ಅಸೆಂಬ್ಲಿ ಚುನಾವಣೆಗೂ ಮುನ್ನ.. ತಮಿಳುನಾಡಿನಲ್ಲಿ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಏರಿಕೆ ಮಾಡಿದ ಸರ್ಕಾರ
ತಮಿಳುನಾಡಿನಲ್ಲಿ ನಿವೃತ್ತಿ ವಯಸ್ಸು 59 ವರ್ಷದಿಂದ 60 ವರ್ಷಕ್ಕೆ ಏರಿಕೆ ಮಾಡಿ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ.
ತಮಿಳುನಾಡು: ಮುಂಬರುವ ವೀಧಾನಸಭಾ ಚುನಾವಣೆಗೆ ಆಡಳಿತಾರೂಢ ಎಐಎಡಿಎಂಕೆ ಸರ್ಕಾರ ಸಿದ್ಧತೆ ಜೋರಾಗಿಯೇ ಮಾಡಿಕೊಳ್ಳುತ್ತಿದೆ. ಯಾವುದೇ ಕ್ಷಣದಲ್ಲಾದರೂ ಮುಂದಿನ ಚುನಾವಣೆಯ ಡೇಟ್ ಅನೌನ್ಸ್ ಆಗಲಿದೆ. ಚುನಾವಣೆ ದಿನಾಂಕ ಪ್ರಕಟವಾದ್ರೆ ನೀತಿ ಸಂಹಿತೆ ಜಾರಿಯಾಗುತ್ತೆ. ಹೀಗಾಗಿ ತಮಿಳುನಾಡು ಸರ್ಕಾರ ದಿಢೀರನೆ ಪ್ರಮುಖ ನಿರ್ಧಾರವೊಂದು ತೆಗೆದುಕೊಂಡಿದ್ದು, ಸರ್ಕಾರಿ ಉದ್ಯೋಗಿಗಳನ್ನು ತನ್ನತ್ತ ಸೆಳೆಯುವ ಪ್ರಯತ್ನವಾಗಿ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಿದೆ.
ತಮಿಳುನಾಡಿನಲ್ಲಿ ನಿವೃತ್ತಿ ವಯಸ್ಸು 59 ವರ್ಷದಿಂದ 60 ವರ್ಷಕ್ಕೆ ಏರಿಕೆ ಮಾಡಿ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ. ಈ ರೀತಿ ಒಂದು ವರ್ಷದ ವಿಸ್ತರಣೆ ಮಾಡುವ ಮೂಲಕ ಸರ್ಕಾರಿ ಉದ್ಯೋಗಿಗಳ ಮನ ಗೆಲ್ಲುವ ಪ್ರಯತ್ನ ಮಾಡಿದೆ.
ಇದನ್ನೂ ಓದಿ: ತಮಿಳುನಾಡು ಜನತೆಗೆ ಪೊಂಗಲ್ ಉಡುಗೊರೆ ನೀಡಿದ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ