ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ

ಕೊರೊನಾ ಪ್ಯಾಕೇಜ್​ನ ಅನುಸಾರ ತಮಿಳುನಾಡಿನ ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಬಡ ಕುಟುಂಬಗಳಿಗೆ 4 ಸಾವಿರ ಪರಿಹಾರ ನಿಧಿ ಘೋಷಣೆ ಮಾಡಲಾಗಿದೆ.

ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ
ಎಂ.ಕೆ.ಸ್ಟಾಲಿನ್​
Follow us
TV9 Web
| Updated By: ganapathi bhat

Updated on:Aug 23, 2021 | 12:30 PM

ಚೆನ್ನೈ: ಕೊರೊನಾ ಎರಡನೇ ಅಲೆಯಿಂದ ಇಡೀ ದೇಶ ಸಂಕಷ್ಟಕ್ಕೆ ಈಡಾಗಿದೆ. ವಿವಿಧ ರಾಜ್ಯ ಸರ್ಕಾರಗಳು ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ತಮ್ಮದೇ ರೀತಿಯಲ್ಲಿ ಕೆಲಸ ಮಾಡುತ್ತಿವೆ. ತಮಿಳುನಾಡು ಸರ್ಕಾರವೀಗ ಕೊರೊನಾ ಪ್ಯಾಕೇಜ್ ಘೋಷಿಸಿದೆ. ಕೊವಿಡ್ ವಿರುದ್ಧ ಹೋರಾಡಲು ಹಲವು ಮಹತ್ತರ ನಿರ್ಧಾರಗಳನ್ನು ಕೈಗೊಂಡಿದೆ.

ಕೊರೊನಾ ಪ್ಯಾಕೇಜ್​ನ ಅನುಸಾರ ತಮಿಳುನಾಡಿನ ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಬಡ ಕುಟುಂಬಗಳಿಗೆ 4 ಸಾವಿರ ಪರಿಹಾರ ನಿಧಿ ಘೋಷಣೆ ಮಾಡಲಾಗಿದೆ. ಪರಿಹಾರ ನಿಧಿಯ ಮೊದಲನೆ ಕಂತು, 2 ಸಾವಿರ ರೂಪಾಯಿಯನ್ನು ಇಂದಿನಿಂದ ವಿತರಣೆ ಮಾಡಲಾಗುತ್ತದೆ. ಜೊತೆಗೆ, ಇಂದಿನಿಂದ 1 ಲೀಟರ್ ಆವಿನ್ ಹಾಲಿಗೆ 3ರೂ. ಕಡಿತ ಮಾಡಲಾಗಿದೆ. ಬಟ್ಟೆ ಸೋಪು, ಮೈ ಸೋಪು ಸೇರಿ 13 ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,11,170 ಹೊಸ ಪ್ರಕರಣಗಳನ್ನು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2.46 ಕೋಟಿಗೆ ತಲಪಿದ. ದೇಶಾದ್ಯಂತ 4,077 ಸಾವುಗಳು ವರದಿಯಾಗಿವೆ. ಈಗ ಸಾವಿನ ಸಂಖ್ಯೆ 2,70,284 ಆಗಿದ್ದು ಸಕ್ರಿಯ ಪ್ರಕರಣಗಳು 26.18 ಲಕ್ಷದಷ್ಟಿವೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಕೊವಿಡ್ -19 ಪರಿಸ್ಥಿತಿಯನ್ನು ನಿಭಾಯಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೆಂಟಿಲೇಟರ್‌ಗಳು ಬಳಕೆಯಾಗದೆ ಇರುವ ವರದಿಗಳ ನಂತರ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ಒದಗಿಸಿದವರ ಬಗ್ಗೆ ತಕ್ಷಣ ಆಡಿಟ್ ಮಾಡಬೇಕೆಂದು ಮೋದಿ ಕರೆ ನೀಡಿದರು. ರಾಜ್ಯಗಳು ತಮ್ಮ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರದಿ ಮಾಡುವಾಗ ಪಾರದರ್ಶಕವಾಗಿರಬೇಕು ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನಲ್ಲಿ 33,658 ಹೊಸ ಪ್ರಕರಣ, 303 ಸಾವು ತಮಿಳುನಾಡಿನಲ್ಲಿ ಶನಿವಾರ 33,658 ಹೊಸ ಪ್ರಕರಣಗಳು ವರದಿ ಆಗಿದ್ದು 303 ಸಾವು ಸಂಭವಿಸಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 15,65,035 ಆಗಿದೆ. 20,905 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 4,32,344 ಮಂದಿ ಸಾವಿಗೀಡಾಗಿದ್ದಾರೆ.

ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು ರಾಜ್ಯಗಳು ಕರ್ನಾಟಕ- 41,664 ಪ್ರಕರಣಗಳು, ಮಹಾರಾಷ್ಟ್ರ -34,848 ಪ್ರಕರಣಗಳು, ತಮಿಳುನಾಡು -33,658 ಪ್ರಕರಣಗಳು, ಕೇರಳ – 32,680 ಪ್ರಕರಣಗಳು ಮತ್ತು ಆಂಧ್ರಪ್ರದೇಶ 22,517 ಪ್ರಕರಣಗಳನ್ನು ದಾಖಲಿಸಿದೆ. ಈ ಐದು ರಾಜ್ಯಗಳಿಂದ 53.15% ಹೊಸ ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ ಮಾತ್ರ ಶೇ 13.39 ಹೊಸ ಪ್ರಕರಣಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಲಾಕ್​ಡೌನ್ ಪ್ಯಾಕೇಜ್​ನ ಕಾರ್ಯ ಯೋಜನೆ ರೂಪಿಸಲು ಮೌಖಿಕ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ

Karnataka Lockdown Package: ಲಾಕ್​ಡೌನ್ ಪ್ಯಾಕೇಜ್ ಘೋಷಣೆ ಬಗ್ಗೆ ಸುಳಿವು ನೀಡಿದ ಕಂದಾಯ ಸಚಿವ ಆರ್.ಅಶೋಕ್

Published On - 3:27 pm, Sun, 16 May 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್