AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಗೀತೆಗೆ ಅವಮಾನ, ಸದನದಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ವಿಧಾನಸಭಾ ಅಧಿವೇಶನದಲ್ಲಿ ಸಾಂಪ್ರದಾಯಿಕ ಭಾಷಣ ಮಾಡಲು ನಿರಾಕರಿಸಿದರು ಮತ್ತು ಭಾಷಣದ ಆರಂಭದಲ್ಲಿ ರಾಷ್ಟ್ರಗೀತೆಯನ್ನು ಹಾಡದಿರುವುದನ್ನು ಪ್ರತಿಭಟಿಸಿ ಸದನದಿಂದ ಹೊರನಡೆದರು. ಸದನದಲ್ಲಿ ರಾಷ್ಟ್ರಗೀತೆ ಬದಲು ರಾಜ್ಯಗೀತೆ ಹಾಡಲಾಗಿತ್ತು. ತಮಿಳುನಾಡು ವಿಧಾನಸಭೆಯಲ್ಲಿ ಇಂದು ಭಾರತ ಸಂವಿಧಾನ ಮತ್ತು ರಾಷ್ಟ್ರಗೀತೆಗೆ ಮತ್ತೊಮ್ಮೆ ಅಪಮಾನ ಮಾಡಲಾಗಿದೆ ಎಂದು ರವಿ ಆರೋಪಿಸಿದ್ದಾರೆ.

ರಾಷ್ಟ್ರಗೀತೆಗೆ ಅವಮಾನ, ಸದನದಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ
ಆರ್​ಎನ್ ರವಿImage Credit source: News 9
ನಯನಾ ರಾಜೀವ್
|

Updated on: Jan 06, 2025 | 12:34 PM

Share

ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಭಾಷಣ ಮಾಡದೆ ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ ಸದನದಿಂದ ಹೊರ ನಡೆದಿರುವ ಘಟನೆ ನಡೆದಿದೆ. 2025 ರ ತಮಿಳುನಾಡು ವಿಧಾನಸಭೆಯ ಮೊದಲ ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭವಾಗಿದೆ. ನಿಯಮಗಳ ಪ್ರಕಾರ ರಾಜ್ಯಪಾಲ ಆರ್.ಎನ್.ರವಿ ಅವರ ಭಾಷಣದೊಂದಿಗೆ ವಿಧಾನಸಭೆ ಅಧಿವೇಶನ ಆರಂಭವಾಗಬೇಕಿತ್ತು. ಮಾಧ್ಯಮ ವರದಿಗಳ ಪ್ರಕಾರ, ವಿಧಾನಸಭೆ ಅಧಿವೇಶನದ ಆರಂಭದಲ್ಲಿ ರಾಷ್ಟ್ರಗೀತೆ ಬದಲು ರಾಜ್ಯ ಗೀತೆಯನ್ನು ಹಾಡಲಾಯಿತು.

ರಾಜ್ಯಗೀತೆ ಹಾಡಿದ ಬಳಿಕ ರಾಷ್ಟ್ರಗೀತೆ ಹಾಡುವಂತೆ ಒತ್ತಡ ಕೇಳಿ ಬಂದಿತ್ತು. ಆದರೆ ಅವರ ಬೇಡಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳದ ಕಾರಣ ಬೇಸರಗೊಂಡ ರಾಜ್ಯಪಾಲರು ಭಾಷಣವನ್ನೂ ಮಾಡದೆ ಸದನದಿಂದ ಹೊರ ನಡೆದಿದ್ದಾರೆ. ಇಡೀ ವಿವಾದದ ಕುರಿತು ತಮಿಳುನಾಡು ರಾಜಭವನ ಹೇಳಿಕೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೇಳಿಕೆಯಲ್ಲಿ ರಾಜಭವನ, ‘ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ಭಾರತದ ಸಂವಿಧಾನ ಮತ್ತು ರಾಷ್ಟ್ರಗೀತೆಗೆ ಅವಮಾನ ಮಾಡಲಾಗಿದೆ. ಸಂವಿಧಾನದಲ್ಲಿ ಮೊದಲ ಮೂಲಭೂತ ಕರ್ತವ್ಯವೆಂದರೆ ರಾಷ್ಟ್ರಗೀತೆಗೆ ಗೌರವ ಕೊಡುವುದು ಎಂದು ಹೇಳಲಾಗಿದೆ.

ಎಲ್ಲಾ ರಾಜ್ಯಗಳ ವಿಧಾನಸಭಾ ಅಧಿವೇಶನದ ಆರಂಭದಲ್ಲಿ ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ. ಇಂದು ರಾಜ್ಯಪಾಲರು ಸದನಕ್ಕೆ ಆಗಮಿಸಿದಾಗ ಕೇವಲ ರಾಜ್ಯಗೀತೆ ಮಾತ್ರ ಹಾಡಲಾಯಿತು. ರಾಷ್ಟ್ರಗೀತೆ ಹಾಡುವ ಬಗ್ಗೆ ರಾಜ್ಯಪಾಲರು ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಸದನದ ಸ್ಪೀಕರ್ ತಿರಸ್ಕರಿಸಿದರು. ಭಾರತದ ಸಂವಿಧಾನಕ್ಕೆ ಮಾಡಿದ ಅವಮಾನದ ಭಾಗವಾಗದೆ ರಾಜ್ಯಪಾಲರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸದನದಿಂದ ನಿರ್ಗಮಿಸಿದರು.

ಮತ್ತಷ್ಟು ಓದಿ: Tamil Nadu: ಆರ್​ಎನ್ ರವಿ ರಾಜ್ಯಪಾಲ ಹುದ್ದೆಗೆ ಅರ್ಹರಲ್ಲ, ರಾಷ್ಟ್ರಪತಿ ಮುರ್ಮುಗೆ ಪತ್ರ ಬರೆದ ಎಂಕೆ ಸ್ಟಾಲಿನ್

ಕಳೆದ ಬಾರಿ ರಾಜ್ಯಪಾಲರು ತಮ್ಮ ಭಾಷಣದ ವೇಳೆ ಸರ್ಕಾರದ ನೀಡಿರುವ ಕೆಲವು ಸಾಲುಗಳನ್ನು ಓದಲು ನಿರಾಕರಿಸಿದ್ದರು. ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣ ಬಿಸಿಯಾಗಿದ್ದು, ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾರಣ ಈ ವರ್ಷವೂ ವಿಧಾನಸಭೆ ಅಧಿವೇಶನದಲ್ಲಿ ಕೋಲಾಹಲ ಉಂಟಾಗುವ ನಿರೀಕ್ಷೆ ಇದೆ.

ಆಡಳಿತಾರೂಢ ಡಿಎಂಕೆ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರು ಈ ರೀತಿ ಸದನದಿಂದ ನಿರ್ಗಮಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲರ ನಿರ್ಗಮನದ ನಂತರ, ಎಐಎಡಿಎಂಕೆ ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿತು. ಪ್ರತಿಭಟನಾ ನಿರತ ಶಾಸಕರನ್ನು ಹೊರಹಾಕುವಂತೆ ಸ್ಪೀಕರ್ ಮಾರ್ಷಲ್‌ಗಳಿಗೆ ಆದೇಶಿಸಿದರು.

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ