AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್

ತಮಿಳುನಾಡಿನ ರಾಜಕೀಯ ಮೂರ್ನಾಲ್ಕು ದಿನಗಳಿಂದ ಭಾರೀ ಕುತೂಹಲ ಮೂಡಿಸಿತ್ತು. ಯಾವ ಪಕ್ಷ ಸರ್ಕಾರ ರಚಿಸಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. 118 ಸ್ಥಾನಗಳ ಬಹುಮತವನ್ನು ಪಡೆಯಲು ಪರದಾಡುತ್ತಿದ್ದ ವಿಜಯ್ ನೇತೃತ್ವದ ಟಿವಿಕೆ ಕೊನೆಗೂ ಮ್ಯಾಜಿಕ್ ನಂಬರ್ ಪಡೆಯುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ, ಟಿವಿಕೆ ಮೈತ್ರಿಕೂಟ ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಖಾತರಿಯಾಗಿದೆ.

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ 'ಸರ್ಕಾರ್'; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್
Tvk Vijay Image Credit source: PTI
ಸುಷ್ಮಾ ಚಕ್ರೆ
|

Updated on:May 08, 2026 | 5:05 PM

Share

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ (TVK) ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. ಇದೀಗ ಆ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ನಟ-ರಾಜಕಾರಣಿ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.

ಟಿವಿಕೆಗೆ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸುವ ಮೂಲಕ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಂತಾಗಿದೆ. ಶೀಘ್ರದಲ್ಲೇ ವಿಜಯ್ ಬಹುಮತದ ಬೆಂಬಲದ ಪತ್ರದೊಂದಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನವನ್ನು ಅಂತಿಮಗೊಳಿಸಲಿದ್ದಾರೆ.

ಇದನ್ನೂ ಓದಿ: ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು

ವಿಜಯ್ ಇಂದು ಸಂಜೆ 6 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಆಗ ವಿಜಯ್ ಮತ್ತೆ ಹಕ್ಕು ಮಂಡಿಸುವ ನಿರೀಕ್ಷೆಯಿದೆ. ಈ ವಾರ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಬಗ್ಗೆ ರಾಜ್ಯಪಾಲರೊಂದಿಗೆ ಅವರ ಮೂರನೇ ಸಭೆ ಇದಾಗಿದೆ.

234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ತನ್ನ 5 ಶಾಸಕರೊಂದಿಗೆ ಬೆಂಬಲವನ್ನು ನೀಡಿದೆ. ತಲಾ ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ ಮತ್ತು ಸಿಪಿಐ(ಎಂ) ಸಹ ಇಂದಿನ ಸಭೆಗಳ ನಂತರ ಟಿವಿಕೆಯನ್ನು ಬೆಂಬಲಿಸಿವೆ. ಇಬ್ಬರು ಶಾಸಕರನ್ನು ಹೊಂದಿರುವ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಕೂಡ ವಿಜಯ್ ಅವರನ್ನು ಬೆಂಬಲಿಸಲು ಒಪ್ಪಿಕೊಂಡಿದೆ. ಇದರಿಂದ ಟಿವಿಕೆಗೆ ಅಗತ್ಯವಾದ 118 ಸ್ಥಾನಗಳ ಮ್ಯಾಜಿಕ್ ನಂಬರ್ ಸಿಗುವುದರಿಂದಾಗಿ ವಿಜಯ್ ಪಟ್ಟಾಭಿಷೇಕ ಖಚಿತವಾದಂತಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Fri, 8 May 26

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?