AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಫೈಲ್ಸ್: ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್‌ಗೆ ₹ 200 ಕೋಟಿ ನೀಡಲಾಗಿದೆ ಎಂದು ಬಿಜೆಪಿ ನಾಯಕ ಇತ್ತೀಚೆಗೆ ಆರೋಪಿಸಿದ್ದರು. ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

ಡಿಎಂಕೆ ಫೈಲ್ಸ್: ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ
ಅಣ್ಣಾಮಲೈ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 10, 2023 | 4:37 PM

Share

ಚೆನ್ನೈ: ಡಿಎಂಕೆ ಫೈಲ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ(BJP) ಮುಖ್ಯಸ್ಥ ಕೆ ಅಣ್ಣಾಮಲೈ (K Annamalai )ವಿರುದ್ಧ ತಮಿಳುನಾಡು (Tamil nadu) ಸರ್ಕಾರ ಇಂದು (ಬುಧವಾರ) ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ನಗರದ ಪಬ್ಲಿಕ್ ಪ್ರಾಸಿಕ್ಯೂಟರ್, ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಾನಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್‌ಗೆ ₹ 200 ಕೋಟಿ ನೀಡಲಾಗಿದೆ ಎಂದು ಬಿಜೆಪಿ ನಾಯಕ ಇತ್ತೀಚೆಗೆ ಆರೋಪಿಸಿದ್ದರು. ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅದು ಅವರು ಭ್ರಷ್ಟಾಚಾರದ ಮೂಲಕ ಗಳಿಸಿದ್ದಾರೆ ಎಂದು ಹೇಳಿರುವ ಅಣ್ಣಾಮಲೈ, ಮುಖ್ಯಮಂತ್ರಿ ಅವರ ಕುಟುಂಬ ಸದಸ್ಯರು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವ ದುಬೈ ಕಂಪನಿಯ ನಿರ್ದೇಶಕರು ಎಂದು ಆರೋಪಿಸಿದ್ದರು.

ಈ ಬಗ್ಗೆ ಎನ್​​ಡಿಟಿವಿಗೆ ಪ್ರತಿಕ್ರಿಯಿಸಿದ ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್,ಅಣ್ಣಾಮಲೈ ಅವರನ್ನು ಶಿಕ್ಷಿಸುವುದೇ ಉತ್ತಮ ಕ್ರಮವಾಗಿದೆ. ರಾಹುಲ್ ಗಾಂಧಿ ಹೇಳಿದ್ದು ಏನೂ ಅಲ್ಲ, ಆದರೆ ಅವರನ್ನು ಅನರ್ಹಗೊಳಿಸಲಾಗಿದೆ. ಅವರು ಹಾಗೆ ಮಾಡಲು ಸಾಧ್ಯವಾದಾಗ, ಅಣ್ಣಾಮಲೈ ವಿರುದ್ಧ ಮೊಕದ್ದಮೆ ಹೂಡಲು ಕಾರಣವಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಡಿಎಂಕೆಯ ಲೀಗಲ್ ನೋಟಿಸ್ ನಂತರ ಕ್ಷಮೆ ಯಾಚಿಸಲು ನಿರಾಕರಿಸಿದ ಅಣ್ಣಾಮಲೈ ಅವರು ನ್ಯಾಯಾಲಯದಲ್ಲಿ ಈ ಪ್ರಕರಣವನ್ನು ನೋಡಿಕೊಳ್ಳುತ್ತಾರೆ ಎಂದು ಬಿಜೆಪಿ ಹೇಳಿದೆ.

ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ, ಈ ವರ್ಷ ಏಪ್ರಿಲ್ 14 ರಂದು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯ ದೀರ್ಘ ಪಟ್ಟಿಯನ್ನು ಬಹಿರಂಗಪಡಿಸಿದ್ದರು. ಇದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ದುರೈ ಮುರುಗನ್, ಇವಿ ವೇಲು, ಕೆ ಪೊನ್ಮುಡಿ, ವಿ ಸೆಂಥಿಲ್ ಬಾಲಾಜಿ, ಮತ್ತು ಮಾಜಿ ಕೇಂದ್ರ ಸಚಿವ ಎಸ್ ಜಗತ್ರಕ್ಷಕನ್ ಸೇರಿದಂತೆ ಹಲವರ ಒಡೆತನದಲ್ಲಿದೆ ಎಂದು ಆರೋಪಿಸಿದ್ದಾರೆ.

ಅಣ್ಣಾಮಲೈ ಅವರ ಆರೋಪಗಳನ್ನು ಡಿಎಂಕೆ ತಮಾಷೆ ಎಂದು ಕರೆದಿತ್ತು. ಲಂಚ ನೀಡಿದ ಒಂದೇ ಒಂದು ಆರೋಪವೂ ಇಲ್ಲ. ಅವರು ಪಟ್ಟಿ ಮಾಡಿರುವ ಎಲ್ಲಾ ಅಭ್ಯರ್ಥಿಗಳು ತಮ್ಮ ಅಫಿಡವಿಟ್‌ಗಳಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಒಂದು ವೇಳೆ ಉಲ್ಲಂಘನೆಯಾಗಿದ್ದರೆ, ಯಾವುದೇ ನಾಗರಿಕರು ಚುನಾವಣೆಗೆ ಸವಾಲು ಹಾಕಬಹುದು ಎಂದು ಡಿಎಂಕೆ ಸಂಸದ ಆರ್‌ಎಸ್ ಭಾರತಿ ಹೇಳಿದ್ದಾರೆ.

ಎಪ್ರಿಲ್ 20 ರಂದು ಕೆ ಅಣ್ಣಾಮಲೈ ಅವರು ಸಾಮಾಜಿಕ ಮಾಧ್ಯಮದಲ್ಲಿ ಆಡಿಯೋ ಕ್ಲಿಪ್ ಅನ್ನು ಉಲ್ಲೇಖಿಸಿ, ರಾಜ್ಯದ ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಯಾರೊಂದಿಗೋ ನಡೆಸಿದ ಸಂಭಾಷಣೆ ನಡೆಸಿದಾ ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮತ್ತು ಅಳಿಯ ವಿ ಶಬರೇಶನ್ ಅವರು ಒಂದು ವರ್ಷದಲ್ಲಿ ₹ 30,000 ಕೋಟಿ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂದು ಹೇಳಿದ್ದರು.

ನಂತರ, ಏಪ್ರಿಲ್ 25 ರಂದು, ಬಿಜೆಪಿ ನಾಯಕ ಪಳನಿವೇಲ್ ತ್ಯಾಗ ರಾಜನ್ ಅವರ ಧ್ವನಿಯನ್ನು ಒಳಗೊಂಡಿರುವ ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿದರು. ಕ್ಲಿಪ್‌ನಲ್ಲಿರುವ ವ್ಯಕ್ತಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ಮಾಡುತ್ತಿರುವುದನ್ನು ಇದರಲ್ಲಿ ಕೇಳಬಹುದು.

ಇದನ್ನೂ ಓದಿ: ಮಹಾರಾಷ್ಟ್ರದ 16 ಶಾಸಕರ ಅನರ್ಹತೆ ಪ್ರಕರಣ: ನಾಳೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟ ಸಾಧ್ಯತೆ

ಎರಡು ದಿನಗಳ ನಂತರ, ಪಳನಿವೇಲ್ ತ್ಯಾಗ ರಾಜನ್ ಹೇಳಿಕೆಯನ್ನು ನಿರಾಕರಿಸಿದ್ದು ಆಡಿಯೊ ಕ್ಲಿಪ್ ಅನ್ನು ದುರುದ್ದೇಶಪೂರಿತ, ಕಪೋಲಕಲ್ಪಿತ ಎಂದು ತಳ್ಳಿಹಾಕಿದರು. ಡಿಎಂಕೆ ಕಾರ್ಯಕರ್ತರ ನಡುವೆ ಒಡಕು ಮೂಡಿಸಲು ಮತ್ತು ಅವರ ಮತ್ತು ಮುಖ್ಯಮಂತ್ರಿ ನಡುವೆ ಬಿರುಕು ಮೂಡಿಸಲು ಇದನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Wed, 10 May 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು