AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಸಿಎಂ ಆಗುವುದು ಖಚಿತ; ಕೊನೆಗೂ ಟಿವಿಕೆಗೆ ವಿಸಿಕೆ, ಮುಸ್ಲಿಂ ಲೀಗ್ ಬೆಂಬಲ

ತಮಿಳುನಾಡಿನಲ್ಲಿ ಮೂರ್ನಾಲ್ಕು ದಿನಗಳಿಂದ ಉಂಟಾಗಿದ್ದ ಸರ್ಕಾರ ರಚನೆಯ ಬಿಕ್ಕಟ್ಟು ಕೊನೆಗೂ ಬಗೆಹರಿದಂತಾಗಿದೆ. ವಿಜಯ್ ನೇತೃತ್ವದ ಟಿವಿಕೆಗೆ ವಿಸಿಕೆ ಬೇಷರತ್ ಬೆಂಬಲ ಘೋಷಿಸಿದೆ. ಇದರ ಜೊತೆ ಐಯುಎಂಎಲ್ ಕೂಡ ಟಿವಿಕೆಗೆ ಬೆಂಬಲ ಘೋಷಿಸಿದೆ. ಇದರಿಂದಾಗಿ ತಮಿಳುನಾಡಿನಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ. ಈಗಾಗಲೇ ಟಿವಿಕೆಗೆ ವಿಸಿಕೆ ತನ್ನ ಬೆಂಬಲದ ಪತ್ರವನ್ನು ನೀಡಿದ್ದು, ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಅಧಿಕೃತವಾಗಿ ಮಾಹಿತಿ ನೀಡಲಿದೆ.

ವಿಜಯ್ ಸಿಎಂ ಆಗುವುದು ಖಚಿತ; ಕೊನೆಗೂ ಟಿವಿಕೆಗೆ ವಿಸಿಕೆ, ಮುಸ್ಲಿಂ ಲೀಗ್ ಬೆಂಬಲ
Tvk And Vck Leaders
ಸುಷ್ಮಾ ಚಕ್ರೆ
|

Updated on:May 09, 2026 | 5:22 PM

Share

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಸರ್ಕಸ್ ಬಗೆಹರಿದಂತಾಗಿದೆ. ಸರ್ಕಾರ ರಚಿಸಲು ಟಿವಿಕೆಗೆ (TVK) ವಿಸಿಕೆ ನಾಯಕ ತಿರುಮಾವಲವನ್ ಬೆಂಬಲ ಪತ್ರವನ್ನು ನೀಡಿದ್ದಾರೆ. ಹಾಗೇ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಬೇಷರತ್ತಾದ ಬೆಂಬಲ ನೀಡಿದೆ.ಇದರಿಂದ ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಹಾದಿ ಸುಗಮವಾದಂತಾಗಿದೆ.

ಬೆಳಗ್ಗೆಯಿಂದ ಟಿವಿಕೆ ಮತ್ತು ವಿಸಿಕೆ ನಾಯಕರು ಪ್ರತ್ಯೇಕವಾಗಿ ತಮ್ಮ ಶಾಸಕರ ಜೊತೆ ಸಭೆ ನಡೆಸಿದ್ದರು. ವಿಸಿಕೆ ಟಿವಿಕೆಗೆ ಬೆಂಬಲ ನೀಡಿರುವುದರಿಂದಾಗಿ ವಿಜಯ್ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಇಂದು ಸಂಜೆ 6 ಗಂಟೆಗೆ ಪತ್ರಿಕಾ ಹೇಳಿಕೆ ಪ್ರಕಟಿಸಲಾಗುವುದು. ಈಗಾಗಲೇ ಟಿವಿಕೆ ಕಾರ್ಯಕರ್ತರು ಸಂಭ್ರಮಾಚರಣೆ ಶುರು ಮಾಡಿದ್ದಾರೆ.

ಟಿವಿಕೆ ನಾಯಕ ಅಧವ್ ಅರ್ಜುನ ಈ ಬಗ್ಗೆ ಮಾಹಿತಿ ನೀಡಿದ್ದು, ವಿಸಿಕೆ ವಿಜಯ್ ಅವರ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. ಸರ್ಕಾರ ರಚನೆ ಕುರಿತು ವಿಸಿಕೆ ಬೆಂಬಲ ನೀಡುವ ಪತ್ರವನ್ನೂ ಟಿವಿಕೆಗೆ ನೀಡಿದೆ. ಇದಕ್ಕಾಗಿ ಟಿವಿಕೆ ನಾಯಕ ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಬೆಂಬಲಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಟಿವಿಕೆ 234 ಸದಸ್ಯರ ಸದನದಲ್ಲಿ 108 ಸ್ಥಾನಗಳನ್ನು ಗೆದ್ದಿತು. ಡಿಎಂಕೆ 59 ಸ್ಥಾನಗಳನ್ನು, ಎಐಎಡಿಎಂಕೆ 47, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2 ಮತ್ತು ಸಿಪಿಐ(ಎಂ) 2 ಸ್ಥಾನಗಳನ್ನು ಗೆದ್ದರೆ, ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನವನ್ನು ಗೆದ್ದವು. ಕಾಂಗ್ರೆಸ್ ನಂತರ ಟಿವಿಕೆಗೆ ಬೆಂಬಲ ನೀಡಿತು. ಇದೀಗ ಸಿಪಿಎಂ, ಸಿಪಿಐ, ವಿಸಿಕೆ ಹಾಗೂ ಮುಸ್ಲಿಂ ಲೀಗ್ ಕೂಡ ಟಿವಿಕೆಗೆ ಬೆಂಬಲ ಘೋಷಿಸಿರುವುದರಿಂದ ಸರ್ಕಾರ ರಚನೆಗೆ ಬೇಕಾದ ಬಹುಮತ ಸಿಕ್ಕಂತಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sat, 9 May 26

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು