Tamil Nadu: ರಾಜ್ಯಪಾಲರ ಹತ್ಯೆ ಹೇಳಿಕೆ ನೀಡಿದ ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿ ಅಮಾನತು

ತಮಿಳುನಾಡಿನ ಆಡಳಿತಾರೂಢ ಡಿಎಂಕೆ (DMK) ಪಕ್ಷ ಮತ್ತು ರಾಜ್ಯಪಾಲ ಆರ್​.ಎನ್.ರವಿ (RN Ravi) ನಡುವಣ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿ ರಾಜ್ಯಪಾಲರ ಹತ್ಯೆ ಹೇಳಿಕೆ ನೀಡಿದ್ದರು.

Tamil Nadu: ರಾಜ್ಯಪಾಲರ ಹತ್ಯೆ ಹೇಳಿಕೆ ನೀಡಿದ ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿ ಅಮಾನತು
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಮತ್ತು ಡಿಎಂಕೆ ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತುಗೊಂಡ ಶಿವಾಜಿ ಕೃಷ್ಣಮೂರ್ತಿಉ
Follow us
TV9 Web
| Updated By: Rakesh Nayak Manchi

Updated on:Jan 14, 2023 | 9:57 PM

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ (Tamil Nadu Governor R.N.Ravi) ಹತ್ಯೆ ಹೇಳಿಕೆ ನೀಡಿದ ತಮಿಳುನಾಡಿನ ಆಡಳಿತಾರೂಢ ಡಿಎಂಕೆ (DMK) ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿ (Shivaji Krishna Murthy) ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ರಾಜ್ಯಪಾಲರು ತಮ್ಮ ವಿಧಾನಸಭೆ ಭಾಷಣದಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಹೇಳಲು ನಿರಾಕರಿಸಿದರೆ ಅವರ ಮೇಲೆ ಹಲ್ಲೆ ಮಾಡುವ ಹಕ್ಕು ನನಗಿಲ್ಲವೇ? ನೀವು (ರಾಜ್ಯಪಾಲರು) ತಮಿಳುನಾಡು ಸರ್ಕಾರ ನೀಡಿದ ಭಾಷಣವನ್ನು ಓದದಿದ್ದರೆ ಕಾಶ್ಮೀರಕ್ಕೆ ಹೋಗಿ, ನಾವು ಭಯೋತ್ಪಾದಕರನ್ನು ಕಳುಹಿಸುತ್ತೇವೆ. ಅವರು ನಿಮ್ಮನ್ನು ಗುಂಡಿಕ್ಕಿ ಕೊಲ್ಲುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಶಿವಾಜಿ ಕೃಷ್ಣಮೂರ್ತಿ ಹೇಳಿದ್ದರು.

ರಾಜ್ಯ ಸರ್ಕಾರ ಸಿದ್ಧಪಡಿಸಿಕೊಟ್ಟಿದ್ದ ಭಾಷಣದಿಂದ ಡಾ. ಬಿ.ಆರ್. ಅಂಬೇಡ್ಕರ್, ಪೆರಿಯಾರ್ ಮತ್ತಿತರರ ಹೆಸರುಗಳನ್ನು ರಾಜ್ಯಪಾಲರು ಕೈಬಿಟ್ಟಿದ್ದರು ಎನ್ನಲಾಗಿದೆ. ಇದನ್ನು ಡಿಎಂಕೆ ಮತ್ತು ಆಡಳಿತಾರೂಢ ಮಿತ್ರಪಕ್ಷಗಳು ಖಂಡಿಸಿವೆ. ರಾಜ್ಯಪಾಲರ ನಿವಾಸದ ಎದುರು ಪ್ರತಿಭಟನೆಯನ್ನೂ ನಡೆಸಿವೆ. ಇನ್ನೊಂದೆಡೆ ಬಿಜೆಪಿ, ಕೃಷ್ಣಮೂರ್ತಿಯನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದೆ. ಡಿಎಂಕೆಗೆ ಭಯೋತ್ಪಾದಕರ ನಂಟಿದೆ ಎಂದೂ ಬಿಜೆಪಿ ಆರೋಪಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: Odisha Stampede: ಒಡಿಶಾದಲ್ಲಿ ಮಕರ ಮೇಳದಲ್ಲಿ ಕಾಲ್ತುಳಿತ; ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ರಾಜ್ಯಪಾಲರ ಬಗ್ಗೆ ಶಿವಾಜಿ ಕೃಷ್ಣಮೂರ್ತಿ ನೀಡಿರುವ ಹೇಳಿಕೆಯಿಂದ ಡಿಎಂಕೆ ಅಂತರ ಕಾಯ್ದುಕೊಂಡಿದೆ. ನಮ್ಮ ಪಕ್ಷವು ರಾಜ್ಯಪಾಲರನ್ನು ಗೌರವಿಸುತ್ತದೆ. ದ್ವೇಷದಿಂದ ಕೂಡಿದ ಹೇಳಿಕೆಯು ವೈಯಕ್ತಿಕವಾದದ್ದೇ ವಿನಃ ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಡಿಎಂಕೆ ಹೇಳಿದೆ.

ಡಿಎಂಕೆ ನಾಯಕ ಕೃಷ್ಣಮೂರ್ತಿ ಹೇಳಿದ್ದೇನು?

‘ಸಂವಿಧಾನಶಿಲ್ಪಿ ಅಂಬೇಡ್ಕರ್ ಹೆಸರನ್ನು ಭಾಷಣದಲ್ಲಿ ಉಲ್ಲೇಖಿಸಲು ತಮಿಳುನಾಡಿನಲ್ಲಿ ಈ ವ್ಯಕ್ತಿ (ರಾಜ್ಯಪಾಲರನ್ನು ಉದ್ದೇಶಿಸಿ) ನಿರಾಕರಿಸಿದರೆ ನಾನು ಚಪ್ಪಲಿಯಿಂದ ಹೊಡೆಯಬಹುದಲ್ಲವೇ? ಇವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವರಲ್ಲವೇ? ಅಂಬೇಡ್ಕರ್ ಅವರು ಸಂವಿಧಾನ ರಚಿಸಿದವರಲ್ಲವೇ? ಅಂಥವರ ಹೆಸರನ್ನು ಹೇಳಲಾಗದಿದ್ದರೆ ನೀವು (ರಾಜ್ಯಪಾಲರು) ಕಾಶ್ಮೀರಕ್ಕೆ ಹೋಗಿ. ಅಲ್ಲಿ ನಿಮ್ಮನ್ನು ಗುಂಡಿಕ್ಕಿ ಹತ್ಯೆ ಮಾಡಲು ನಾವು ತೀವ್ರವಾದಿಯನ್ನು ಕಳುಹಿಸುತ್ತೇವೆ’ ಎಂದು ಶಿವಾಜಿ ಕೃಷ್ಣಮೂರ್ತಿ ಹೇಳಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Sat, 14 January 23

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ