ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 15ಕ್ಕೆ ಏರಿಕೆ, ಪ್ರಧಾನಿ ನರೇಂದ್ರ ಮೋದಿ ಸಂತಾಪ

ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಇಡೀ ಕಾರ್ಖಾನೆಯೇ ಹೊತ್ತಿ ಉರಿದಿದೆ. ಪಟಾಕಿಗಳು ಸಿಡಿಯುತ್ತಿವೆ. ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕದಳದವರು ಹರಸಾಹಸ ಪಟ್ಟಿದ್ದರು.

ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 15ಕ್ಕೆ ಏರಿಕೆ, ಪ್ರಧಾನಿ ನರೇಂದ್ರ ಮೋದಿ ಸಂತಾಪ
ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟದ ದೃಶ್ಯ
Edited By:

Updated on: Feb 12, 2021 | 8:23 PM

ಚೆನ್ನೈ: ತಮಿಳುನಾಡಿನ ವಿರುಧು​ನಗರದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ ಆಗಿದೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ. ಚೆನ್ನೈನಿಂದ 500 ಕಿ.ಮೀ ದೂರದಲ್ಲಿರುವ ವಿರುಧು​ನಗರದಲ್ಲಿ ಇಂದು ಮಧ್ಯಾಹ್ನ 1:30ರ ಸುಮಾರಿಗೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಸ್ಥಳದಲ್ಲೇ 6 ಜನರು ಸಜೀವ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೆಚ್ಚುವರಿಯಾಗಿ 9 ಜನರು ಮೃತಪಟ್ಟಿದ್ದಾರೆ.

ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಇಡೀ ಕಾರ್ಖಾನೆಯೇ ಹೊತ್ತಿ ಉರಿದಿದೆ. ಪಟಾಕಿಗಳು ಸಿಡಿಯುತ್ತಿವೆ. ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದವರು ಹರಸಾಹಸ ಪಟ್ಟಿದ್ದರು. ಅಂದಹಾಗೆ, ಘಟನೆಗೆ ಕಾರಣವೇನು, ಎಷ್ಟು ಮಂದಿ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ತಮಿಳುನಾಡಿನ ವಿರುಧುನಗರದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ನಡೆದ ಅವಘಡ ಬೇಸರ ಮೂಡಿಸಿದೆ. ಈ ದುಃಖದ ಸಮಯದಲ್ಲಿ ಸಂತ್ರಸ್ತರ ಕುಟುಂಬದವರಿಗೆ ಸಾಂತ್ವನ ಹೇಳಬಯುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಕೋರುತ್ತೇನೆ. ಪೀಡಿತರಿಗೆ ಸಹಾಯ ಮಾಡಲು ಅಧಿಕಾರಿಗಳು ನೆಲದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:  ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಜನ ಮೃತ