ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್​ ಕದ ತಟ್ಟಿದ ರಾಜ್ಯಗಳಿವು

|

Updated on: Nov 06, 2023 | 2:04 PM

ರಾಜ್ಯಪಾಲರ ವಿರುದ್ಧ ಮೂರು ರಾಜ್ಯಗಳು ಸುಪ್ರೀಂಕೋರ್ಟ್(Supreme Court)​ ಕದ ತಟ್ಟಿವೆ. ಕೇರಳ, ತಮಿಳುನಾಡು ಹಾಗೂ ಪಂಜಾಬ್ ರಾಜ್ಯಪಾಲರ ವಿರುದ್ಧ ಸುಪ್ರೀಂ ಮೆಟ್ಟಿಲು ಹತ್ತಿವೆ. ರಾಜ್ಯ ಸರ್ಕಾರವು ಅಂಗೀಕರಿಸಿರುವ 8 ಮಸೂದೆಗಳಿಗೆ ಅಂಕಿತ ಹಾಕದ ಕಾರಣ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಕೇರಳ ಸರ್ಕಾರ ಸುಪ್ರೀಂಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ.

ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್​ ಕದ ತಟ್ಟಿದ ರಾಜ್ಯಗಳಿವು
ಸುಪ್ರೀಂಕೋರ್ಟ್​
Follow us on

ರಾಜ್ಯಪಾಲರ ವಿರುದ್ಧ ಮೂರು ರಾಜ್ಯಗಳು ಸುಪ್ರೀಂಕೋರ್ಟ್(Supreme Court)​ ಕದ ತಟ್ಟಿವೆ. ಕೇರಳ, ತಮಿಳುನಾಡು ಹಾಗೂ ಪಂಜಾಬ್ ರಾಜ್ಯಪಾಲರ ವಿರುದ್ಧ ಸುಪ್ರೀಂ ಮೆಟ್ಟಿಲು ಹತ್ತಿವೆ. ರಾಜ್ಯ ಸರ್ಕಾರವು ಅಂಗೀಕರಿಸಿರುವ 8 ಮಸೂದೆಗಳಿಗೆ ಅಂಕಿತ ಹಾಕದ ಕಾರಣ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಕೇರಳ ಸರ್ಕಾರ ಸುಪ್ರೀಂಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ.

8 ಮಸೂದೆಗಳ ಪೈಕಿ ಮೂರು ವಿಧೇಯಕಗಳು ಎರಡು ವರ್ಷಗಳಿಂದ ರಾಜ್ಯಪಾಲರ ಮುಂದೆ ಬಾಕಿ ಉಳಿದಿವೆ ಎಂದು ಹೇಳಲಾಗಿದೆ.ಅರ್ಜಿಯಲ್ಲಿ ರಾಜ್ಯಪಾಲರ ನಡವಳಿಕೆಯು ಕಾನೂನು ಮತ್ತು ಪ್ರಜಾಪ್ರಭುತ್ವಕ್ಕೆ ಮತ್ತು ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಈ

ನಡವಳಿಕೆಯು ಜನರ ಹಕ್ಕುಗಳ ಉಲ್ಲಂಘಿಸಿದಂತಾಗುತ್ತದೆ, ಮಸೂದೆಗಳ ಮೂಲಕ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿರುವ ಕಲ್ಯಾಣ ಕ್ರಮಗಳಿಗೆ ಇದು ಅಡ್ಡಿಯಾಗುತ್ತದೆ ಎಂದು ತಿಳಿಸಲಾಗಿದೆ. ಕೇರಳ, ರಾಜ್ಯಪಾಲರು ಮಸೂದೆಗಳಿಗೆ ಒಪ್ಪಿಗೆ ನೀಡಲು ನಿರಾಕರಿಸಿರುವುದರ ವಿರುದ್ಧ ನ್ಯಾಯಾಲಯದ ಮೊರೆ ಹೋದ ಮೂರನೇ ರಾಜ್ಯವಾಗಿದೆ. ಈ ಮೊದಲು ಪಂಜಾಬ್ ಮತ್ತು ತೆಲಂಗಾಣ ರಾಜ್ಯಗಳು ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಮತ್ತಷ್ಟು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲ ಆರಿಫ್ ಖಾನ್ ನಿರಾಕರಿಸಿದ್ದರಿಂದ ಸುಪ್ರೀಂ ಮೊರೆ ಹೋಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಪಂಜಾಬ್ ಸರ್ಕಾರ

ಇನ್ನು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳಿಗೆ ಅಂಕಿತ ಹಾಕುವಲ್ಲಿ ರಾಜ್ಯಪಾಲರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಹಾಗೂ ಪಂಜಾಬ್ ಸರ್ಕಾರಗಳು ಸುಪ್ರೀಂಕೋರ್ಟ್​ ಮೊರೆ ಹೋಗಿವೆ.
ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ ಅವರು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು, ಬಾಹ್ಯ ಕಾರಣಗಳಿಂದಾಗಿ ಅಸಂವಿಧಾನಿಕ ರೀತಿಯಲ್ಲಿ ಆಡಳಿತಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಚಾರದಲ್ಲಿ ನ್ಯಾಯಾಲಯವು ಮಧ್ಯ ಪ್ರವೇಶಿಸಬೇಕೆಂದು ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಮನವಿ ಮಾಡಿತ್ತು.

ತಮಿಳುನಾಡು ಸರ್ಕಾರ
ಹಾಗೆಯೇ ತಮಿಳುನಾಡು ಸರ್ಕಾರದ ಪರ ವಕೀಲ ಶಬರೀಶ್ ಸುಬ್ರಮಣಿಯನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ ತಮಿಳುನಾಡು ಸರ್ಕಾರ ಅಂಗೀಕರಿಸಿದ್ದ 27 ಮಸೂದೆಗಳ ಪೈಕಿ 22 ಮಸೂದೆಗಳನ್ನು ಮಾತ್ರ ಪಂಜಾಬ್ ರಾಜ್ಯಪಾಲರಾದ ಬನ್ವರಿಲಾಲ್ ಪುರೋಹಿತ್ ಸಮ್ಮತಿ ಸೂಚಿಸಿದ್ದಾರೆ, ಉಳಿದ 12 ಮಸೂದೆಗಳಿಗೆ ಅಂಕಿತ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಸರ್ಕಾವು ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 2:01 pm, Mon, 6 November 23