AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಇಂದೂ ಸರ್ಕಾರ ರಚನೆ ಅನುಮಾನ; 2 ಶಾಸಕರಿರುವ ವಿಸಿಕೆ ಮೇಲೆ ನಿಂತಿದೆ ಟಿವಿಕೆ ಭವಿಷ್ಯ

ತಮಿಳುನಾಡಿನಲ್ಲಿ ಇಂದು ನೂತನ ಸರ್ಕಾರ ರಚನೆಯಾಗಲಿದೆ ಎನ್ನಲಾಗಿತ್ತು. ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತವೂ ಫಿಕ್ಸ್ ಆಗಿತ್ತು. ಆದರೆ, ಇಂದು ಕೂಡ ವಿಜಯ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಈಗಾಗಲೇ ಟಿವಿಕೆಗೆ ಕಾಂಗ್ರೆಸ್, ಸಿಪಿಐ, ಸಿಪಿಎಂ ಬೆಂಬಲ ನೀಡಿವೆ. ಆದರೆ, ಈ ಹಿಂದೆ ಬೆಂಬಲ ಘೋಷಿಸಿದ್ದ ವಿಸಿಕೆ ಇನ್ನೂ ತನ್ನ ಬೆಂಬಲ ಪತ್ರವನ್ನು ನೀಡಿಲ್ಲ. ಹೀಗಾಗಿ, ವಿಜಯ್ ಅವರ ಸರ್ಕಾರ ರಚನೆಯ ಕನಸು ಅಡ್ಡಕತ್ತರಿಗೆ ಸಿಲುಕಿದೆ.

ತಮಿಳುನಾಡಿನಲ್ಲಿ ಇಂದೂ ಸರ್ಕಾರ ರಚನೆ ಅನುಮಾನ; 2 ಶಾಸಕರಿರುವ ವಿಸಿಕೆ ಮೇಲೆ ನಿಂತಿದೆ ಟಿವಿಕೆ ಭವಿಷ್ಯ
Vijay With Cpi LeadersImage Credit source: PTI
ಸುಷ್ಮಾ ಚಕ್ರೆ
|

Updated on:May 09, 2026 | 9:57 AM

Share

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಟಿವಿಕೆ ಎಂಬ ಹೊಸ ಪಕ್ಷ ಕಟ್ಟಿ ಮೊದಲ ಚುನಾವಣೆಯಲ್ಲೇ ಬರೋಬ್ಬರಿ 108 ಸ್ಥಾನಗಳನ್ನು ಪಡೆದ ವಿಜಯ್ (Vijay) ಅವರಿಗೆ ಬಹುಮತ ಲಭಿಸದ ಹಿನ್ನೆಲೆಯಲ್ಲಿ ಎಡಪಕ್ಷಗಳ ಕೈಗೊಂಬೆಯಾಗುವಂತಾಗಿದೆ. ವಿಜಯ್ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವುದರಿಂದಾಗಿ ಟಿವಿಕೆ ಬಳಿ ಈಗಿರುವ ಸಂಖ್ಯೆ 107. ಇದರ ಜೊತೆ ಕಾಂಗ್ರೆಸ್​ನ 5, ಸಿಪಿಐನ 2, ಸಿಪಿಎಂನ 2 ಸ್ಥಾನಗಳು ಸೇರಿ ವಿಜಯ್ ಅವರಿಗೆ ಇರುವ ಸಂಖ್ಯೆ 116 ಆಗಿದೆ. ಆದರೆ, ಸರ್ಕಾರ ರಚನೆಗೆ ವಿಜಯ್​ಗೆ 118 ಸ್ಥಾನಗಳು ಬೇಕಾಗಿವೆ. ಒಂದುವೇಳೆ ವಿಸಿಕೆ ತನ್ನ ಬಳಿ ಇರುವ ಇಬ್ಬರು ಶಾಸಕರ ಬೆಂಬಲ ಘೋಷಿಸಿದರೆ ಮಾತ್ರ ವಿಜಯ್ ಮುಖ್ಯಮಂತ್ರಿಯಾಗಲು ಸಾಧ್ಯ. ಹೀಗಾಗಿ, ವಿಸಿಕೆ ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುತ್ತಿದೆ. ನಿನ್ನೆ ವಿಜಯ್​ಗೆ ಬೆಂಬಲ ಘೋಷಿಸಿದಾಗಿನಿಂದ ವಿಸಿಕೆ ಟ್ವಿಟ್ಟರ್​ ಹ್ಯಾಂಡಲ್ ಬ್ಲಾಕ್ ಆಗಿತ್ತು.

ಇದೀಗ ವಿಸಿಕೆ ಸಭೆಯನ್ನು ನಡೆಸುತ್ತಿದ್ದು, ಈ ಸಭೆಯ ಬಳಿಕ ವಿಜಯ್ ಅವರಿಗೆ ಬೆಂಬಲ ನೀಡುತ್ತದೆಯೋ ಇಲ್ಲವೋ ಎಂಬುದು ಸ್ಪಷ್ಟವಾಗಲಿದೆ. ಒಂದುವೇಳೆ ಟಿವಿಕೆಗೆ ಬೆಂಬಲ ನೀಡುವುದಾದರೂ ವಿಸಿಕೆ ತನಗೆ ಡಿಸಿಎಂ ಹುದ್ದೆ ಬೇಕೆಂದು ಬೇಡಿಕೆ ಇಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, 108 ಸ್ಥಾನಗಳನ್ನು ಪಡೆದರೂ ಟಿವಿಕೆ 2 ಸ್ಥಾನಗಳನ್ನು ಪಡೆದ ಪಕ್ಷಗಳ ಮುಂದೆ ಮಂಡಿಯೂರುವಂತಾಗಿದೆ.

ಇದನ್ನೂ ಓದಿ: Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ನಿನ್ನೆ ವಿಜಯ್ ಅವರಿಗೆ ವಿಸಿಕೆ ಜೊತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ಬೆಂಬಲ ಘೋಷಿಸಿದ್ದರಿಂದ ಬಹುಮತದ ಬಗ್ಗೆ ತಲೆಬಿಸಿ ಇರಲಿಲ್ಲ. ಆದರೆ, ಇದ್ದಕ್ಕಿದ್ದಂತೆ ನಿನ್ನೆ ರಾತ್ರಿ ಮುಸ್ಲಿಂ ಲೀಗ್ ತಾನು ಡಿಎಂಕೆ ನೇತೃತ್ವದ ಮೈತ್ರಿಕೂಟದ ಜೊತೆಯೇ ಇರುತ್ತೇನೆ ಎಂದು ಘೋಷಿಸುವ ಮೂಲಕ ಟಿವಿಕೆಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. ಇತ್ತ ವಿಸಿಕೆ ಕೂಡ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ವರ್ತಿಸುತ್ತಿರುವುದರಿಂದಾಗಿ ತಮಿಳುನಾಡಿನಲ್ಲಿ ಇಂದು ಸರ್ಕಾರ ರಚನೆಯಾಗಲಿದೆಯಾ, ಇಲ್ಲವಾ ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Sat, 9 May 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!