Tamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ

ponmudy: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಮೇಲೆ ಇ.ಡಿ ದಾಳಿ ನಡೆದಿದೆ. ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.

Tamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ
ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ
Follow us
|

Updated on:Jul 17, 2023 | 10:57 AM

ಚೆನ್ನೈ ಜುಲೈ 17:  ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ಭಾರೀ ಜೋರಾಗಿಯೇ ನಡೆಯುತ್ತಿದೆ, ಎಂ.ಕೆ ಸ್ಟಾಲಿನ್​​ ಸರ್ಕಾರದ ಸಚಿವರು ಈ ದಾಳಿಗೆ ಒಳಗಾಗಿದ್ದಾರೆ. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಮೇಲೆ ಇ.ಡಿ ದಾಳಿ ನಡೆದಿದೆ. ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಜತೆಗೆ ಅವರ ಪುತ್ರ ಹಾಗೂ ಸಂಸದ ಗೌತಮ್ ಸಿಗಮಣಿ ಅವರ ಮನೆಯಲ್ಲೂ ಹುಡುಕಾಟ ನಡೆದಿದೆ.

ಸಚಿವ ಕೆ ಪೊನ್ಮುಡಿ ಅವರಿಗೆ ಸಂಬಂಧಿಸಿದ 9 ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯವನ್ನು ಮಾಡುತ್ತಿದ್ದು, ಕೇಂದ್ರ ಭದ್ರತಾ ಪಡೆಯ ಜತೆಗೆ ಸೇರಿ ಇ.ಡಿ ಕಾರ್ಯಚರಣೆಯನ್ನು ನಡೆಸುತ್ತಿದೆ. ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇಂಧನ ಮತ್ತು ಅಬಕಾರಿ ಇಲಾಖೆ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮೇಲೆ ಇ.ಡಿ ದಾಳಿ ನಡೆಸಿ, ಅನೇಕ ಕಡೆ ಶೋಧ ಕಾರ್ಯವನ್ನು ನಡೆಸಿತ್ತು. ಅವರ ಆಪ್ತರ ಮೇಲೂ ಇ.ಡಿ ದಾಳಿ ನಡೆಸಿತ್ತು. ಜೂ.14ರಂದು ವಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿ, ಈಗ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ; ತಮಿಳುನಾಡಿನ ಸಚಿವ ವಿ ಸೆಂಥಿಲ್ ಬಾಲಾಜಿ ಮನೆಯ ಮೇಲೆ ಐಟಿ ದಾಳಿ

ಇದೀಗ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ ನಂತರ ತಮಿಳುನಾಡಿನ ಸರ್ಕಾರದ ಸಚಿವರ ಮೇಲೆ ಇ.ಡಿ ಒಂದು ಕಣ್ಣಿಟ್ಟಿದ್ದು, ಅವರ ವ್ಯವಹಾರಗಳ ಮೇಲೆ ಗಮನ ನೀಡಿದೆ. ಇದರ ಜತೆಗೆ ಈಗಾಗಲೇ ವಿ ಸೆಂಥಿಲ್ ಬಾಲಾಜಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಆದೇಶವನ್ನು ರಾಜ್ಯಪಾಲರು ತಡೆಹಿಡಿದಿದ್ದು, ಕಾನೂನು ಕ್ರಮಗಳನ್ನು ಬಗ್ಗೆ ತಿಳಿದುಕೊಂಡು ರಾಜೀನಾಮೆ ಪಡೆಯಬೇಕೇ? ಬೇಡವೇ? ಎಂಬುದನ್ನು ನಿರ್ಧಾರಿಸುತ್ತೇವೆ ಎಂದು ಹೇಳಿದ್ದಾರೆ. ಈ ಸಮಯದಲ್ಲೇ ಇನ್ನೊಬ್ಬ ಸಚಿವ ಮೇಲೆ ಇ.ಡಿ ದಾಳಿ ನಡೆದಿದೆ. ಇದು ರಾಜಕೀಯ ಎಂದು ಸ್ಟಾಲಿನ್​ ಸರ್ಕಾರ ಹೇಳುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Mon, 17 July 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ