚಾರ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಯೊಬ್ಬ ಆರೋಪಿಸಿದ್ದಕ್ಕೆ ಅವರನ್ನು ಅಮಾನತುಗೊಳಿಸಲಾಗಿತ್ತು. ಜನವರಿಯಲ್ಲಿ ತಮಿಳುನಾಡಿನ ತಂಜಾವೂರಿನಲ್ಲಿ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಬಲವಂತವಾಗಿ ಮತಾಂತರಕ್ಕೆ ಯತ್ನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಇದನ್ನೂ ಓದಿ: ವಿದ್ಯಾರ್ಥಿಗಳ ಮತಾಂತರಕ್ಕೆ ಯತ್ನ ಆರೋಪ; ಯುವಕನನ್ನು ಥಳಿಸಿ ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

Crime News: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ತಾಜಾ ಸುದ್ದಿ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್