ತಮಿಳುನಾಡು, ಜೂನ್ 23: ತಮಿಳುನಾಡಿನ ಕಲ್ಲಕುರಿಚಿ (Kallakurichi) ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ (Hooch Tragedy) ಸೇವಿಸಿ ಮೃತಪಟ್ಟವರ ಸಾವಿನ ಸಂಖ್ಯೆ ಏರಿಕೆ ಆಗುತ್ತಿದೆ. ಇದುವರೆಗೂ ಒಟ್ಟ 53 ಜನರು ಸಾವನ್ನಪ್ಪಿದ್ದು, 118ಕ್ಕೂ ಹೆಚ್ಚು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲ್ಲೆ ಇಂದು ಮಕ್ಕಳ್ ನೀಧಿ ಮೈಯಂ (NMM) ಮುಖ್ಯಸ್ಥ ಮತ್ತು ನಟ ಕಮಲ್ ಹಾಸನ್ ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳ್ಳಭಟ್ಟಿ ಕುಡಿದು ಮೃತಪಟ್ಟರು ಮದ್ಯಪಾನದ ಬಗ್ಗೆ ಅಸಡ್ಡೆ ತೋರಿದ್ದಾರೆ ಎಂದು ಹೇಳಿದ್ದಾರೆ.
ಅವರು ಜಾಗರೂಕರಾಗಿರುವುದರೊಂದಿಗೆ ತಮ್ಮ ಕಾಳಜಿ ವಹಿಸಬೇಕು. ಅವರ ಆರೋಗ್ಯದ ಬಗ್ಗೆ ಸಲಹೆ, ಸೂಚನೆ ನೀಡುವ ಮನೋವೈದ್ಯಕೀಯ ಕೇಂದ್ರಗಳನ್ನು ರಚಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
#WATCH | Tamil Nadu: After meeting the Hooch tragedy victims, MNM party chief Kamal Haasan says, “…These victims will have to understand they have exceeded their limit and they have been careless. They have to be careful. They have to take care of their health. My request to… pic.twitter.com/qrci9g8OFs
— ANI (@ANI) June 23, 2024
ಕಳ್ಳಭಟ್ಟಿ ಕುಡಿತಕ್ಕೆ ಒಳಗಾಗಿರುವವರು ಅದು ಸಾಂದರ್ಭಿಕ ಕುಡಿತ ಅಥವಾ ಸಾಮಾಜಿಕ ಕುಡಿತ ಆಗಿರಬೇಕು. ಆದರೆ ಯಾವುದೇ ಕಾರಣಕ್ಕೂ ಮಿತಿಮೀರಬಾರದು. ಅದು ಕೆಟ್ಟದು ಎಂದು ಅವರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ: ಸುಪ್ರೀಂ ಕೋರ್ಟ್ ಮೊರೆ ಹೋದ ಅರವಿಂದ್ ಕೇಜ್ರಿವಾಲ್
ಕಮಲ್ ಹಾಸನ್ ಅವರು ಟಿಎನ್‌ನಲ್ಲಿ ಉಚಿತವಾಗಿ ಲಭ್ಯವಿರುವ ಅಕ್ರಮ ಮದ್ಯಕ್ಕೆ ಎಂಕೆ ಸ್ಟಾಲಿನ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಬದಲು ಅಕ್ರಮ ಕಳ್ಳಭಟ್ಟಿ ದುರಂತದ ಸಂತ್ರಸ್ತರನ್ನು ದೂಷಿಸುತ್ತಿದ್ದಾರೆ ಎಂದು ಅವರು ಬಿಜೆಪಿಯ ಅಮಿತ್ ಮಾಳವಿಯಾ ಆರೋಪಿಸಿದ್ದಾರೆ.
ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆಗೆ ಡಿಎಂಕೆ, ಕಾಂಗ್ರೆಸ್ ಜೊತೆ ಕೈಜೋಡಿಸಲಿದ್ದಾರೆ ಕಮಲ್ ಹಾಸನ್
ಇಂತಹ ಅತಿರೇಕದ ಕಾಮೆಂಟ್ ಮಾಡಲು ಒಬ್ಬರು ಭ್ರಷ್ಟರಾಗಬೇಕು. ಆದರೆ I.N.D.I ಅಲಯನ್ಸ್‌ನಿಂದ ಒಬ್ಬರು ಏನನ್ನು ನಿರೀಕ್ಷಿಸಬಹುದು ಎಂದು ಮಾಳವಿಯಾ ಪ್ರಶ್ನಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:00 pm, Sun, 23 June 24