ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 15ಕ್ಕೆ ಏರಿಕೆ, ಪ್ರಧಾನಿ ನರೇಂದ್ರ ಮೋದಿ ಸಂತಾಪ
ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಇಡೀ ಕಾರ್ಖಾನೆಯೇ ಹೊತ್ತಿ ಉರಿದಿದೆ. ಪಟಾಕಿಗಳು ಸಿಡಿಯುತ್ತಿವೆ. ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕದಳದವರು ಹರಸಾಹಸ ಪಟ್ಟಿದ್ದರು.
ಚೆನ್ನೈ: ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ ಆಗಿದೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಚೆನ್ನೈನಿಂದ 500 ಕಿ.ಮೀ ದೂರದಲ್ಲಿರುವ ವಿರುಧುನಗರದಲ್ಲಿ ಇಂದು ಮಧ್ಯಾಹ್ನ 1:30ರ ಸುಮಾರಿಗೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಸ್ಥಳದಲ್ಲೇ 6 ಜನರು ಸಜೀವ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೆಚ್ಚುವರಿಯಾಗಿ 9 ಜನರು ಮೃತಪಟ್ಟಿದ್ದಾರೆ.
ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಇಡೀ ಕಾರ್ಖಾನೆಯೇ ಹೊತ್ತಿ ಉರಿದಿದೆ. ಪಟಾಕಿಗಳು ಸಿಡಿಯುತ್ತಿವೆ. ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದವರು ಹರಸಾಹಸ ಪಟ್ಟಿದ್ದರು. ಅಂದಹಾಗೆ, ಘಟನೆಗೆ ಕಾರಣವೇನು, ಎಷ್ಟು ಮಂದಿ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
Fire at a firecracker factory in Virudhunagar, Tamil Nadu is saddening. In this hour of grief, my thoughts are with the bereaved families. I hope those injured recover soon. Authorities are working on the ground to assist those affected: PM @narendramodi
— PMO India (@PMOIndia) February 12, 2021
ತಮಿಳುನಾಡಿನ ವಿರುಧುನಗರದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ನಡೆದ ಅವಘಡ ಬೇಸರ ಮೂಡಿಸಿದೆ. ಈ ದುಃಖದ ಸಮಯದಲ್ಲಿ ಸಂತ್ರಸ್ತರ ಕುಟುಂಬದವರಿಗೆ ಸಾಂತ್ವನ ಹೇಳಬಯುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಕೋರುತ್ತೇನೆ. ಪೀಡಿತರಿಗೆ ಸಹಾಯ ಮಾಡಲು ಅಧಿಕಾರಿಗಳು ನೆಲದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಜನ ಮೃತ