ಚೆನ್ನೈ: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ರಾಜಾ ಕಣ್ಣಪ್ಪನ್ ಅವರು ಸಾರ್ವಜನಿಕ ಸಮಾರಂಭದಲ್ಲಿ ಸ್ಟಾಲಿನ್ ಕುಟುಂಬದ ಕುಡಿ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಎಂದು ಉಲ್ಲೇಖಿಸಿದ ನಂತರ ತಮಿಳುನಾಡು ರಾಜಕೀಯದಲ್ಲಿ ರಾಜ್ಯ ಯುವ ಕಲ್ಯಾಣ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಶೀಘ್ರದಲ್ಲೇ ಉಪಮುಖ್ಯಮಂತ್ರಿ ಹುದ್ದೆಗೆ ಏರಿಸಬಹುದು ಎಂಬ ಊಹಾಪೋಹಗಳು ತುಂಬಿದೆ. ಆದರೆ, ತಕ್ಷಣವೇ ತಮ್ಮನ್ನು ತಾವು ಸರಿಪಡಿಸಿಕೊಂಡ ಅವರು, ಆಗಸ್ಟ್ 19ರ ನಂತರವೇ ಉದಯನಿಧಿ ಅವರನ್ನು ಉಪಮುಖ್ಯಮಂತ್ರಿ ಎಂದು ಉಲ್ಲೇಖಿಸಬಹುದು ಎಂದು ಸಲಹೆ ನೀಡಿದರು.
ಈ ಮೂಲಕ ಉದಯನಿಧಿ ಅವರನ್ನು ಶೀಘ್ರದಲ್ಲೇ ಉಪಮುಖ್ಯಮಂತ್ರಿಯಾಗಿ ಉನ್ನತೀಕರಿಸುವ ಸಾಧ್ಯತೆ ಇದೆ ಎಂಬ ಸ್ಪಷ್ಟ ಸೂಚನೆ ಸಿಕ್ಕಿದೆ.
ಇದನ್ನೂ ಓದಿ: ತಮಿಳುನಾಡನ್ನು ನಿರ್ಲಕ್ಷಿಸಲಾಗಿದೆ ಎಂಬ ಎಂಕೆ ಸ್ಟಾಲಿನ್ ಆರೋಪ ‘ಸತ್ಯಕ್ಕೆ ದೂರ’ವಾದುದು: ಕೇಂದ್ರ
ಮುಖ್ಯಮಂತ್ರಿ ಸ್ಟಾಲಿನ್ ಅಮೆರಿಕ ಪ್ರವಾಸ ಕೈಗೊಳ್ಳುವ ಮುನ್ನ ಅವರ ಪುತ್ರ ಉದಯನಿಧಿ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಐಎಎನ್‌ಎಸ್ ಈ ಹಿಂದೆ ವರದಿ ಮಾಡಿತ್ತು. ಸ್ಟಾಲಿನ್ ಅವರು ಆಗಸ್ಟ್ 22ರಂದು ತಮ್ಮ ಯುಎಸ್ ಪ್ರವಾಸವನ್ನು ಪ್ರಾರಂಭಿಸುತ್ತಾರೆ.
ಉದಯನಿಧಿ ಅವರ ಬಗ್ಗೆ ಸ್ಟಾಲಿನ್ ಬಳಿ ಕೇಳಿದಾಗ ಸ್ಟಾಲಿನ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಮ್ಮ ಮಗನನ್ನು ಉಪಮುಖ್ಯಮಂತ್ರಿ ಮಾಡುವ ಸಮಯ ಪಕ್ವವಾಗಿಲ್ಲ ಎಂದು ಹೇಳಿದ್ದರು.
ಇದನ್ನೂ ಓದಿ: ಪ್ರಧಾನಿಯವರೇ, ನಿಮ್ಮನ್ನು ಸೋಲಿಸಿದವರ ಮೇಲೆ ಸೇಡು ತೀರಿಸಿಕೊಳ್ಳಬೇಡಿ: ಸ್ಟಾಲಿನ್
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ವರ್ಷಗಳಿಗಿಂತ ಕಡಿಮೆ ಸಮಯ ಉಳಿದಿರುವಾಗ, ಉದಯನಿಧಿ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ಹೆಚ್ಚಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ