AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಜಾವೂರು ದೇವಾಲಯದಿಂದ ಪೆರಿಯಾರ್ ಪ್ರತಿಮೆ ತೆರವು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ತಂಜಾವೂರು ಜಿಲ್ಲೆಯ ಕಂಡಿಯೂರಿನ ಅರುಳ್ಮಿಗು ಬ್ರಹ್ಮಸಿರಕಂಡೀಶ್ವರರ್ ದೇವಾಲಯದ ಆವರಣದಲ್ಲಿರುವ ಸಮಾಜ ಸುಧಾರಕ ಮತ್ತು ದ್ರಾವಿಡ ಚಳವಳಿಯ ನಾಯಕ ಇ.ವಿ. ರಾಮಸಾಮಿ (ಪೆರಿಯಾರ್) ಅವರ ಪ್ರತಿಮೆಯನ್ನು ತೆರವುಗೊಳಿಸಿ ಬೇರೆಡೆಗೆ ಸ್ಥಳಾಂತರಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ದೇವಾಲಯದ ಬಳಿ ಸ್ಥಾಪಿಸಲಾಗಿರುವ ಪ್ರತಿಮೆ, ಅದು ನಿಂತಿರುವ ಜಾಗ ಮತ್ತು ಪ್ರತಿಮೆಯ ಕೆಳಗೆ ಕೆತ್ತಲಾಗಿರುವ “ದೇವರ ಅಸ್ತಿತ್ವವನ್ನು ನಿರಾಕರಿಸುವ” ಪೆರಿಯಾರ್ ಅವರ ಹೇಳಿಕೆಯ ಸುತ್ತ ಈ ಕಾನೂನು ವಿವಾದ ಕೇಂದ್ರೀಕೃತವಾಗಿದೆ.

ತಂಜಾವೂರು ದೇವಾಲಯದಿಂದ ಪೆರಿಯಾರ್ ಪ್ರತಿಮೆ ತೆರವು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ತಮಿಳುನಾಡು ಸಿಎಂ ವಿಜಯ್ Image Credit source: PTI
ಸುಷ್ಮಾ ಚಕ್ರೆ
|

Updated on: Nov 24, 2026 | 5:59 PM

Share

ನವದೆಹಲಿ, ನವೆಂಬರ್ 24: ತಮಿಳುನಾಡಿನ ತಂಜಾವೂರು ಜಿಲ್ಲೆಯ ಕಂಡಿಯೂರಿನಲ್ಲಿರುವ ಅರುಳ್ಮಿಗು ಬ್ರಹ್ಮಸಿರಕಂಡೀಶ್ವರರ್ ದೇವಾಲಯದ ಜಾಗದಲ್ಲಿ ಸ್ಥಾಪಿಸಲಾಗಿರುವ ದ್ರಾವಿಡ ಚಳವಳಿಯ ನಾಯಕ ಇ.ವಿ. ರಾಮಸಾಮಿ (ಪೆರಿಯಾರ್) ಅವರ ಪ್ರತಿಮೆಯನ್ನು ತೆರವುಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಅಕ್ಟೋಬರ್ 30ರಂದು ನೀಡಿದ್ದ ಆದೇಶಕ್ಕೆ ತಡೆ ನೀಡುವಂತೆ ಹಾಗೂ ಅದನ್ನು ರದ್ದುಗೊಳಿಸುವಂತೆ ಕೋರಿ ತಂಜಾವೂರು ಜಿಲ್ಲಾಧಿಕಾರಿಗಳ ಮೂಲಕ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಹೈಕೋರ್ಟ್ ಆದೇಶ ಏನಾಗಿತ್ತು?:

ಅರ್ಜಿದಾರ ರಾಮ ರವಿಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಪೆರಿಯಾರ್ ಪ್ರತಿಮೆಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಅಥವಾ ಸಕ್ಷಮ ಪ್ರಾಧಿಕಾರಗಳ ಅನುಮತಿಯಿಲ್ಲದೆ ದೇವಾಲಯದ ಆಸ್ತಿಯಲ್ಲಿ ಸ್ಥಾಪಿಸಲಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೆ, 4 ವಾರಗಳಲ್ಲಿ ಪ್ರತಿಮೆಯನ್ನು ಸುರಕ್ಷಿತವಾಗಿ ತೆರವುಗೊಳಿಸಿ ಬೇರೆ ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವಂತೆ ತಂಜಾವೂರು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿತ್ತು.

ವಿವಾದದ ಹಿನ್ನೆಲೆ:

ತಂಜಾವೂರು ಜಿಲ್ಲೆಯ ತಿರುವೈಯಾರು ಬಳಿಯ ಕಂಡಿಯೂರು ದೇವಾಲಯದ ಆವರಣದಲ್ಲಿ ಸುಮಾರು 1990ರಲ್ಲಿ ದ್ರಾವಿಡರ್ ಕಳಗಂ ಸಂಘಟನೆಯು ಈ ಪ್ರತಿಮೆಯನ್ನು ಸ್ಥಾಪಿಸಿತ್ತು. ಅಕ್ರಮವಾಗಿ ದೇವಾಲಯದ ಭೂಮಿಯಲ್ಲಿ ಪ್ರತಿಮೆ ಸ್ಥಾಪಿಸಿರುವುದಲ್ಲದೆ, ಪ್ರತಿಮೆಯ ಕೆಳಗೆ “ದೇವರ ಅಸ್ತಿತ್ವವನ್ನು ನಿರಾಕರಿಸುವ” ಪೆರಿಯಾರ್ ಅವರ ಹೇಳಿಕೆಯನ್ನು ಕೆತ್ತಿರುವುದು ಹಿಂದೂ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

ಇದನ್ನೂ ಓದಿ: ಅಹಮದಾಬಾದ್ ಏರ್ ಇಂಡಿಯಾ ಪತನ ಪ್ರಕರಣ; 2 ವಾರದಲ್ಲಿ ವರದಿ ಸಲ್ಲಿಸುವುದಾಗಿ ಸುಪ್ರೀಂ ಕೋರ್ಟ್​ಗೆ ಸರ್ಕಾರ ಮಾಹಿತಿ

ಹೈಕೋರ್ಟ್ ನೀಡಿದ್ದ 4 ವಾರಗಳ ಗಡುವು ಸಮೀಪಿಸುತ್ತಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಶೀಘ್ರದಲ್ಲೇ ಸುಪ್ರೀಂ ಕೋರ್ಟ್​ನಲ್ಲಿ ಈ ಅರ್ಜಿ ವಿಚಾರಣೆಗೆ ಬರಲಿದೆ.

ಪೆರಿಯಾರ್ ಯಾರು?:

ಪೆರಿಯಾರ್ ಅಥವಾ ‘ತಂದೈ ಪೆರಿಯಾರ್’ ಎಂದು ಜನಪ್ರಿಯರಾಗಿದ್ದ ಈರೋಡ್ ವೆಂಕಟಪ್ಪ ರಾಮಸಾಮಿ ಓರ್ವ ಸಮಾಜ ಸುಧಾರಕ, ವಿಚಾರವಾದಿ ಮತ್ತು ತಮಿಳುನಾಡಿನ ದ್ರಾವಿಡ ಚಳವಳಿಯ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಜಾತಿ ತಾರತಮ್ಯ, ಅಸ್ಪೃಶ್ಯತೆ, ಸಾಮಾಜಿಕ ಅಸಮಾನತೆ ಮತ್ತು ಸಾರ್ವಜನಿಕ ಜೀವನದಲ್ಲಿ ಮೇಲ್ಜಾತಿಗಳ ಪ್ರಾಬಲ್ಯದ ವಿರುದ್ಧ ಅವರು ಹೋರಾಡಿದ್ದರು. ಮಹಿಳಾ ಹಕ್ಕುಗಳು, ಶಿಕ್ಷಣ ಮತ್ತು ಅವಕಾಶಗಳಲ್ಲಿ ಸಮಾನತೆ ಹಾಗೂ ಧಾರ್ಮಿಕ ಮತ್ತು ಸಾಮಾಜಿಕ ಸಂಪ್ರದಾಯಗಳನ್ನು ಪ್ರಶ್ನಿಸುವ ವ್ಯಕ್ತಿಯ ಹಕ್ಕಿನ ಪರವಾಗಿ ಅವರು ಪ್ರತಿಪಾದಿಸಿದ್ದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನೊಂದಿಗೆ ತಮ್ಮ ರಾಜಕೀಯ ಪಯಣ ಆರಂಭಿಸಿದ ಪೆರಿಯಾರ್, ಜಾತಿ ತಾರತಮ್ಯ ಮತ್ತು ಪ್ರಾತಿನಿಧ್ಯದ ಬೇಡಿಕೆಗಳನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಪಕ್ಷ ವಿಫಲವಾಗಿದೆ ಎಂದು ಭಾವಿಸಿ 1925ರಲ್ಲಿ ಕಾಂಗ್ರೆಸ್ ತೊರೆದರು. ಅದೇ ವರ್ಷ ಅವರು ‘ಸ್ವಾಭಿಮಾನ ಚಳವಳಿ’ ಆರಂಭಿಸಿದರು. ಈ ಚಳವಳಿಯು ಜಾತಿ ಶ್ರೇಣಿಗಳನ್ನು ಪ್ರಶ್ನಿಸುವುದರ ಜೊತೆಗೆ ಸಮಾನತೆ, ವಿಚಾರವಾದ ಮತ್ತು ಘನತೆಯನ್ನು ಉತ್ತೇಜಿಸಿತು. ಮಹಿಳಾ ವಿಮೋಚನೆ, ವಿಧವಾ ಪುನರ್​ವಿವಾಹ, ಅಂತರ್ಜಾತಿ ವಿವಾಹ ಮತ್ತು ಬ್ರಾಹ್ಮಣ ಪುರೋಹಿತರು ಅಥವಾ ಧಾರ್ಮಿಕ ಆಚರಣೆಗಳಿಲ್ಲದೆ ನಡೆಯುವ ವಿವಾಹಗಳನ್ನು ಬೆಂಬಲಿಸಿತು.

ಇದನ್ನೂ ಓದಿ: ತಮಿಳುನಾಡು ಚುನಾವಣೆಯಲ್ಲಿ ಎಂಕೆ ಸ್ಟಾಲಿನ್ ಅವರನ್ನು ಸೋಲಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

1924ರಲ್ಲಿ ಇಂದಿನ ಕೇರಳದ ವೈಕಂ ಮಹಾದೇವ ದೇವಾಲಯದ ಸುತ್ತಲಿನ ಸಾರ್ವಜನಿಕ ರಸ್ತೆಗಳನ್ನು ಬಳಸುವ ದಮನಿತ ಸಮುದಾಯಗಳ ಹಕ್ಕಿಗಾಗಿ ನಡೆದ ‘ವೈಕಂ ಸತ್ಯಾಗ್ರಹ’ದಲ್ಲೂ ಪೆರಿಯಾರ್ ಭಾಗವಹಿಸಿ ‘ವೈಕಂ ವೀರರ್’ ಎಂಬ ಬಿರುದು ಪಡೆದಿದ್ದರು. ನಂತರ ಅವರು ಜಸ್ಟೀಸ್ ಪಾರ್ಟಿಯನ್ನು ಮುನ್ನಡೆಸಿದರು, ಅದು 1944ರಲ್ಲಿ ‘ದ್ರಾವಿಡರ್ ಕಳಗಂ’ ಆಗಿ ಬದಲಾಯಿತು. ಸಾಮಾಜಿಕ ನ್ಯಾಯ, ಜಾತಿ, ಧರ್ಮ ಮತ್ತು ತಮಿಳು ಅಸ್ಮಿತೆಯ ಚರ್ಚೆಗಳ ಮೇಲೆ ಅವರ ವಿಚಾರಗಳು ಇಂದಿಗೂ ಪ್ರಭಾವ ಬೀರುತ್ತಿವೆ.

ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದೇಕೆ?:

ವರದಿಗಳ ಪ್ರಕಾರ, ಹೈಕೋರ್ಟ್‌ನ ಅಕ್ಟೋಬರ್ 30ರ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರವು ನವೆಂಬರ್ 22ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ‘ದಿ ಡಿಸ್ಟ್ರಿಕ್ಟ್ ಕಲೆಕ್ಟರ್, ತಂಜಾವೂರು ಜಿಲ್ಲೆ ವರ್ಸಸ್ ರಾಮ ರವಿಕುಮಾರ್ ಮತ್ತು ಇತರರು’ ಎಂಬ ಶೀರ್ಷಿಕೆಯಡಿಯಲ್ಲಿ ಈ ಮೇಲ್ಮನವಿ ಸಲ್ಲಿಕೆಯಾಗಿದ್ದು, ರಾಜ್ಯ ಸರ್ಕಾರದ ಈ ನಡೆಯಿಂದಾಗಿ ಪ್ರತಿಮೆ ತೆರವು ಮತ್ತು ಸ್ಥಳಾಂತರದ ವಿವಾದವು ಇದೀಗ ದೇಶದ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಅನುಮತಿಯಿಲ್ಲದೆ ದೇವಾಲಯದ ಜಾಗದಲ್ಲಿ ಪ್ರತಿಮೆ ನಿಂತಿದೆ ಎಂಬ ಅಂಶದ ಆಧಾರದ ಮೇಲೆ ಹೈಕೋರ್ಟ್ ತೆರವು ಆದೇಶ ನೀಡಿತ್ತು. ಇದೀಗ ರಾಜ್ಯ ಸರ್ಕಾರದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ