Hooch Tragedy: ತಮಿಳುನಾಡು ಕಳ್ಳಭಟ್ಟಿ ದುರಂತ; ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 10 ಜನ ಸಾವು
Kallakurichi Illicit Liquor Tragedy: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಇಂದು ನಡೆದ ಭೀಕರ ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಕಳ್ಳಭಟ್ಟಿ ದುರಂತ ವರದಿಯಾದ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ವಿಷಯದ ಬಗ್ಗೆ ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಚೆನ್ನೈ: ಉತ್ತರ ತಮಿಳುನಾಡಿನ ಕಲ್ಲಕುರಿಚಿ (Kallakurichi) ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ (Hooch Tragedy) ಸೇವಿಸಿ 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಇಂದು (ಬುಧವಾರ) ತಿಳಿಸಿದ್ದಾರೆ. 49 ವರ್ಷದ ಕೆ. ಕನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ ವಶಪಡಿಸಿಕೊಂಡ ಸುಮಾರು 200 ಲೀಟರ್ ಅಕ್ರಮ ಕಳ್ಳಭಟ್ಟಿಯಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯನ್ನು ಬಹಿರಂಗಪಡಿಸಿದೆ ಎಂದು ಸರ್ಕಾರ ತಿಳಿಸಿದೆ.
ಈ ಬಗ್ಗೆ ಸಮಗ್ರ ತನಿಖೆಯನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಕಲ್ಲಕುರಿಚಿಯಲ್ಲಿ ಕಲಬೆರಕೆಯ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಈ ದುರಂತವನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
கள்ளக்குறிச்சியில் கள்ளச்சாராயம் அருந்தியவர்கள் உயிரிழந்த செய்திகேட்டு அதிர்ச்சியும் வேதனையும் அடைந்தேன். இந்த விவகாரத்தில் குற்றத்தில் ஈடுபட்டவர்கள் கைது செய்யப்பட்டுள்ளார்கள். தடுக்கத் தவறிய அதிகாரிகள் மீதும் நடவடிக்கை எடுக்கப்பட்டுள்ளது.
இதுபோன்ற குற்றங்களில் ஈடுபடுபவர்கள்… pic.twitter.com/QGEYo9FWJq
— M.K.Stalin (@mkstalin) June 19, 2024
ಈ ಬಗ್ಗೆ ಕ್ಷಿಪ್ರ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರದ ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದೆ. ಕಲ್ಲಕುರಿಚಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್. ಪ್ರಶಾಂತ್ ನೇಮಕಗೊಂಡಿದ್ದಾರೆ. ಅಲ್ಲದೆ, ಕಲ್ಲಕುರಿಚಿ ಎಸ್ಪಿ ಸಮಯಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಲಾಗಿದೆ. ಅವರ ಜಾಗಕ್ಕೆ ಸರ್ಕಾರ ರಜತ್ ಚತುರ್ವೇದಿ ಅವರನ್ನು ನೂತನ ಎಸ್ಪಿಯನ್ನಾಗಿ ನೇಮಿಸಿದೆ. ಅಲ್ಲದೆ, ಕಲ್ಲಕುರಿಚಿ ಜಿಲ್ಲೆಯ ನಿಷೇಧಿತ ವಿಭಾಗದ ಅಧಿಕಾರಿಗಳು ಸೇರಿದಂತೆ 9 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
It is heart-wrenching to see the Parents cry out of the pain of losing their child & wife losing her husband due to the consumption of illicit liquor. DMK has not learnt their lesson after the 22 hooch deaths last year & their misgovernance has led to 5 more deaths today.
There… pic.twitter.com/nPthMcKMEs
— K.Annamalai (@annamalai_k) June 19, 2024
ಇದನ್ನೂ ಓದಿ: Firing at Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ, ಕರ್ತವ್ಯನಿರತ ಎಸ್ಎಸ್ಎಫ್ ಯೋಧ ಸಾವು
ಇದೇ ವೇಳೆ ಅಕ್ರಮ ಕಳ್ಳಭಟ್ಟಿ ದಂಧೆಕೋರನನ್ನು ಬಂಧಿಸಲಾಗಿದೆ. ತಮಿಳುನಾಡು ಅಧಿಕಾರಿಗಳ ಪ್ರಕಾರ, ಅವರು 200 ಲೀಟರ್ ಅರಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಾರದ ಪ್ರಕಾರ, ಅರಕ್ ಸೇವಿಸಿದ ನಂತರ ಹಲವಾರು ಜನರು ವಾಂತಿ ಮತ್ತು ಹೊಟ್ಟೆ ನೋವು ಎಂದು ಗೋಳಾಡತೊಡಗಿದರು. ಇಂದು ಅವರನ್ನು ಕಲ್ಲಕುರಿಚಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ